ಉಡುಪಿ ಜಿಲ್ಲೆಯ 10 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಆರಂಭ: ಜಿಲ್ಲಾಧಿಕಾರಿಯಿಂದ ಪರಿಶೀಲನೆ

ಉಡುಪಿ, ಜು.30: ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಯು ಉಡುಪಿ ಜಿಲ್ಲೆಯ ಒಟ್ಟು 10 ಕೇಂದ್ರಗಳಲ್ಲಿ ಇಂದು ಆರಂಭಗೊಂಡಿದೆ.
ಜಿಲ್ಲೆಯಲ್ಲಿ ಒಟ್ಟು 1,853 ಬಾಲಕರು ಹಾಗೂ 2061 ಬಾಲಕಿಯರು ಸೇರಿದಂತೆ ಒಟ್ಟು 3915 ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ. ಬೆಳಗ್ಗೆ ಜೀವಶಾಸ್ತ್ರ ಪರೀಕ್ಷೆ ನಡೆದಿದ್ದು, ಮಧ್ಯಾಹ್ನ ಗಣಿತ ಪರೀಕ್ಷೆ ನಡೆಯಲಿದೆ.
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಬೆಳಗ್ಗೆ ಕಾರ್ಕಳ ಭುವನೇಂದ್ರ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ ಸಿಇಟಿ ಪರೀಕ್ಷಾ ಕೇಂದ್ರ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದರು.

Next Story





