ವಿನಾಯಕ ಬಾಳಿಗಾ ಸಹೋದರಿಗೆ ಕೊಲೆ ಬೆದರಿಕೆ: ಕುಟುಂಬಕ್ಕೆ ಧೈರ್ಯ ತುಂಬಿದ ದೇಶ ಪ್ರೇಮಿ ಸಂಘಟನೆಗಳ ಒಕ್ಕೂಟ

ಮಂಗಳೂರು, ಜು.30: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ತನಿಖೆ ಪೂರ್ಣಗೊಳಿಸಲು ಒತ್ತಾಯಿಸಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ಬಳಿಕ ಬಾಳಿಗಾ ಸೋದರಿ ಅನುರಾಧ ಬಾಳಿಗಾ ಅವರಿಗೆ ಕೊಲೆ ಬೆದರಿಕೆ ಕರೆಗಳು ಬಂದಿದ್ದವು ಎನ್ನಲಾಗಿದೆ. ಈ ಹಿನ್ನೆಲೆ ಅವರ ಮನೆಗೆ ತೆರಳಿ ದೇಶಪ್ರೇಮಿ ಸಂಘಟನೆಗಳ ಒಕ್ಕೂಟದಿಂದ ಕುಟುಂಬಕ್ಕೆ ಧೈರ್ಯ ತುಂಬಲಾಯಿತು.
ನಿಯೋಗದಲ್ಲಿ ಒಕ್ಕೂಟದ ಪ್ರೊ.ನರೇಂದ್ರ ನಾಯಕ್, ಮುನೀರ್ ಕಾಟಿಪಳ್ಳ, ಸಂತೋಷ್ ಬಜಾಲ್, ಪ್ರದೀಪ್ ಉರ್ವ, ಚೇತನ್ ಮತ್ತಿತರರು ಉಪಸ್ಥಿತರಿದ್ದರು.
ಜೀವ ಬೆದರಿಕೆ ಒಡ್ಡುವ ಬಲಾಢ್ಯ ಕ್ರಿಮಿನಲ್‌ಗಳನ್ನು ಪತ್ತೆ ಹಚ್ಚುವಂತೆ ಎಲ್ಲರೂ ಧ್ವನಿ ಎತ್ತಬೇಕು. ಬಾಳಿಗಾ ಅವರ ಅವಿವಾಹಿತ ಸಹೋದರಿಯರ ಜೊತೆ ನಿಲ್ಲಬೇಕು ಎಂದು ಮುನೀರ್ ಕಾಟಿಪಳ್ಳ ಮನವಿ ಮಾಡಿದ್ದಾರೆ.

Next Story





