Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ರಾಷ್ಟ್ರೀಯ ಶಿಕ್ಷಣ ನೀತಿ:...

ನೂತನ ರಾಷ್ಟ್ರೀಯ ಶಿಕ್ಷಣ ನೀತಿ: ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿ- ಡಿಸಿಎಂ ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ29 July 2020 11:24 PM IST
share
ನೂತನ ರಾಷ್ಟ್ರೀಯ ಶಿಕ್ಷಣ ನೀತಿ: ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿ- ಡಿಸಿಎಂ ಅಶ್ವತ್ಥ ನಾರಾಯಣ

ಬೆಂಗಳೂರು, ಜು.29: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ನವ ಭಾರತವನ್ನು ನಿರ್ಮಾಣ ಮಾಡುವ ಪ್ರಬಲ ಶಕ್ತಿ ಹೊಂದಿದ್ದು, ಆಧುನಿಕ ದೃಷ್ಟಿಕೋನ, ದೇಶದ ಅಗತ್ಯಗಳು, ಜಾಗತಿಕ ಸವಾಲು. ಹೀಗೆ ಎಲ್ಲ ಅಂಶಗಳನ್ನು ಪರಿಗಣನೆಗೆ ತೆಗೆದುಕೊಂಡು ರೂಪಿಸಲಾಗಿರುವ ಪರಿಪೂರ್ಣ ಶಿಕ್ಷಣ ನೀತಿ ಇದಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಕೇಂದ್ರ ಸರಕಾರ ಬುಧವಾರ ಪ್ರಕಟಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ವಾಗತಿಸಿರುವ ಅವರು, ಹಲವು ವರ್ಷಗಳಿಂದ ನಮ್ಮ ಶಿಕ್ಷಣ ನೀತಿಯೇ ಬದಲಾಗಿಲ್ಲ ಅಂದರೆ ಅಚ್ಚರಿ ಆಗುತ್ತದೆ. ನಮಗೆಲ್ಲರಿಗೂ ಗೊತ್ತಿರುವಂತೆ ಶಿಕ್ಷಣ ಎನ್ನವುದು ಮನುಕುಲವನ್ನು ಮುನ್ನಡೆಸುವ ಚಾಲಕ ಶಕ್ತಿ. ಸಶಕ್ತ ಸಮಾಜದ ಆತ್ಮ. ಯಾವುದೇ ದೇಶವನ್ನು ಬಲಿಷ್ಠವಾಗಿ, ಭವ್ಯವಾಗಿ ನಿರ್ಮಾಣ ಮಾಡಬಲ್ಲ ಶಕ್ತಿ ಅದಕ್ಕೆ ಮಾತ್ರ ಇದೆ. ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಕ್ರಾಂತಿಕಾರಕ ಹೆಜ್ಜೆ ಇಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿ: ಈಗಾಗಲೇ ರಾಜ್ಯ ಸರಕಾರವು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಲು, ಆ ಬಗ್ಗೆ ಸೂಕ್ತ ಸಲಹೆ-ಸಹಕಾರ ನೀಡಲು ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿ.ರಂಗನಾಥ್ ನೇತೃತ್ವದಲ್ಲಿ ಕಾರ್ಯಪಡೆ ರಚಿಸಿದೆ. ಕೇಂದ್ರ ಸರಕಾರವು ಜಾರಿ ಮಾಡಿದ ಕೂಡಲೇ ರಾಜ್ಯದಲ್ಲಿಯೂ ನೀತಿಯನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

1986ರಲ್ಲಿ ಮೊದಲಿಗೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಲಾಗಿತ್ತು. ಬಳಿಕ 1992ರಲ್ಲಿ ಆ ನೀತಿಯನ್ನು ಪರಿಷ್ಕರಿಸಲಾಯಿತು. ಭಾರತವು ಎಲ್ಲ ರಂಗಗಳಲ್ಲೂ ಶರವೇಗದಲ್ಲಿ ಮುನ್ನಡೆಯುತ್ತಿದೆ. ತಾಂತ್ರಿಕವಾಗಿ, ವೈಜ್ಞಾನಿಕವಾಗಿ ನಾಗಾಲೋಟದಲ್ಲಿ ಸಾಗುತ್ತಿದೆ. ಇಂಥ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ಶಿಕ್ಷಣ ಪದ್ಧತಿ ಇರಲೇಬೇಕು. ನರೇಂದ್ರ ಮೋದಿ ಸರಕಾರ ಈ ಅಗತ್ಯವನ್ನು ಅರ್ಥ ಮಾಡಿಕೊಂಡಿದೆ. ಅಲ್ಲದೆ, ’ಮಾನವ ಸಂಪನ್ಮೂಲ ಸಚಿವಾಲಯ’ವನ್ನು ’ಶಿಕ್ಷಣ ಸಚಿವಾಲಯ’ ಎಂದು ಮರು ನಾಮಕರಣ ಮಾಡಿರುವುದು ಅರ್ಥಪೂರ್ಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಶಿಕ್ಷಣ ಪದ್ಧತಿಯಲ್ಲಿ ಏಕರೂಪತೆ ತರುವುದು, ಸರ್ವರಿಗೂ ಶಿಕ್ಷಣ ಎನ್ನುವ ಮಾತಿನಂತೆ ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡುವುದು, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣದ ಹಂತದಿಂದಲೇ ಅತ್ಯುತ್ತಮ ಶಿಕ್ಷಣ ಸಿಗಲಿ ಎಂಬುದು ನೀತಿಯ ಆಶಯವಾಗಿದೆ. ಜತೆಗೆ, ಬಹುಭಾಷೆಗಳನ್ನು ಗೌರವಿಸುವ ಅಂಶಗಳಿರುವುದು ನಾವೆಲ್ಲರೂ ಗಮನಿಸಬೇಕಾದ ಅಂಶ. ಪ್ರತಿಯೊಬ್ಬರೂ ಹೊಸ ಶಿಕ್ಷಣ ನೀತಿಯನ್ನು ಸ್ವಾಗತಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X