Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸುಳ್ಳು ಪ್ರಕರಣ: 6 ಮಾನವಹಕ್ಕು...

ಸುಳ್ಳು ಪ್ರಕರಣ: 6 ಮಾನವಹಕ್ಕು ಹೋರಾಟಗಾರರಿಗೆ 6 ಲ.ರೂ. ನೀಡಲು ಛತ್ತೀಸ್‌ಗಡಕ್ಕೆ ಎನ್ ಎಚ್ ಆರ್ ಸಿ ಆದೇಶ

ವಾರ್ತಾಭಾರತಿವಾರ್ತಾಭಾರತಿ6 Aug 2020 8:09 PM IST
share
ಸುಳ್ಳು ಪ್ರಕರಣ: 6 ಮಾನವಹಕ್ಕು ಹೋರಾಟಗಾರರಿಗೆ 6 ಲ.ರೂ. ನೀಡಲು ಛತ್ತೀಸ್‌ಗಡಕ್ಕೆ ಎನ್ ಎಚ್ ಆರ್ ಸಿ ಆದೇಶ

ಹೊಸದಿಲ್ಲಿ,ಆ.6: ಆರು ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಕ್ಕಾಗಿ ಅವರಿಗೆ ತಲಾ ಒಂದು ಲಕ್ಷ ರೂ.ಗಳ ಪರಿಹಾರ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ನೆಚ್ಚಾರ್ಸಿ)ವು ಛತ್ತೀಸ್‌ಗಡ ಸರಕಾರಕ್ಕೆ ಆದೇಶಿಸಿದೆ.

 2016,ನ.5ರಂದು ಛತ್ತೀಸ್‌ಗಡ ಪೊಲೀಸರು ಸುಕ್ಮಾ ಜಿಲ್ಲೆಯ ನಾಮಾ ಗ್ರಾಮದಲ್ಲಿ ಶ್ಯಾಮನಾಥ ಬಾಘೇಲ್ ಎಂಬಾತನನ್ನು ಹತ್ಯೆ ಮಾಡಿದ ಆರೋಪದಲ್ಲಿ ತಮ್ಮನ್ನು ಬಂಧಿಸಿದ್ದರು. ಆ ಸಂದರ್ಭದಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಬಾಘೇಲ್ ಪತ್ನಿಯ ಲಿಖಿತ ದೂರಿನ ಆಧಾರದಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎನ್ನಲಾಗಿತ್ತು. ಆದರೆ ತಾನು ದೂರಿನಲ್ಲಿ ಯಾರನ್ನೂ ಹೆಸರಿಸಲಿಲ್ಲ ಎಂದು ಬಾಘೇಲ್ ಪತ್ನಿ ಸ್ಪಷ್ಟಪಡಿಸಿದ್ದರು ಎಂದು ಮಾನವ ಹಕ್ಕುಗಳ ಸಮರ್ಥಕರಾದ ಪ್ರೊ.ನಂದಿನಿ ಸುಂದರ, ಅರ್ಚನಾ ಪ್ರಸಾದ,ಮಂಜು ಕಾವಸಿ,ವಿನೀತ ತಿವಾರಿ,ಸಂಜಯ ಪರಾಟೆ ಮತ್ತು ಮಂಗಲರಾಮ ಕರ್ಮಾ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2016,ನ.15ರಂದು ಸರ್ವೋಚ್ಚ ನ್ಯಾಯಾಲಯವು ಈ ಆರೂ ಜನ ಹೋರಾಟಗಾರರಿಗೆ ಬಂಧನದ ವಿರುದ್ಧ ರಕ್ಷಣೆಯನ್ನು ನೀಡಿತ್ತು. ಆದರೆ ಪ್ರಕರಣದ ತನಿಖೆಯನ್ನು ಈವರೆಗೆ ನಡೆಸಲಾಗಿಲ್ಲ ಅಥವಾ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿಲ್ಲ ಎಂದು ಕೋರಿ ಅವರು 2018ರಲ್ಲಿ ಸರ್ವೋಚ್ಚ ನ್ಯಾಯಾಲಯಕ್ಕೆ ಹೊಸದಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಈ ವಿಷಯದಲ್ಲಿ ತನಿಖೆಯನ್ನು ಆರಂಭಿಸಿದ್ದ ಕಾಂಗ್ರೆಸ್ ನೇತೃತ್ವದ ಛತ್ತೀಸ್‌ಗಡ ಸರಕಾರವು 2019,ಫೆಬ್ರವರಿಯಲ್ಲಿ ಎಲ್ಲ ಆರೂ ಜನರು ಅಮಾಯಕರಾಗಿದ್ದಾರೆ ಎಂಬ ನಿರ್ಧಾರಕ್ಕೆ ಬಂದಿತ್ತು.

ಈ ವರ್ಷದ ಫೆಬ್ರವರಿಯಲ್ಲಿ, ಅರ್ಜಿದಾರರ ವಿರುದ್ಧ ಪ್ರಕರಣ ದಾಖಲಿಸಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂಬ ಛತ್ತೀಸ್‌ಗಡ ಪೊಲೀಸರ ಹೇಳಿಕೆಯನ್ನು ಗಮನಕ್ಕೆ ತೆಗೆದುಕೊಂಡಿದ್ದ ಎನ್ನೆಚ್ಚಾರ್ಸಿಯು,ತಮ್ಮ ವಿರುದ್ಧ ಸುಳ್ಳು ದೂರುಗಳನ್ನು ದಾಖಲಿಸಿದ್ದರಿಂದ ಈ ಮಾನವ ಹಕ್ಕುಗಳ ಹೋರಾಟಗಾರರು ಅನುಭವಿಸಿರುವ ಮಾನಸಿಕ ಯಾತನೆಗೆ ಪ್ರತಿಯಾಗಿ ಅವರಿಗೆ ಆರು ವಾರಗಳಲ್ಲಿ ತಲಾ ಒಂದು ಲ.ರೂ.ಗಳನ್ನು ಪಾವತಿಸುವಂತೆ ಛತ್ತೀಸ್‌ಗಡ ಸರಕಾರಕ್ಕೆ ಸೂಚಿಸಿತ್ತು. ಆದರೆ ಈವರೆಗೆ ತಮಗೆ ಪರಿಹಾರವನ್ನು ಪಾವತಿಸಲಾಗಿಲ್ಲ ಎಂದು ಈ ಹೋರಾಟಗಾರರು ತಿಳಿಸಿದ್ದಾರೆ.

ತಮ್ಮ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದ ಪೊಲೀಸ್ ಅಧಿಕಾರಿಗಳ,ವಿಶೇಷವಾಗಿ ಆಗಿನ ಬಸ್ತಾರ್ ಐಜಿಪಿ ಎಸ್‌ಆರ್‌ಪಿ ಕಲ್ಲೂರಿ ಅವರ ವಿರುದ್ಧ ಸರಕಾರವು ಕಾನೂನು ಕ್ರಮಗಳನ್ನು ಜರುಗಿಸುತ್ತದೆ ಎಂದು ಈ ಹೋರಾಟಗಾರರು ತಮ್ಮ ಹೇಳಿಕೆಯಲ್ಲಿ ಆಶಯ ವ್ಯಕ್ತಪಡಿಸಿದ್ದಾರೆ.

ಪ್ರದೇಶದಲ್ಲಿ ಮಾವೋವಾದಿಗಳ ಹಿಂಸಾಚಾರಕ್ಕೆ ಕಡಿವಾಣ ಹಾಕಲು ಛತ್ತೀಸ್‌ಗಡ ಸರಕಾರವೇ ರಚಿಸಿದ್ದ ಸಲ್ವಾ ಜುಡುಂ ಸಾವಿರಾರು ಗ್ರಾಮಸ್ಥರ ಮನೆಗಳನ್ನು ಸುಟ್ಟುಹಾಕಿದ್ದು,ಎನ್ನೆಚ್ಚಾರ್ಸಿಯ 2008ರ ಶಿಫಾರಸುಗಳು ಮತ್ತು ಸರ್ವೋಚ್ಚ ನ್ಯಾಯಾಲಯದ ಪುನರಪಿ ನಿರ್ದೇಶಗಳ ಹೊರತಾಗಿಯೂ ಸಂತ್ರಸ್ತರಿಗೆ ಪರಿಹಾರವನ್ನು ನೀಡಲಾಗಿಲ್ಲ, ಅತ್ಯಾಚಾರ ಮತ್ತು ಕೊಲೆಗಳನ್ನು ನಡೆಸಿದವರ ವಿರುದ್ಧ ಕಾನೂನು ಕ್ರಮವನ್ನೂ ಕೈಗೊಳ್ಳಲಾಗಿಲ್ಲ. 2011,ಜುಲೈನಲ್ಲಿ ಸಲ್ವಾ ಜುಡುಂ ಅನ್ನು ಅಕ್ರಮ ಸಂಘಟನೆ ಎಂದು ಘೋಷಿಸಿದ್ದ ಸರ್ವೋಚ್ಚ ನ್ಯಾಯಾಲಯವು ಅದನ್ನು ವಿಸರ್ಜಿಸುವಂತೆ ಆದೇಶಿಸಿತ್ತು. ಆದರೆ ಛತ್ತೀಸಗಡದಲ್ಲಿ ಕಾರ್ಯಾಚರಿಸುತ್ತಿರುವ ಜಾಗೃತ ಗುಂಪುಗಳ ವಿವಿಧ ರೂಪಗಳಲ್ಲಿ ಅದು ಇನ್ನೂ ಮುಂದುವರಿದಿದೆ ಎಂದು ಹೋರಾಟಗಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X