ದ್ವಿಚಕ್ರ ವಾಹನದಿಂದ ಬಿದ್ದು ಫುಡ್ ಡೆಲಿವರಿ ಬಾಯ್ ಸಾವು
ಬೆಂಗಳೂರು, ಆ.1: ದ್ವಿಚಕ್ರ ವಾಹನದಿಂದ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಪುಡ್ ಡೆಲಿವರಿ ಬಾಯ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಮೃತಪಟ್ಟಿರುವ ಘಟನೆ ಫ್ರೇಜರ್ಟೌನ್ ವ್ಯಾಪ್ತಿಯಲ್ಲಿ ನಡೆದಿದೆ.
ಮೃತನನ್ನು ಮೂಲತಃ ಪಶ್ಚಿಮ ಬಂಗಾಳದ ನಿವಾಸಿ ಸುದೀಪ್ ಮಂಡಲ್(29) ಎಂದು ಗುರುತಿಸಲಾಗಿದೆ.
ಶನಿವಾರ ಬೆಳಗಿನ ಜಾವ ಸುದೀಪ್ ಮಂಡಲ್ ಫುಡ್ ಡೆಲಿವರಿ ಮಾಡಲು ದ್ವಿಚಕ್ರ ವಾಹನದಲ್ಲಿ ಅತಿ ವೇಗವಾಗಿ ಸಂಚರಿಸುತ್ತಿದ್ದಾಗ ಅಸೈ ರಸ್ತೆಯ ಎನ್ಇಜಿ ಗೇಟ್ ಸಮೀಪ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದು, ಪರಿಣಾಮ ತಲೆಗೆ ತೀವ್ರವಾಗಿ ಗಾಯವಾಗಿತ್ತು. ನಂತರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
Next Story