Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಾಯು ಮಾಲಿನ್ಯದಿಂದ ಜನರ 2 ವರ್ಷಗಳ...

ವಾಯು ಮಾಲಿನ್ಯದಿಂದ ಜನರ 2 ವರ್ಷಗಳ ಆಯುಷ್ಯ ನಷ್ಟ: ಅಧ್ಯಯನ ವರದಿ

ವಾರ್ತಾಭಾರತಿವಾರ್ತಾಭಾರತಿ29 July 2020 9:33 PM IST
share
ವಾಯು ಮಾಲಿನ್ಯದಿಂದ ಜನರ 2 ವರ್ಷಗಳ ಆಯುಷ್ಯ ನಷ್ಟ: ಅಧ್ಯಯನ ವರದಿ

ಪ್ಯಾರಿಸ್ (ಫ್ರಾನ್ಸ್), ಜು. 29: ವಾಯುಮಾಲಿನ್ಯವು ಭೂಮಿಯ ಮೇಲಿನ ಪ್ರತಿಯೊಬ್ಬ ಪುರುಷ, ಮಹಿಳೆ ಮತ್ತು ಮಗುವಿನ ಆಯುಷ್ಯವನ್ನು ಸುಮಾರು ಎರಡು ವರ್ಷಗಳಷ್ಟು ಕಡಿಮೆ ಮಾಡುತ್ತದೆ ಎಂದು ಮಂಗಳವಾರ ಬಿಡುಗಡೆಗೊಂಡ ವೈಜ್ಞಾನಿಕ ಅಧ್ಯಯನವೊಂದು ಹೇಳಿದೆ.

‘‘ಕಳಪೆ ವಾಯು ಗುಣಮಟ್ಟವು ಮಾನವ ಆರೋಗ್ಯಕ್ಕೆ ಅತ್ಯಂತ ದೊಡ್ಡ ಅಪಾಯವಾಗಿದೆ’’ ಎಂಬುದಾಗಿ ಪರಿಣತರು ತಮ್ಮ ಅಧ್ಯಯನ ವರದಿ ‘ಏರ್ ಕ್ವಾಲಿಟಿ ಲೈಫ್ ಇಂಡೆಕ್ಸ್’ನಲ್ಲಿ ತಿಳಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕವನ್ನು ಹತೋಟಿಗೆ ತರುವ ಲಸಿಕೆಗಾಗಿ ಜಗತ್ತು ಪರದಾಡುತ್ತಿರುವಾಗ, ವಾಯು ಮಾಲಿನ್ಯವು ಕೋಟ್ಯಂತರ ಜನರ ಆಯುಷ್ಯವನ್ನು ಕಡಿಮೆ ಮಾಡುತ್ತಿದೆ ಹಾಗೂ ಅವರನ್ನು ಕಾಯಿಲೆಗಳ ದವಡೆಗೆ ನೂಕುತ್ತಿದೆ ಎಂದು ಅದು ಹೇಳಿದೆ.

ಮುಖ್ಯವಾಗಿ ಪೆಟ್ರೋಲಿಯಂ ಉತ್ಪನ್ನಗಳನ್ನು ಉರಿಸುವುದರಿಂದ ಉಂಟಾಗುವ ವಾಯು ಮಾಲಿನ್ಯವು ಮಾನವರ ಆರೋಗ್ಯ ಮೇಲೆ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತದೆ ಎಂದು ವರದಿ ಅಭಿಪ್ರಾಯಪಟ್ಟಿದೆ.

ಒಂದು ಕಾಲದಲ್ಲಿ ಜಗತ್ತಿನ ಅತ್ಯಂತ ಮಾಲಿನ್ಯಕಾರಕ ದೇಶಗಳ ಪೈಕಿ ಒಂದಾಗಿದ್ದ ಚೀನಾದಲ್ಲಿ, ವಾಯು ಮಾಲಿನ್ಯಕ್ಕೆ ಪ್ರಮುಖ ಕಾರಣವಾಗಿರುವ ಪರ್ಟಿಕ್ಯುಲೇಟ್ ಮ್ಯಾಟರ್‌ನ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಕಡಿತವಾಗಿದ್ದರೂ, ಅಲ್ಲಿನ ಒಟ್ಟಾರೆ ವಾಯು ಮಾಲಿನ್ಯದ ಮಟ್ಟ ಕಳೆದ ಎರಡು ದಶಕಗಳಲ್ಲಿ ಸ್ಥಿರವಾಗಿ ನಿಂತಿದೆ ಎನ್ನುವುದನ್ನು ಅಧ್ಯಯನ ಕಂಡುಕೊಂಡಿದೆ.

ಭಾರತ ಮತ್ತು ಬಾಂಗ್ಲಾದೇಶಗಳಂಥ ದೇಶಗಳಲ್ಲಿ ವಾಯು ಮಾಲಿನ್ಯವು ಎಷ್ಟು ತೀವ್ರವಾಗಿದೆ ಎಂದರೆ, ಅದರ ಪರಿಣಾಮವಾಗಿ ಕೆಲವು ಪ್ರದೇಶಗಳಲ್ಲಿ ಜನರ ಸರಾಸರಿ ಆಯುಷ್ಯವು 10 ವರ್ಷಗಳಷ್ಟು ಕಡಿಮೆಯಾಗಿದೆ.

ಹೆಚ್ಚಿನ ಮಾನವರು ಉಸಿರಾಡುವ ಗಾಳಿಯ ಗುಣಮಟ್ಟವು ಅವರ ಆರೋಗ್ಯಕ್ಕೆ ಕೋವಿಡ್-19ಕ್ಕಿಂತಲೂ ಹೆಚ್ಚಿನ ಅಪಾಯವನ್ನು ಒಡ್ಡುತ್ತಿದೆ ಎಂದು ಸಂಶೋಧನೆಯಲ್ಲಿ ಭಾಗವಹಿಸಿರುವ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X