ಸಾಹಿತಿ ಇಂದಿರಾ ಹೆಗ್ಗಡೆಗೆ ಸರೋಜಾದೇವಿ ದತ್ತಿ ಪ್ರಶಸ್ತಿ ಪ್ರದಾನ

ಬೆಂಗಳೂರು, ಜು.28: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಲೇಖಕಿ ಇಂದಿರಾ ಹೆಗ್ಗಡೆರವರ ಕೊಡುಗೆ ಶ್ಲಾಘನೀಯವಾದುದ್ದೆಂದು ಕನ್ನಡ ಸಾಹಿತ್ಯ ಪರಿಷತ್‍ನ ಅಧ್ಯಕ್ಷ ಮನು ಬಳಿಗಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಹಿರಿಯ ಸಾಹಿತಿ ಇಂದಿರಾ ಹೆಗ್ಗಡೆರವರ ನಿವಾಸಕ್ಕೆ ತೆರಳಿ 2020ನೇ ಸಾಲಿನ ಡಾ.ಬಿ.ಸರೋಜಾದೇವಿ ಸಾಹಿತ್ಯ ದತ್ತಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಲೋಕಕ್ಕೆ ಇಂದಿರಾರವರು ಅತ್ಯುತ್ತಮ ಕೃತಿಗಳನ್ನು ನೀಡಿದ್ದಾರೆ ಎಂದರು.
ಕಾದಂಬರಿ, ಸಣ್ಣಕತೆ, ಕಾವ್ಯ, ಜೀವನ ಚರಿತ್ರೆ ಹಾಗೂ ಸಂಶೋಧನಾ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯಾಸಕ್ತರ ಮನಸೆಳೆದಿದ್ದಾರೆ. ಅವರ ಬಹುತೇಕ ಕೃತಿಗಳು ಮರುಮುದ್ರಣ ಹಾಗೂ ಬೇರೆ ಭಾಷೆಗಳಿಗೆ ಅನುವಾದಗೊಂಡಿರುವುದು ಅವರ ಸಾಹಿತ್ಯದ ಉತ್ಕೃಷ್ಟತೆಗೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದರು. ಈ ವೇಳೆ ಕಸಾಪ ಗೌರವ ಕಾರ್ಯದರ್ಶಿ ವ.ಚ.ಚನ್ನೇಗೌಡ ಉಪಸ್ಥಿತರಿದ್ದರು.
Next Story





