ಉಡುಪಿ: ಜಿಲ್ಲಾ ನೋಡಲ್ ಅಧಿಕಾರಿಗೆ ಕೋವಿಡ್-19 ಪಾಸಿಟಿವ್ ದೃಢ
ಉಡುಪಿ, ಆ.6: ಉಡುಪಿ ಜಿಲ್ಲಾ ಕೋವಿಡ್-19 ನೋಡೆಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಪ್ರಶಾಂತ್ ಭಟ್ ಬುಧವಾರ ಕೊರೋನ ಸೋಂಕಿಗೆ ಪಾಸಿಟಿವ್ ಆಗಿದ್ದಾರೆ.
ಕೊರೋನ ಪ್ರಾರಂಭದ ದಿನದಿಂದಲೂ ಇವರು ನೋಡೆಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಇವರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿರುವ ಡಾ.ಸುಧೀರ್ಚಂದ್ರ ಸೂಡ ಹೋಂ ಕ್ವಾರಂಟೈನ್ಗೆ ತೆರಳಿದ್ದಾರೆ.
ಡಾ.ಭಟ್ ಕಳೆದ ನಾಲ್ಕೂವರೆ ತಿಂಗಳಿನಿಂದ ನೋಡೆಲ್ ಅಧಿಕಾರಿಯಾಗಿ ಜಿಲ್ಲೆಯ ಕೊರೋನ ಸೋಂಕಿತರ ಪ್ರತಿಯೊಂದು ಅಂಕಿಅಂಶಗಳೊಂದಿಗೆ ಚಿಕಿತ್ಸೆಯ ಉಸ್ತುವಾರಿ ಸಹಿತ ಮಹತ್ತರ ಜವಾಬ್ದಾರಿ ನಿರ್ವಹಿಸುತ್ತಿದ್ದರು.
Next Story