ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕಾಲೇಜುಗಳ ಸಂಯೋಜನೆಗೆ ಅರ್ಜಿ ಆಹ್ವಾನ
ಬೆಂಗಳೂರು, ಆ.2: ಬೆಂಗಳೂರು ಉತ್ತರ ವಿಶ್ವವಿದ್ಯಾಲಯವು 2020-21ನೇ ಸಾಲಿಗೆ ವಿಶ್ವವಿದ್ಯಾಲಯದ ಭೌಗೋಳಿಕ ವ್ಯಾಪ್ತಿಯಲ್ಲಿ ಬರುವ ಕಾಲೇಜು ಮತ್ತು ಅರ್ಹ ಶಿಕ್ಷಣ ಸಂಸ್ಥೆಗಳಿಂದ ವಿವಿಧ ರೀತಿಯ ಸಂಯೋಜನೆಗೆ ಅರ್ಜಿ ಸಲ್ಲಿಸಲು ಆ.8ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಗಳು, ಬೆಂಗಳೂರು ಜಿಲ್ಲಾ ವ್ಯಾಪ್ತಿಯ ಕೆ.ಆರ್.ಪುರ. ಸಿ.ವಿ.ರಾಮನಗರ, ಪುಲಕೇಶಿನಗರ, ಮಹದೇವಪುರ, ಸರ್ವಜ್ಞನಗರ ಕ್ಷೇತ್ರಗಳಲ್ಲಿರುವ ಕಾಲೇಜುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಂಡಶುಲ್ಕವಿಲ್ಲದೆ ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಅಫ್‍ಲೋಡ್ ಮಾಡಿ ಮುದ್ರಿತ ಪ್ರತಿಗಳನ್ನು ವಿಶ್ವವಿದ್ಯಾಲಯಕ್ಕೆ ಸಲ್ಲಿಸಲು ಆ.8ರವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ http://bnu.ac.in ಸಂಪರ್ಕಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.
Next Story





