Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್...

ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಕಡ್ಡಾಯ, ತಪ್ಪಿದಲ್ಲಿ ದಂಡ: ಡಿಸಿ ಡಾ. ಕೆ.ವಿ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ5 Aug 2020 10:41 PM IST
share

ಮಂಗಳೂರು, ಆ.5: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಮುಂಜಾಗೃತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಆದೇಶಿದ್ದಾರೆ.

ಮುಖದ ಹೊದಿಕೆ: ಸಾರ್ವಜನಿಕ ಸ್ಥಳ, ಕಚೇರಿ ಮತ್ತು ಪ್ರಯಾಣದ ಸಮಯದಲ್ಲಿ ಮುಖದ ಹೊದಿಕೆಯನ್ನು ಧರಿಸುವುದು ಕಡ್ಡಾಯವಾಗಿದೆ. ಅಗತ್ಯಾನುಸಾರ ಮುಖದ ಹೊದಿಕೆಯನ್ನು ಧರಿಸದಿದ್ದಲ್ಲಿ ನಗರ ಪ್ರದೇಶಗಳಲ್ಲಿ 200 ರೂ. ಮತ್ತು ಇನ್ನುಳಿದ ಪ್ರದೇಶಗಳಲ್ಲಿ 100 ರೂ. ದಂಡ ವಿಧಿಸುವ ಅವಕಾಶವಿದೆ.

ಸುರಕ್ಷಿತ ಅಂತರ: ಪ್ರತಿಯೊಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಕನಿಷ್ಠ ಆರು ಅಡಿ ಅಂತರವನ್ನು (2 ಗಜ ಅಂತರ) ಕಾಯ್ದುಕೊಳ್ಳಬೇಕು.

ಗುಂಪುಗೂಡುವಿಕೆ: ಬೃಹತ್ ಸಾರ್ವಜನಿಕ ಸಭೆಗಳು ಮತ್ತು ಒಟ್ಟುಗೂಡುವಿಕೆ ನಿಷೇಧವನ್ನು ಮುಂದುವರಿಸಲಾಗಿದೆ. ಮದುವೆ ಸಂಬಂಧಿತ ಕೂಟಗಳಲ್ಲಿ ಅತಿಥಿಗಳ ಸಂಖ್ಯೆ 50 ಮೀರಿರಬಾರದು. ಶವಸಂಸ್ಕಾರ/ಅಂತಿಮ ವಿಧಿ ಸಂಬಂಧಿತ ಕಾರ್ಯಗಳಿಗೆ ವ್ಯಕ್ತಿಗಳ ಸಂಖ್ಯೆ 20 ಮೀರಿರಬಾರದು.

ಸ್ಕ್ರೀನಿಂಗ್-ನೈರ್ಮಲ್ಯ: ಕೆಲಸದ ಸಂಪೂರ್ಣ ಆವರಣ, ಸಾಮಾನ್ಯ ಸೌಲಭ್ಯಗಳು ಮತ್ತು ಮಾನವ ಸಂಪರ್ಕಕ್ಕೆ ಬರುವ ಎಲ್ಲ ಅಂಶಗಳಿಗೆ ಆಗಾಗ್ಗೆ ನೈರ್ಮಲ್ಯೀಕರಣ ಮಾಡಬೇಕು. ಇದನ್ನು ಕೆಲಸದ ಪಾಳಿಯ ಮಧ್ಯದಲ್ಲಿ ಸಹ ಖಾತರಿಪಡಿಸಿಕೊಳ್ಳಬೇಕು.

ಕೆಲಸದ ಸ್ಥಳಗಳಲ್ಲಿ ವ್ಯಕ್ತಿಗಳ ನಡುವೆ, ಪಾಳಿಗಳ ನಡುವೆ, ಊಟದ ವಿರಾಮ ಮೊದಲಾದವುಗಳಲ್ಲಿ ಎಲ್ಲ ವ್ಯಕ್ತಿಗಳು ಸಾಕಷ್ಟು ಅಂತರ ಕಾಯ್ದು ಕೊಂಡಿರುವ ಬಗ್ಗೆ ಮೇಲ್ವಿಚಾರಕರು ಖಾತರಿಪಡಿಸಿಕೊಳ್ಳಬೇಕು.

ರಾಷ್ಟ್ರೀಯ ನಿರ್ದೇಶನಗಳನ್ನು ಪಾಲಿಸದೆ ವ್ಯತಿರಿಕ್ತವಾಗಿ ವರ್ತಿಸಿದರೆ ಅಂತವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾದೇಶ 202 ಕಲಂ 5 (3), 6(1), (2) ರನ್ವಯ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 57ರನ್ವಯ ಕಾನೂನು ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X