Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ನಿರ್ಬಂಧ ಸಡಿಲಿಕೆ ,...

ಲಾಕ್‌ಡೌನ್ ನಿರ್ಬಂಧ ಸಡಿಲಿಕೆ , ಟೆಸ್ಟಿಂಗ್ ಹೆಚ್ಚಳ, ಜುಲೈನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಲು ಕಾರಣ : ವರದಿ

ವಾರ್ತಾಭಾರತಿವಾರ್ತಾಭಾರತಿ1 Aug 2020 1:31 PM IST
share
ಲಾಕ್‌ಡೌನ್ ನಿರ್ಬಂಧ ಸಡಿಲಿಕೆ , ಟೆಸ್ಟಿಂಗ್ ಹೆಚ್ಚಳ, ಜುಲೈನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಲು ಕಾರಣ : ವರದಿ

 ಹೊಸದಿಲ್ಲಿ ಆ. 1:ಲಾಕ್‌ಡೌನ್ ನಿರ್ಬಂಧ ಸಡಿಲಿಕೆ ಹಾಗೂ ಟೆಸ್ಟಿಂಗ್ ಹೆಚ್ಚಳವು ಜುಲೈನಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಲು ಕಾರಣ ಎಂದು 'ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ. ನಿರ್ಬಂಧಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಡಿಲಿಕೆ ಮಾಡಿದ ಕಾರಣ ಚಟುವಟಿಕೆಗಳು ಪುನರಾರಂಭಗೊಂಡಿದ್ದು ಜುಲೈನಲ್ಲಿ ಕೊರೋನ್ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಹರಡಿದೆ.

ಲಾಕ್‌ಡೌನ್ ನಿರ್ಬಂಧಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸಡಿಲಿಕೆ ಮಾಡಿದ ಕಾರಣ ಚಟುವಟಿಕೆಗಳು ಪುನರಾರಂಭಗೊಂಡಿದ್ದು ಜುಲೈನಲ್ಲಿ ಕೊರೋನ ವೈರಸ್ ಹೆಚ್ಚಿನ ಪ್ರಮಾಣದಲ್ಲಿ ಹರಡಿದೆ. ಜುಲೈನಲ್ಲಿ ದೇಶದ 11 ಲಕ್ಷಕ್ಕೂ ಹೆಚ್ಚಿನ ಜನರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಜುಲೈ ತಿಂಗಳಲ್ಲಿ ಪ್ರತಿದಿನ 35 ಸಾವಿರಕ್ಕೂ ಅಧಿಕ ಜನರಿಗೆ ಸೋಂಕು ದೃಢಪಟ್ಟಿದೆ. ಕಳೆದ ಮೂರು ದಿನಗಳಲ್ಲಿ ಈ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಪ್ರತಿದಿನವೂ ಈ ಹಿಂದಿಗಿಂತಲೂ ಹೆಚ್ಚು ಸೋಂಕು ಪತ್ತೆಯಾಗುತ್ತಿದೆ.

ಆಂಧ್ರಪ್ರದೇಶದಲ್ಲಿ ಜುಲೈನಲ್ಲಿ ಹೆಚ್ಚು ಕಡಿಮೆ 9 ಪಟ್ಟು ಸೋಂಕು ಹೆಚ್ಚಾಗಿದೆ. ಕರ್ನಾಟಕದಲ್ಲಿ ಇದೇ ಅವಧಿಯಲ್ಲಿ ಸೋಂಕಿತರ ಪ್ರಮಾಣ 7ಕ್ಕೂ ಅಧಿಕ ಪಟ್ಟು ಹೆಚ್ಚಳವಾಗಿದೆ. ಬಿಹಾರ, ಅಸ್ಸಾಂ ಹಾಗೂ ಕೇರಳದಲ್ಲಿ 4 ಪಟ್ಟು ಹೆಚ್ಚಾಗಿದೆ. ದಿಲ್ಲಿ, ಗುಜರಾತ್ ಹೊರತುಪಡಿಸಿ ಹೆಚ್ಚಿನ ಎಲ್ಲಾ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣಗೊಂಡಿದೆ. ಲಾಕ್‌ಡೌನ್ ನಿರ್ಬಂಧ ಸಡಿಲಿಕೆ ಅಲ್ಲದೆ ಪರೀಕ್ಷೆ ಪ್ರಮಾಣ ಹೆಚ್ಚಳವೂ ಸೋಂಕಿತರ ಪ್ರಮಾಣ ಹೆಚ್ಚಾಗಲು ಪ್ರಮುಖ ಕಾರಣವಾಗಿದೆ.

ಜುಲೈ ಅಂತ್ಯದ ತನಕ ದೇಶದಲ್ಲಿ ಕೇವಲ 88 ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿತ್ತು. ಜುಲೈ ತಿಂಗಳೊಂದರಲ್ಲಿ 1.5 ಕೋಟಿ ಸ್ಯಾಂಪಲ್‌ಗಳ ಪರೀಕ್ಷೆ ನಡೆಸಲಾಗಿದೆ. ಜೂನ್ ಅಂತ್ಯಕ್ಕೆ ಪ್ರತಿದಿನ 2 ಲಕ್ಷ ಜನರ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ಅದು 5 ಲಕ್ಷ ತಲುಪಿದೆ. ಗುರುವಾರ ಒಂದೇ ದಿನ 6.42 ಲಕ್ಷ ಟೆಸ್ಟ್‌ಗಳನ್ನು ಮಾಡಲಾಗಿದೆ. ಇದು ಈ ತನಕದ ಗರಿಷ್ಟ ಪರೀಕ್ಷೆ.

ಟೆಸ್ಟಿಂಗ್ ಪ್ರಮಾಣದ ಹೆಚ್ಚಳದಿಂದ ಕಾಯಿಲೆ ಹರಡುವುದನ್ನು ತಡೆಯಬಹುದು. ಹೆಚ್ಚು ಹೆಚ್ಚು ಸೋಂಕಿತರು ಪತ್ತೆಯಾದರೆ ಅವರನ್ನು ಪ್ರತ್ಯೇಕವಾಗಿ ಹಾಗೂ ಕ್ವಾರಂಟೈನ್‌ನಲ್ಲಿ ಇಡಬಹುದು. ಆಗ ಸೋಂಕು ಹರಡುವ ಪ್ರಮಾಣ ಕಡಿಮೆಯಾಗುತ್ತದೆ. ಇದನ್ನು ನಾವು ದಿಲ್ಲಿಯಲ್ಲಿ ಕಾಣಬಹುದು. ಪರೀಕ್ಷೆಗಳು ಹೆಚ್ಚಾದಾಗ ಸೋಂಕಿತರ ಪ್ರಮಾಣವು ಗಣನೀಯವಾಗಿ ಏರುತ್ತದೆ. ಕೆಲವು ವಾರಗಳ ಬಳಿಕ ಹೊಸ ಪ್ರಕರಣ ಕಡಿಮೆಯಾಗಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X