Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಠ್ಯಗಳ ಕಡಿತ ಇನ್ನೂ ಅಂತಿಮವಾಗಿಲ್ಲ:...

ಪಠ್ಯಗಳ ಕಡಿತ ಇನ್ನೂ ಅಂತಿಮವಾಗಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ29 July 2020 6:36 PM IST
share
ಪಠ್ಯಗಳ ಕಡಿತ ಇನ್ನೂ ಅಂತಿಮವಾಗಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು, ಜು.29: ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೆ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳನ್ನು ಗಮನಿಸಿದ್ದು, ಈ ಶೈಕ್ಷಣಿಕ ವರ್ಷ ಪ್ರಾರಂಭವಾಗದಿರುವುದರಿಂದ ನಮಗೆ ಎಷ್ಟು ದಿನಗಳು ದೊರೆಯುತ್ತವೆಂಬುದು ಇನ್ನೂ ಅಸ್ಪಷ್ಟವಾಗಿರುವುದರಿಂದ ಪಠ್ಯಕ್ರಮ(ಸಿಲೆಬಸ್)ವನ್ನು ಅಂತಿಮಗೊಳಿಸಿಲ್ಲ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಲಭ್ಯ ಅವಧಿಯ ಆಧಾರದ ಮೇಲೆ ಮಾಡಲಾಗುವ ಪಠ್ಯ ಕಡಿತವು ವೈಜ್ಞಾನಿಕವಾಗಿರಲಿದ್ದು, ಯಾವುದೇ ಪಠ್ಯವನ್ನು ಅನಗತ್ಯವಾಗಿ ಕಡಿತ ಮಾಡುವುದಿಲ್ಲ. ಹಾಗಾಗಿ ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲ ಎಂದು ಅವರು ಹೇಳಿದ್ದಾರೆ.

ಈ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಾಗಬಹುದಾದ ಬೋಧನಾ ಅವಧಿ, ಸಮೂಹ ಮಾಧ್ಯಮಗಳು ಅಥವಾ ತಂತ್ರಜ್ಞಾನಾಧಾರಿತ ಬೋಧನೆಗೆ ಕಡ್ಡಾಯವಾಗಿ ಅಳವಡಿಸಿಕೊಳ್ಳಬಹುದಾದ ಪಠ್ಯಗಳನ್ನು ಗುರುತಿಸಿ ಇಲಾಖೆಯ ತಂತ್ರಜ್ಞಾನಾಧಾರಿತ ಕಲಿಕಾ ನೀತಿಗನುಗುಣವಾಗಿ ಪಠ್ಯ ಬೋಧನೆಯ ಮಾದರಿಗಳನ್ನು ರಚನೆ ಮಾಡಲು ಇಲಾಖಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಎಲ್ಲ ಕ್ರಮಗಳು ಅಂತಿಮಗೊಳ್ಳುವ ಪೂರ್ವದಲ್ಲಿಯೇ ಅಚಾತುರ್ಯದಿಂದ ಇಲಾಖೆಯ ಜಾಲತಾಣದಲ್ಲಿ ಅನುಮೋದಿತವಾಗದ ಪಠ್ಯಾಂಶಗಳನ್ನು ಪ್ರಕಟಿಸಲಾಗಿದೆ. ಇದನ್ನು ಕೂಡಲೇ ಹಿಂಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸುರೇಶ್‍ ಕುಮಾರ್ ತಿಳಿಸಿದ್ದಾರೆ.

ಇತಿಹಾಸಕ್ಕೆ ಸಂಬಂಧಿಸಿದಂತೆ ಯಾವುದೇ ವ್ಯಕ್ತಿಯ, ದಾಖಲೆಯ, ಸಂಗತಿಯ ಐತಿಹ್ಯವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ. ನಮ್ಮ ಸರಕಾರವು ಸಮಾಜವನ್ನು ಕಟ್ಟುವ ಕೆಲಸ ಮಾಡುತ್ತದೆಯೇ ವಿನಾ ಕೆಡವುವ ಕೆಲಸವನ್ನು ಮಾಡುವುದಿಲ್ಲ. ಅನಾವಶ್ಯಕ ರಾಜಕೀಯ ಗೊಂದಲಗಳಿಗೆ ಅವಕಾಶ ಕಲ್ಪಿಸಬೇಕಿಲ್ಲ ಎಂದು ಸುರೇಶ್‍ ಕುಮಾರ್ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X