Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೋವಿಡ್ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು...

ಕೋವಿಡ್ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆ ನೀಡಲೇಬೇಕು: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ6 Aug 2020 8:08 PM IST
share
ಕೋವಿಡ್ ನಿರ್ವಹಣೆಗೆ ಖಾಸಗಿ ಆಸ್ಪತ್ರೆಗಳು ಶೇ. 50 ಹಾಸಿಗೆ ನೀಡಲೇಬೇಕು: ಸಚಿವ ಕೋಟ

ಮಂಗಳೂರು : ಕೋವಿಡ್ ನಿರ್ವಹಣೆಗಾಗಿ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ತಮ್ಮ ಹಾಸಿಗೆ  ಸಾಮಥ್ಯ೯ದ ಶೇಕಡಾ  50 ರಷ್ಟನ್ನು ಸರಕಾರಕ್ಕೆ ಬಿಟ್ಟು ಕೊಡಲೇಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಗುರುವಾರ ಕೋವಿಡ್ ನಿರ್ವಹಣೆ ಸಂಬಂಧ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರ ಮನವಿ ಮೇರೆಗೆ ಎ.ಜೆ ಆಸ್ಪತ್ರೆ ಹಾಗೂ ಶ್ರೀನಿವಾಸ ವೈದ್ಯಕೀಯ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸಾರ್ವಜನಿಕ ಆರೋಗ್ಯ ರಕ್ಷಣೆ ಸರಕಾರದ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೋನ ಸೋಂಕಿತರ ಚಿಕಿತ್ಸೆಗೆ ಖಾಸಗೀ ಆಸ್ಪತ್ರೆಗಳು ಸರಕಾರದೊಂದಿಗೆ ಸಹಕರಿಸಬೇಕು. ರಾಜ್ಯ ಸರಕಾರವು ಆಯುಷ್ಮಾನ್ ಯೋಜನೆಯಡಿ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಉದ್ದೇಶಿಸಿದೆ. ಅಲ್ಲದೆ ಖಾಸಗಿಯಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೆ ಸರಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡಬೇಕು ಎಂದು ಸಚಿವರು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಿಗೆ ಸರಕಾರದಿಂದ ರ್ಯಾಪಿಡ್ ಕಿಟ್ ಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಉಚಿತವಾಗಿ ಕೋವಿಡ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಸರಕಾರಿ ಆಸ್ಪತ್ರೆಗಳಲ್ಲಿ ಈಗಾಗಲೇ ಈ ಪರೀಕ್ಷೆ ನಡೆಯುತ್ತಿದೆ ಎಂದು ಸಚಿವರು ತಿಳಿಸಿದರು. ಜಿಲ್ಲೆಗೆ ರಾಜ್ಯ ಸರಕಾರವು 50 ವೆಂಟಿಲೇಟರ್ ಗಳನ್ನು ಸರಬರಾಜು ಮಾಡಲಿದೆ ಎಂದರು.

ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಮಾತನಾಡಿ, ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವಿವರ, ಶುಲ್ಕ ಮಾಹಿತಿ, ಆಯುಷ್ಮಾ‌ನ್ ಯೋಜನೆಯ ಸಮರ್ಪಕ ಮಾಹಿತಿಯನ್ನು ರೋಗಿಗಳು ದಾಖಲಾಗುವಾಗಲೇ ನೀಡಬೇಕು. ಆಸ್ಪತ್ರೆಯ ಪ್ರವೇಶ ದ್ವಾರದಲ್ಲಿ ದೊಡ್ಡ ಬೋಡ್೯ ಹಾಕಿ ವಿವರ ನಮೂದಿಸಬೇಕು ಎಂದು ಸೂಚಿಸಿದರು.

ಎಲ್ಲಾ ಮೆಡಿಕಲ್ ಕಾಲೇಜುಗಳು ಪ್ರತೀ ದಿ‌ನ 100 ಮಂದಿಯ ರ್ಯಾಪಿಡ್ ಆಂಟಿಜನ್ ಪರೀಕ್ಷೆಯನ್ನು ಉಚಿತವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಾರ್ವಜನಿಕರಿಗೆ ಆಯುಷ್ಮಾ‌ನ್ ಸೌಲಭ್ಯದ ಮಾಹಿತಿ ನೀಡಲು ಆರೋಗ್ಯ ಇಲಾಖೆ ವತಿಯಿಂದ ಪ್ರತೀ ಮೆಡಿಕಲ್ ಕಾಲೇಜು ಆಸ್ಪತ್ರೆಗಳಲ್ಲಿ ಆರೋಗ್ಯ ಮಿತ್ರ ಕಾರ್ಯಕರ್ತರನ್ನು ನೇಮಿಸಲಾಗಿದ್ದು, ಇವರು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ನಿರ್ಲಕ್ಷ್ಯ ತೋರುವವರ ವಿರುದ್ಧ ಕ್ರಮ‌ ಜರುಗಿಸುವುದಾಗಿ ಜಿಲ್ಲಾಧಿಕಾರಿಗಳು ಎಚ್ಚರಿಸಿದರು.

ಸಭೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ, ಜಿ.ಪಂ.ಸಿಇಒ ಡಾ. ಸೆಲ್ವಮಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಚಂದ್ರ ಬಾಯಾರಿ, ವೆನ್ ಲಾಕ್ ಅಧೀಕ್ಷಕ ಡಾ. ಸದಾಶಿವ,  ಎ.ಜೆ. ಆಸ್ಪತ್ರೆ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ, ಶ್ರೀನಿವಾಸ ಮೆಡಿಕಲ್ ಕಾಲೇಜಿನ ಡೀನ್ ಡಾ. ಉದಯ ಕುಮಾರ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X