Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ...

ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಸಹೋದರಿಗೆ ಕೊಲೆ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ30 July 2020 6:02 PM IST
share

ಮಂಗಳೂರು, ಜು.30: ರಾಜ್ಯಾದ್ಯಂತ ತಲ್ಲಣ ಸೃಷ್ಟಿಸಿದ್ದ ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಸಲ್ಲಿಸಿದ್ದ ಅರ್ಜಿಯ ಬೆನ್ನಲ್ಲೇ ಕುಟುಂಬಕ್ಕೆ ವಿದೇಶದಿಂದ ಕೊಲೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ತಿಳಿದುಬಂದಿದೆ.

ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ವಿನಾಯಕ ಬಾಳಿಗಾ ಸಹೋದರಿ ಅನುರಾಧಾ ಅವರು ಮಂಗಳೂರು ಪೊಲೀಸ್ ಆಯುಕ್ತರಿಗೆ ಪ್ರಕರಣದ ತನಿಖೆ ನಡೆಸಲು ಅರ್ಜಿ ಸಲ್ಲಿಸಿದ್ದರು. ಪೊಲೀಸ್ ಆಯುಕ್ತಾಲಯ ಕಚೇರಿಗೆ ಜು.28ರಂದು ಸಂಜೆ 5 ಗಂಟೆಗೆ ಹಾಜರಾಗುವಂತೆ ಬಾಳಿಗಾ ಸಹೋದರಿಗೆ ಸೂಚಿಸಲಾಗಿತ್ತು. ಇದರ ಹಿಂದಿನ ರಾತ್ರಿ (ಜು.27) ಬೆದರಿಕೆ ಕರೆಗಳು ಬಂದಿವೆ ಎಂಬ ಮಾಹಿತಿ ಲಭ್ಯವಾಗಿದೆ.

ದುಬೈನಿಂದ ಅನಾಮಧೇಯ ನಂಬರ್‌ಗಳಿಂದ ಕರೆಗಳು ಬಂದಿದ್ದು, ತುಳು ಭಾಷೆಯಲ್ಲಿ ಕೊಲೆ ಬೆದರಿಕೆ ಒಡ್ಡಿದ್ದಾರೆ. ಅಲ್ಲದೆ, ಪ್ರಕರಣದ ಆರೋಪಿಗಳ ವಿರುದ್ಧ ದೂರು ನೀಡಲು ಮುಂದಾದರೆ ಜೀವ ಸಹಿತ ಬಿಡುವುದಿಲ್ಲವೆಂದೂ ನಿರಂತರವಾಗಿ ಹಲವು ಬಾರಿ ಬೆದರಿಕೆ ಹಾಕಲಾಗಿದೆ. ಬೆದರಿಕೆಯೊಡ್ಡಿದ ಬಗ್ಗೆ ಹಾಗೂ ವಿದೇಶದಿಂದ ಬಂದ ಫೋನ್ ಕರೆಗಳ ವಿವರವನ್ನು ಪೊಲೀಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಬಾಳಿಗಾ ಸಹೋದರಿ ಉಲ್ಲೇಖಿಸಿದ್ದಾರೆ. ಪೊಲೀಸ್ ಆಯಕ್ತರಿಗೆ ದೂರು ನೀಡಿ ಮನೆಗೆ ವಾಪಸಾಗುತ್ತಿದ್ದ ಸಂದರ್ಭದಲ್ಲೂ ಮಲೇಶಿಯಾದಿಂದ ಬೆದರಿಕೆ ಒಡ್ಡುವ ಕರೆಗಳು ಪುನರಾವರ್ತನೆಯಾಗಿವೆ ಎಂದು ದೇಶಪ್ರೇಮಿ ಸಂಘಟನೆಗಳ ಒಕ್ಕೂಟಗಳ ಡಾ.ನರೇಂದ್ರ ನಾಯಕ್ ತಿಳಿಸಿದ್ದಾರೆ.

ಮೂರು ದಿನಗಳ ಹಿಂದೆ ದಕ್ಷಿಣ ಕನ್ನಡ ನಿರ್ಗಮಿತ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಒಡ್ಡಿದ್ದ ಬೆನ್ನಲ್ಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಯಿತು. ಆದರೆ, ಬಾಳಿಗಾ ಹತ್ಯೆ ಪ್ರಕರಣದ ದೂರುದಾರರು ಹಾಗೂ ಪ್ರಮುಖ ಸಾಕ್ಷಿಗಳಿಗೆ ಕೊಲೆ ಬೆದರಿಕೆ ಒಡ್ಡಿದ ಗಂಭೀರ ಪ್ರಕರಣ ವರದಿಯಾದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಆತಂಕಕಾರಿ ನಡೆಯಾಗಿದೆ. ವಿದೇಶದಿಂದ ಬೆದರಿಕೆ ಒಡ್ಡಿದ ಕರೆಗಳ ನಂಬರ್‌ನ್ನು ಮರೆಮಾಚುವ ದುಷ್ಕೃತ್ಯವೂ ಇಲ್ಲಿ ನಡೆದಿದೆ. ಇಂತಹ ಗಂಭೀರ ಪ್ರಕರಣವನ್ನು ಭೇದಿಸುವುದು ಮಂಗಳೂರು ಪೊಲೀಸರಿಗೆ ಕಷ್ಟವೇನಲ್ಲ ಎಂದು ಡಾ.ನರೇಂದ್ರ ನಾಯಕ್ ತಿಳಿಸಿದ್ದಾರೆ.

ಬಾಳಿಗಾ ಕುಟುಂಬದ ಅಸಹಾಯಕ ಹೆಣ್ಣುಮಗಳು ಸಹೋದರನಿಗೆ ನ್ಯಾಯ ದೊರಕಿಸಿ ಕೊಡಲು ಹಗಲಿರುಳು ಹೋರಾಡುತ್ತಿದ್ದಾಳೆ. ಜಿಎಸ್‌ಬಿ ಸಮುದಾಯಕ್ಕಾಗಿ ಹೋರಾಡಲು ಸಮುದಾಯದ ಸಂಘಟನೆಗಳು ಸಾಕಷ್ಟು ಸಂಖ್ಯೆಯಲ್ಲಿವೆ. ಆದರೆ ಅದೇ ಸಮುದಾಯದ ಬಾಳಿಗಾ ಕುಟುಂಬದ ಪರವಾಗಿ ಯಾವುದೇ ಸಂಘಟನೆ ನ್ಯಾಯ ದೊರಕಿಸಿ ಕೊಡಿ ಎನ್ನುವ ಮಾತನ್ನು ಹೇಳುತ್ತಿಲ್ಲ ಎಂದು ಡಾ.ನರೇಂದ್ರ ನಾಯಕ್ ಬೇಸರ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣ ಫೇಸ್‌ಬುಕ್, ಯೂಟ್ಯೂಬ್‌ನಲ್ಲಿ ಜಿಎಸ್‌ಬಿ ಸಮುದಾಯದ ಹಲವು ಗ್ರೂಪ್, ಚಾನೆಲ್‌ಗಳಿವೆ. ಸಮುದಾಯಕ್ಕೆ ಸಂಬಂಧಿಸಿದ ಹಲವು ವೀಡಿಯೊಗಳನ್ನು ಅಪ್‌ಲೋಡ್ ಆಗುತ್ತವೆ. ಆದರೂ ಬಾಳಿಗಾ ಕುಟುಂಬದ ಅಸಹಾಯಕ ಮಹಿಳೆಯ ಪರ ಧ್ವನಿಗೂಡಿಸಲು ಯಾರೂ ಮುಂದೆ ಬರುತ್ತಿಲ್ಲ. ಪ್ರಕರಣದ ಪ್ರಧಾನ ಆರೋಪಿಯು ಪ್ರಬಲನೆನಿಸಿಕೊಂಡದ್ದೇ ಇಂತಹ ಬೆಳವಣಿಗೆಗೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.

ಮಂಗಳೂರು ನಗರದ ವೆಂಕಟ್ರಮಣ ದೇವಸ್ಥಾನ, ಕಾಶಿ ಮಠ ಮತ್ತು ಸಂಸ್ಥೆಗಳಲ್ಲಿ ನಡೆದಿದೆ ಎನ್ನಲಾದ ಲೆಕ್ಕ ಅವ್ಯವಹಾರದ ಬಗ್ಗೆ ಆರ್‌ಟಿಐ ಕಾರ್ಯಕರ್ತ ವಿನಾಯಕ್ ಬಾಳಿಗಾ ಧ್ವನಿ ಎತ್ತಿದ್ದರು. ಪಾರದರ್ಶಕ ಹಣ ಸಂಗ್ರಹದ ಬಗ್ಗೆ ಹೆಚ್ಚಿನ ಹೊಣೆಗಾರಿಕೆ ತರಲು ತೀವ್ರ ಹೋರಾಟದ ಮೂಲಕ ಶ್ರಮಿಸಿದ್ದರು.
ವಿನಾಯಕ್ ಬಾಳಿಗಾ ಅವರು ಬಿಜೆಪಿ ಬೂತ್ ಮಟ್ಟದ ಕಾರ್ಯಕರ್ತರೂ ಆಗಿದ್ದರು. 2016ರ ಮಾರ್ಚ್ 21ರಂದು ನಸುಕಿನ ಜಾವ 5:30ರ ಸುಮಾರಿಗೆ ತನ್ನ ಮನೆಯ ಎದುರೇ ವಿನಾಯಕ್ ಬಾಳಿಗಾ ಬರ್ಬರವಾಗಿ ಹತ್ಯೆಗೊಳಗಾಗಿದ್ದರು. ಏಕೈಕ ಪುತ್ರನ ಧಾರುಣ ಸಾವಿನ ಶೋಕದಲ್ಲೇ ವೃದ್ಧ ಪೋಷಕರು ನೊಂದು ಬದುಕು ಕೊನೆಗೊಳಿಸಿದರು.

ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದಾರೆ. ಪ್ರಕರಣದ ತನಿಖೆ ಇನ್ನೂ ಆರಂಭವಾಗದ ಕಾರಣ ವಿಚಾರಣೆ ಪೂರ್ಣಗೊಂಡಿಲ್ಲ. ಬಾಳಿಗಾ ಕುಟುಂಬದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರ ನೇಮಕ ತಡೆಯಲೂ ಆರೋಪಿಗಳು ಯತ್ನಿಸಿದ್ದರು. ಆದಾಗ್ಯೂ, ಸಹೋದರನಿಗೆ ನ್ಯಾಯ ದೊರಕಿಸಿ ಕೊಡಲು ಸಹೋದರಿಯರಾದ ಅನುರಾಧಾ, ಹರ್ಷಾ ತೀವ್ರವಾಗಿ ಹೆಣಗಾಡುತ್ತಿದ್ದಾರೆ ಎಂದು ಡಾ.ನರೇಂದ್ರ ನಾಯಕ್ ತಿಳಿಸಿದ್ದಾರೆ.

ವಿನಾಯಕ ಬಾಳಿಗಾ ಸಹೋದರಿಗೆ ಬಂದ ಕೊಲೆ ಬೆದರಿಕೆ ಕರೆಗಳ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ತನಿಖೆ ಮಾಡುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ.
- ಡಾ.ನರೇಂದ್ರ ನಾಯಕ್, ದೇಶಪ್ರೇಮಿ ಸಂಘಟನೆಗಳ ಒಕ್ಕೂಟದ ಮುಖಂಡ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X