Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ನಡುವೆ ಶಾಲೆಗಳನ್ನು ಪ್ರಾರಂಭಿಸುವ...

ಕೋವಿಡ್ ನಡುವೆ ಶಾಲೆಗಳನ್ನು ಪ್ರಾರಂಭಿಸುವ ಯೋಚನೆ ಇಲ್ಲ: ಸಚಿವ ಸುರೇಶ್‍ ಕುಮಾರ್

ವಾರ್ತಾಭಾರತಿವಾರ್ತಾಭಾರತಿ28 July 2020 10:42 PM IST
share
ಕೋವಿಡ್ ನಡುವೆ ಶಾಲೆಗಳನ್ನು ಪ್ರಾರಂಭಿಸುವ ಯೋಚನೆ ಇಲ್ಲ: ಸಚಿವ ಸುರೇಶ್‍ ಕುಮಾರ್

ಬೆಂಗಳೂರು, ಜು.28: ಕೋವಿಡ್ ಆತಂಕದ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಯೋಚನೆ ಇಲ್ಲ. ಆದರೆ, ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ರೀತಿಯಿಂದಲೂ ಪ್ರಯತ್ನ ನಡೆಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ಮಂಗಳವಾರ ಕೊರೋನ ಸೋಂಕಿನ ಪರಿಸ್ಥಿತಿಯಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದಲ್ಲಿ ತೊಡಗಿಸಿಕೊಂಡಿರುವ ಸರಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಿಗದಿತ ವೇಳೆಯಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಸಾಧ್ಯವಾಗದ ಪರಿಸ್ಥಿತಿ ಇದೇ ಮೊದಲ ಬಾರಿಗೆ ಬಂದಿದೆ. ಇಂತಹ ಸಂದರ್ಭದಲ್ಲೂ ಮಕ್ಕಳು ಕಲಿಕೆಯಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತಹ ಎಲ್ಲ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಠಾರ ಶಾಲೆ, ಪಡಶಾಲೆ, ಮನೆಶಾಲೆ, ತಂತ್ರಜ್ಞಾನಾಧಾರಿತ ಶಿಕ್ಷಣ, ಆಕಾಶವಾಣಿ, ಚಂದನ ದೂರದರ್ಶನ ವಾಹಿನಿ, ಶಿಕ್ಷಣ ಇಲಾಖೆಯ ಚಾನೆಲ್ ಸೇರಿದಂತೆ ಲಭ್ಯವಾಗಬಹುದಾದ ಎಲ್ಲ ಅವಕಾಶವನ್ನೂ ಮುಕ್ತವಾಗಿರಿಸಿಕೊಂಡು ಮಕ್ಕಳ ಕಲಿಕೆಯನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಮಕ್ಕಳ ಕಲಿಕೆಯ ಹಿತದೃಷ್ಟಿಯಿಂದ ಸರಕಾರೇತರ ಸಂಸ್ಥೆಗಳು ನೀಡಿರುವ ಎಲ್ಲ ಸಲಹೆಗಳನ್ನು ಕ್ರೂಢೀಕರಿಸಿ ಆಯಾ ಸಂದರ್ಭ, ಆಯಾ ಪ್ರದೇಶಕ್ಕನುಗುಣವಾಗಿ ಕಾರ್ಯಕ್ರಮಗಳನ್ನು ಜಾರಿ ಮಾಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಶಿಕ್ಷಣ ತಜ್ಞರಾದ ಎಂ.ಕೆ.ಶ್ರೀಧರ್, ಡಾ.ಗುರುರಾಜ ಖರ್ಜಗಿ, ಡಾ.ನಿರಂಜನಾರಾಧ್ಯ ಸೇರಿದಂತೆ ಅಜೀಂ ಪ್ರೇಮ್‍ಜಿ ಪ್ರತಿಷ್ಠಾನ, ಗ್ರಾಮ್ಸ್, ಅಕ್ಷರ ಫೌಂಡೇಷನ್, ಯೂನಿಸೆಫ್, ಶಿಕ್ಷಣ ಸಿಇಇ, ಪೋರ್ತ್ ಫೌಂಡೇಷನ್, ಪ್ರಥಮ್, ಪ್ರಜಾಯತ್ನ, ಅಗಸ್ತ್ಯ ಸೇರಿದಂತೆ ಹಲವಾರು ಸಂಸ್ಥೆಗಳ ಪ್ರತಿನಿಧಿಗಳು ಸಂವಾದಲ್ಲಿ ಭಾಗವಹಿಸಿದ್ದವು.

ಸಂವಾದದ ಮುಖ್ಯಾಂಶಗಳು

-ಯೂಟ್ಯೂಬ್, ವಾಟ್ಸ್ ಆ್ಯಪ್ ಸೇರಿದಂತೆ ಯಾವುದರ ಮೂಲಕವಾದರೂ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು.

-ಈ ಹಂತದಲ್ಲಿ ಪಠ್ಯವೇ ಮುಖ್ಯವಲ್ಲ. ಕಲಿಕೆಯ ಅಂತರವನ್ನು ನಿವಾರಿಸುವುದು ಮುಖ್ಯವಾಗಬೇಕು.

-ಸಮುದಾಯ ಆಧಾರಿತ ಕೇಂದ್ರಗಳು, ನೆರೆಹೊರೆ ಮಕ್ಕಳ ಗುಂಪು, ಗ್ರಾಮದಲ್ಲಿರುವ ಶಿಕ್ಷಕರು, ಶಿಕ್ಷಕ ಪದವೀಧರರು, ಶಿಕ್ಷಣ ತರಬೇತಿ ಪಡೆದವರು, ಸ್ವಯಂ ಸೇವಕರನ್ನು ಈ ಹಂತದಲ್ಲಿ ಬಳಸಿಕೊಳ್ಳಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X