Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯದ ಪ್ರವಾಹ ಪರಿಸ್ಥಿತಿ ಎದುರಿಸಲು...

ರಾಜ್ಯದ ಪ್ರವಾಹ ಪರಿಸ್ಥಿತಿ ಎದುರಿಸಲು ಸೂಕ್ತ ಕ್ರಮ: ಕಂದಾಯ ಸಚಿವ ಆರ್.ಅಶೋಕ್

'ಮಲೆನಾಡು-ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್'

ವಾರ್ತಾಭಾರತಿವಾರ್ತಾಭಾರತಿ6 Aug 2020 4:57 PM IST
share
ರಾಜ್ಯದ ಪ್ರವಾಹ ಪರಿಸ್ಥಿತಿ ಎದುರಿಸಲು ಸೂಕ್ತ ಕ್ರಮ: ಕಂದಾಯ ಸಚಿವ ಆರ್.ಅಶೋಕ್

ಬೆಂಗಳೂರು, ಆ. 6: ರಾಜ್ಯದಲ್ಲಿ ವ್ಯಾಪಕ ಮಳೆ ಹಿನ್ನಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕ್ರಮ ಕೈಗೊಂಡಿದ್ದು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಇಂದಿನಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ.

ಗುರುವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮಲೆನಾಡು ಮತ್ತು ಕರಾವಳಿ ಸೇರಿದಂತೆ ಪ್ರವಾಹ ಪರಿಸ್ಥಿತಿ ಇರುವ 19 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್, ಕಳೆದ ಸಾಲಿನಲ್ಲಿಯೂ ಇದೇ ತಿಂಗಳಿನಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಪ್ರಸ್ತುತ ಪರಿಸ್ಥಿತಿ ಕುರಿತು ಮುಂದಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಏಪ್ರಿಲ್‍ನಿಂದ ವಿವಿಧ ಪೂರ್ವಭಾವಿ ಸಿದ್ಧತೆ ಸಭೆಗಳನ್ನು ಕೈಗೊಳ್ಳಲಾಗಿತ್ತು ಎಂದರು.

ರಾಜ್ಯದ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಮತ್ತು ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರವಾಗಿ ಚರ್ಚಿಸಲಾಗುತ್ತಿದೆ. ಕಾವೇರಿ ತೀರದಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದ್ದು, ಜಲಾಶಯಗಳ ಒಳಹರಿವು ಹೆಚ್ಚಲಿದೆ. ಇಂದು ಮಧ್ಯಾಹ್ನದಿಂದ ನಾನು 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿ ಮಾಹಿತಿ ಪಡೆದು ಮುನ್ನೆಚ್ಚೆರಿಕೆ ವಹಿಸಲು ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ ಭಾಗದಲ್ಲಿ ಕೆಲವು ಮನೆಗಳು ಹಾಳಾಗಿದ್ದು, ಕೂಡಲೇ 10 ಸಾವಿರ ರೂ.ಪರಿಹಾರ ವಿವರಿಸಲು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ಭಾಗದಲ್ಲಿ 150 ಮಿ.ಮೀ ವರೆಗೆ ಮಳೆ, ಮರಗಳು ರಸ್ತೆಗೆ ಉರುಳಿದ್ದು, ಅವುಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವು ಮರಗಳು ಉರುಳಿದ್ದು, ಶಿವಮೊಗ್ಗದ ಕೆಲವು ಭಾಗದಲ್ಲಿ ಹೆಚ್ಚು ಮಳೆಯಾಗಿದೆ. ಹಾಸನದಲ್ಲಿ ಯಾವುದೇ ಹಾನಿ ವರದಿಯಾಗಿಲ್ಲ ಎಂದು ವಿವರ ನೀಡಿದರು.

ಉಳಿದ ಜಿಲ್ಲೆಗಳಲ್ಲಿ ಮರಗಳು ಉರುಳಿದ್ದು ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. ಜುಲೈ 25ರಂದು ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಿರುವ ಯಂತ್ರೋಪಕರಣಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಗ್ರಾಮ ಪಂಚಾಯತಿ ಮಟ್ಟದ ಯೋಜನೆ ರೂಪಿಸಲಾಗಿದೆ. ಎಲ್ಲ ಜಿಲ್ಲೆಗಳಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಶೋಕ್ ಮಾಹಿತಿ ನೀಡಿದರು.

ಮುಂದಿನ ಮೂರು ದಿನಗಳ ಮಳೆ ಮುನ್ಸೂಚನೆ: ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಮುಂದಿನ ಮೂರು ದಿನ ಬಾರಿ ಮಳೆಯಾಗುವುದು ಮುನ್ಸೂಚನೆ ಇದೆ. ಅದೇ ರೀತಿ ಮಲೆನಾಡು ಭಾಗದ ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಹಾಗೂ ಕಲಬುರಗಿಯಲ್ಲಿ ಮಧ್ಯಮ ಮಳೆ, ದಕ್ಷಿಣ ಒಳನಾಡಿನ ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅಶೋಕ್ ತಿಳಿಸಿದರು.

ರಾಜ್ಯದ ಜಲಾಶಯಗಳು ಹಾಗೂ ಮಳೆಹಾನಿ ಕುರಿತು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅಂತರ ರಾಜ್ಯ ತಂಡವು ಮಹಾರಾಷ್ಟ್ರ ಜಲಾಶಯಗಳ ಹೊರಹರಿವಿನ ಬಗ್ಗೆ ಅಧ್ಯಯನ ನಡೆಸಲಿವೆ. ಎನ್‍ಡಿಆರ್‍ಎಫ್ ತಂಡವು ಕೊಡಗು, ಧಾರವಾಡ, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಭೇಟಿ ನೀಡುವುದು. ಎನ್‍ಡಿಆರ್‍ಎಫ್ ತಂಡವು ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಅಶೋಕ್ ವಿವರಿಸಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X