Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಹೋರಾಟಕ್ಕೆ ಸಹಕರಿಸದ ಖಾಸಗಿ...

ಕೋವಿಡ್ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ30 July 2020 11:23 PM IST
share
ಕೋವಿಡ್ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ: ಡಾ.ಕೆ.ಸುಧಾಕರ್

ಬೆಂಗಳೂರು, ಜು.30: ರಾಜ್ಯದಲ್ಲಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಸರಕಾರಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆಗೂ ಚರ್ಚಿಸುವುದಾಗಿ ಅವರು ತಿಳಿಸಿದ್ದಾರೆ.

ಕೋವಿಡ್‍ಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಪರಿಶೀಲಿಸಲು ಸಚಿವರ ನೇತೃತ್ವದಲ್ಲಿ ಗುರುವಾರ ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಈ ಕುರಿತು ಚರ್ಚೆಯಾಯಿತು. ಸರಕಾರಿ ಆಸ್ಪತ್ರೆಗಳಿಗೆ ಕೊರೋನ ರೋಗಿಗಳು ದಾಖಲಾಗುತ್ತಿದ್ದಾರೆ. ಆದರೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾತಿ ನಿರಾಕರಿಸುವುದು, ಹೆಚ್ಚು ಶುಲ್ಕ ವಿಧಿಸುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಲು ಕೆಪಿಎಂಇ ಕಾಯ್ದೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆಯಾ ವಲಯದ ಜಂಟಿ ಆಯುಕ್ತರಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ. ಇದನ್ನು ಬಳಸಿಕೊಂಡು ಅಧಿಕಾರಿಗಳು ಕ್ರಮ ಜರುಗಿಸಬೇಕು. ಕ್ರಮ ಕೈಗೊಳ್ಳಲು ಪೊಲೀಸರ ಸಹಕಾರ ಪಡೆಯಬಹುದು. ಈ ಕುರಿತು ಮುಖ್ಯಮಂತ್ರಿ ಬಳಿಯೂ ಚರ್ಚೆ ಮಾಡುತ್ತೇನೆ ಎಂದು ಸುಧಾಕರ್ ತಿಳಿಸಿದರು.

ಬಿಬಿಎಂಪಿಯ ಪ್ರತಿ ವಲಯದ ಜಂಟಿ ಆಯುಕ್ತರೊಂದಿಗೆ ಮಾತನಾಡಿದ ಅವರು, ಕೊರೋನ ಪತ್ತೆ ಪರೀಕ್ಷೆಯ ಬಗ್ಗೆ ಮಾಹಿತಿ ಪಡೆದರು. ಪ್ರತಿ ವಲಯದಲ್ಲಿ ಈಗ ನಡೆಯುತ್ತಿರುವ ಪರೀಕ್ಷೆ ಸಂಖ್ಯೆಯನ್ನು ಮೂರರಿಂದ ನಾಲ್ಕು ಪಟ್ಟು ಹೆಚ್ಚಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಕೊರೋನ ಪತ್ತೆ ಪರೀಕ್ಷೆಗೆ ಸಿಬ್ಬಂದಿ ಕೊರತೆ ಎದುರಾಗಿದೆ. ಇದರಿಂದಾಗಿ ಪರೀಕ್ಷೆಗಳ ಸಂಖ್ಯೆ ಕಡಿಮೆಯಾಗಿದೆ. ಇದಕ್ಕಾಗಿ ಮೆಡಿಕಲ್ ಕಾಲೇಜುಗಳ ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ವಿಜ್ಞಾನ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಬಹುದು. ಕೋವಿಡ್ ವಿರುದ್ಧದ ಹೋರಾಟದಲ್ಲಿ ಭಾಗಿಯಾಗುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹವಾಗಿ ಇಂಟರ್ನಲ್ ಅಂಕಗಳನ್ನು ನೀಡಬೇಕು. ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಕೊರೋನ ಕಾರ್ಯದಲ್ಲಿ ಭಾಗಿಯಾಗುವಂತೆ ಸೂಚಿಸಬೇಕು ಎಂದು ಸುಧಾಕರ್ ಹೇಳಿದರು.

ಬಿಬಿಎಂಪಿಯ ಪ್ರತಿ ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಿ ಕೋವಿಡ್ ನಿಯಂತ್ರಣ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಇನ್ನು 2-3 ದಿನಗಳಲ್ಲಿ ಟಾಸ್ಕ್ ಫೋರ್ಸ್ ತಂಡಗಳು ರಚನೆಯಾಗಬೇಕು. ಬಿಬಿಎಂಪಿ ವಲಯ ಮಟ್ಟದಲ್ಲಿ ನಿಗದಿಪಡಿಸಿದಂತೆ ಕೊರೋನ ಪರೀಕ್ಷೆ ನಡೆಯುತ್ತಿಲ್ಲ. ವಲಯದ ಜಂಟಿ ಆಯುಕ್ತರು ತಮಗೆ ನೀಡಿದ ಗುರಿಯನ್ನು ತಲುಪಬೇಕು. ಪ್ರತಿ ದಿನ ನಡೆಸಿದ ಪರೀಕ್ಷೆಯ ಸಂಖ್ಯೆಯನ್ನು ಹಿರಿಯ ಅಧಿಕಾರಿಗಳಿಗೆ ತಿಳಿಸಬೇಕು ಎಂದು ಅವರು ಹೇಳಿದರು.

ಲಕ್ಷಣ ರಹಿತ ರೋಗಿಗಳನ್ನು (ಎ ಸಿಂಪ್ಟಮೆಟಿಕ್) ಆಸ್ಪತ್ರೆಗೆ ಸೇರಿಸಬಾರದು. ಅಂತಹವರಿಗೆ ಮನೆ ಆರೈಕೆಗೆ ವ್ಯವಸ್ಥೆ ಮಾಡಬೇಕು. ವೃದ್ಧರು, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿರುವವರನ್ನು ಗುರುತಿಸಿ ರಿವರ್ಸ್ ಕ್ವಾರಂಟೈನ್‍ಗೆ ಒಳಪಡಿಸಬೇಕು ಎಂದು ಸುಧಾಕರ್ ಸೂಚಿಸಿದರು.

ವಿಡಿಯೋ ಕಾನ್ಫರೆನ್ಸ್‍ನಲ್ಲಿ ಹಿರಿಯ ಅಧಿಕಾರಿ ಶಾಲಿನಿ ರಜನೀಶ್, ತುಷಾರ್ ಗಿರಿನಾಥ್, ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X