Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಗತ್ಯವಿದ್ದರೆ ಗಂಜಿ ಕೇಂದ್ರ ತೆರೆದು...

ಅಗತ್ಯವಿದ್ದರೆ ಗಂಜಿ ಕೇಂದ್ರ ತೆರೆದು ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿ: ಸಚಿವ ಎಸ್.ಟಿ.ಸೋಮಶೇಖರ್

ವಾರ್ತಾಭಾರತಿವಾರ್ತಾಭಾರತಿ6 Aug 2020 6:21 PM IST
share

ಬೆಂಗಳೂರು, ಆ. 6: ಎರಡು ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕೇರಳದ ವೈನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಗಳು ಅಪಾಯಮಟ್ಟ ಮೀರಿ ಹರಿಯುವ ಸೂಚನೆಗಳಿವೆ. ಇದರಿಂದ ಮೈಸೂರು ಜಿಲ್ಲೆ ಜಲಾಶಯಗಳ ಒಳಹರಿವು ಹೆಚ್ಚಳಗೊಂಡಿದೆ. ಈಗಾಗಲೇ ಜಲಾಶಯಗಳಿಂದ ಅತಿ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳ ಸಹಿತ ಕೆಲವು ಕಡೆ ಪ್ರವಾಹ ಭೀತಿ ಎದುರಾಗಿದ್ದು, ನದಿ ಪಾತ್ರದ ನಾಗರಿಕರು, ಆಸ್ತಿಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕೆಲವು ಕಡೆ ಸೇತುವೆಗಳು ನೀರಿನಿಂದ ಆವೃತವಾಗುವ ಸಾಧ್ಯತೆಗಳೂ ಇದ್ದು, ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಳ್ಳಲಿವೆ. ಈ ಹಿನ್ನೆಲೆಯಲ್ಲಿ ತಂಡಗಳನ್ನು ರಚನೆ ಮಾಡಿ ಅಂತಹ ಸೂಕ್ಷ್ಮ ಪ್ರದೇಶಗಳತ್ತ ಗಮನ ಹರಿಸಬೇಕಿದೆ. ಸಾರ್ವಜನಿಕ ಸಮಸ್ಯೆಗಳಿಗೆ ತುರ್ತು ಸ್ಪಂದಿಸುವ ಮೂಲಕ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ನದಿ ದಂಡೆ ಪ್ರದೇಶಗಳಲ್ಲಿ ಬರುವ ಜನರಲ್ಲಿ ಜಾಗೃತಿ ಹಾಗೂ ಅರಿವು ಮೂಡಿಸಬೇಕು. ಇದಲ್ಲದೆ, ಜಲಾಶಯಗಳಿಗೆ ನೀರು ಬಿಡುವ ಮುಂಚಿತವಾಗಿ ನದಿಪಾತ್ರದ ನಾಗರಿಕರಿಗೆ ಮಾಹಿತಿ ನೀಡಿ ಬೇರೆಡೆ ಸ್ಥಳಾಂತರಗೊಳ್ಳಲು ಸೂಕ್ತ ವ್ಯವಸ್ಥೆ ಕೈಗೊಳ್ಳಬೇಕು ಎಂದು ಸೋಮಶೇಖರ್ ಸಲಹೆ ಮಾಡಿದ್ದಾರೆ.

ಅಗತ್ಯವಿದ್ದರೆ ಗಂಜಿ ಕೇಂದ್ರಗಳನ್ನು ತೆರೆಯುವ ಮೂಲಕ ಸಾರ್ವಜನಿಕರ ರಕ್ಷಣೆಗೆ ಧಾವಿಸಬೇಕು. ಇದೇ ವೇಳೆ ಕೋವಿಡ್-19 ಹಿನ್ನೆಲೆಯಲ್ಲಿ ಅಂತರವನ್ನೂ ಕಾಯ್ದುಕೊಳ್ಳಲು ಕ್ರಮವಹಿಸಬೇಕು. ಜೊತೆಗೆ ಸೂಕ್ತ ವೈದ್ಯಕೀಯ ಸೇವೆಯನ್ನು ನೀಡಲು ಸಿದ್ಧಗೊಳಿಸಿಟ್ಟು ಕೊಳ್ಳಬೇಕು. ಅಲ್ಲದೆ, ಬೆಳೆ ನಾಶ, ಆಸ್ತಿ-ಪಾಸ್ತಿ ಹಾನಿ, ಜೀವಹಾನಿ, ಪ್ರವಾಹ ಸಂಬಂಧಿ ಅವಘಡಗಳಿಗೆ ಸಂಬಂಧಿಸಿದಂತೆ ತ್ವರಿತ ಪರಿಹಾರ ನೀಡಲು ಕ್ರಮವಹಿಸಬೇಕು. ಕಂದಾಯ ಮತ್ತು ನೀರಾವರಿ, ಜೊತೆಗೆ ಇನ್ನಿತರ ಅಗತ್ಯ ಸೇವೆಗಳ ಇಲಾಖೆಗಳ ಅಧಿಕಾರಿಗಳು 24/7 ಮಾದರಿಯಲ್ಲಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಅವರು ಜಿಲ್ಲಾಡಳಿತಕ್ಕೆ ಪ್ರಕಟಣೆಯಲ್ಲಿ ನಿರ್ದೇಶನ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X