Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದ ಜನರ ಬದುಕಿನಲ್ಲಿ ಮಠ-ಪೀಠಗಳ...

ರಾಜ್ಯದ ಜನರ ಬದುಕಿನಲ್ಲಿ ಮಠ-ಪೀಠಗಳ ಪಾತ್ರ, ಪ್ರಭಾವ ಅಗಾಧ: ಸಿಎಂ ಯಡಿಯೂರಪ್ಪ

`ಶಿವಪದ ರತ್ನಕೋಶ' ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ28 July 2020 6:42 PM IST
share
ರಾಜ್ಯದ ಜನರ ಬದುಕಿನಲ್ಲಿ ಮಠ-ಪೀಠಗಳ ಪಾತ್ರ, ಪ್ರಭಾವ ಅಗಾಧ: ಸಿಎಂ ಯಡಿಯೂರಪ್ಪ

ಬೆಂಗಳೂರು, ಜುಲೈ 28: ಕರ್ನಾಟಕ ರಾಜ್ಯದ ಜನರ ಬದುಕಿನಲ್ಲಿ ಮಠ-ಪೀಠಗಳ ಪಾತ್ರ, ಪ್ರಭಾವ ಅಗಾಧವಾದುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಮಠ-ಪೀಠಗಳ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಮಂಗಳವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರಿನ ಶಿವರಾತ್ರೀಶ್ವರ ಮಹಾವಿದ್ಯಾಪೀಠ ಹೊರತಂದಿರುವ `ಶಿವಪದ ರತ್ನಕೋಶ' ಗ್ರಂಥವನ್ನು ಆನ್‍ಲೈನ್ ಮೂಲಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಶಿವಪದ ರತ್ನಕೋಶವನ್ನು ರೂಪಿಸುವ ಮೂಲಕ ವಿದ್ವತ್ಪೂರ್ಣವೂ, ಪರಿಶ್ರಮದಾಯಕವೂ ಆದ ಈ ಮಹತ್ಕಾರ್ಯವನ್ನು ನೆರವೇರಿಸಿದ ಸುತ್ತೂರು ಶ್ರೀಮಠಕ್ಕೆ ಹಾಗೂ ಸಂಪಾದಕ ಮಂಡಳಿಗೆ ಅಭಿನಂದನೆಗಳು ಎಂದರು.

ಶಿವಪದ ರತ್ನಕೋಶವು ಶೈವಾಗಮಗಳು, ವಚನ ಸಾಹಿತ್ಯ, ವೀರಶೈವ ಕಾವ್ಯ, ಅಪರೂಪದ ರೂಢಿಯ ಪದಗಳನ್ನು ಒಳಗೊಂಡು ರೂಪುಗೊಂಡಿದೆ. ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳವರ ಗೌರವ ಸಂಪಾದಕತ್ವದಲ್ಲಿ ಹಾಗೂ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳ ಮಾರ್ಗದರ್ಶನದಲ್ಲಿ ಮೂಡಿಬಂದಿರುವ ಈ ಗ್ರಂಥವು ಶಿವಧರ್ಮ, ಸಂಸ್ಕೃತಿ, ಸಿದ್ಧಾಂತಗಳನ್ನು ಯಥಾವತ್ತಾಗಿ ಪರಿಚಯಿಸುವ ಸಾವಿರ ಪುಟಗಳ ಬೃಹತ್ ಪದ ಭಂಡಾರವಾಗಿದೆ. ಈ ಅಮೂಲ್ಯ ಸಂಪತ್ತಿನ ಸದುಪಯೋಗವನ್ನು ಕನ್ನಡಿಗರು ಪಡೆಯಲಿ. ಶಿವರಾತ್ರೀಶ್ವರ ಗ್ರಂಥಮಾಲೆಯೂ ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಮೌಲಿಕ ಗ್ರಂಥಗಳನ್ನು ಪ್ರಕಟಿಸಿರುವ ಕೀರ್ತಿ ಸಂಸ್ಥೆಗೆ ಸಲ್ಲುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು.

ಸಭೆಯಲ್ಲಿ ಸುತ್ತೂರು ಮಠದ ಜೆ.ಎಸ್.ಎಸ್.ವಿದ್ಯಾಪೀಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳು, ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮಿಗಳು, ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮಿಗಳು, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಪ್ರತಾಪ್ ಸಿಂಹ, ಸಿಎಂ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X