Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಪಾಯಕಾರಿ ಸ್ಥಳದಲ್ಲಿ ಕಟ್ಟಡ...

ಅಪಾಯಕಾರಿ ಸ್ಥಳದಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ : ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ5 Aug 2020 10:37 PM IST
share
ಅಪಾಯಕಾರಿ ಸ್ಥಳದಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ : ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ

ಮಂಗಳೂರು, ಆ. 5: ಜಿಲ್ಲೆಯಲ್ಲಿ ಅಪಾಯಕಾರಿ ಜಾಗಗಳಲ್ಲಿ ಮನೆ, ಕಟ್ಟಡ, ವಾಣಿಜ್ಯ ಸಂಕೀರ್ಣ ಸೇರಿದಂತೆ ಯಾವುದೇ ರೀತಿಯ ನಿರ್ಮಾಣ ಚಟುವಟಿಕೆಗಳಿಗೆ ಅನುಮತಿ ನೀಡದಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆ, ನೆರೆ ಸೇರಿದಂತೆ ಪ್ರಾಕೃತಿಕ ದುರ್ಘಟನೆಗಳು ನಡೆದಾಗ ಇಂತಹ ಸ್ಥಳಗಳಲ್ಲಿ ನಿರ್ಮಿಸಿದ ಕಟ್ಟಡಗಳೇ ಕುಸಿದು, ಜೀವಹಾನಿಗೂ ಕಾರಣ ವಾಗುತ್ತಿವೆ. ಗುಡ್ಡವನ್ನು ಅವೈಜ್ಞಾನಿಕವಾಗಿ ಕಡಿದು ಕಟ್ಟಡ ನಿರ್ಮಾಣ ಮಾಡುವ ಪ್ರವೃತಿ ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿವೆ. ಇವು ಹೆಚ್ಚು ಅಪಾಯಕಾರಿಯಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ನಿರ್ಮಾಣ ಚಟುವಟಿಕೆಗೆ ಪರವಾನಿಗೆ ನೀಡದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಮಳೆ ತೀವ್ರವಾಗುತ್ತಿದ್ದು, ಅಪಾಯಕಾರಿ ಮನೆ, ತಡೆಗೋಡೆ, ಕಟ್ಟಡ, ವಿದ್ಯುತ್ ಕಂಬಗಳನ್ನು ಗುರುತಿಸಿ ಅವುಗಳ ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂದೆ ತಲೆದೋರಬಹುದಾದ ಅಪಾಯಗಳನ್ನು ಕಂಡುಹಿಡಿದರೆ, ಅನಿರೀಕ್ಷಿತ ಘಟನೆಗಳನ್ನು ಯಶಸ್ವಿಯಾಗಿ ಎದುರಿ ಸಬಹುದಾಗಿದೆ. ಪರಿಹಾರ ಕಾರ್ಯಾಚರಣೆಯಲ್ಲಿ ಯಾವುದೇ ವಿಳಂಬಗತಿ ಸಹಿಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಳೆದ ವರ್ಷ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ಸಿಕ್ಕಿದರೂ, ಇನ್ನು ಮನೆ ಪೂರ್ಣಗೊಳ್ಳದಿರುವುದು ಕಂಡುಬಂದಿದೆ. ಈ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಫಲಾನುಭವಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪರಿಹಾರ ಮೊತ್ತವನ್ನು ಸಕಾಲದಲ್ಲಿ ವಿತರಿಸುವಂತೆ ಸೂಚಿಸಿದರು.

ಮಳೆಗಾಲದಲ್ಲಿ ಡೆಂಗ್, ಚಿಕನ್‌ಗುನ್ಯಾ, ಇಲಿಜ್ವರದಂತಹ ಸಾಂಕ್ರಾಮಿಕ ಕಾಯಿಲೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಕೋವಿಡ್ ವ್ಯಾಪಿಸಿದ್ದರೂ ಇತರ ಕಾಯಿಲೆಗಳ ನಿಯಂತ್ರಣಕ್ಕೂ ಆದ್ಯತೆ ನೀಡುವಂತೆ ಡಾ. ಕೆ.ವಿ. ರಾಜೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಕರಿಕಲನ್, ಡಿಸಿಪಿ ಅರುಣಾಂಶ ಗಿರಿ, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X