ಮಾಸ್ಕ್: 3,900ರೂ. ದಂಡ ವಸೂಲಿ
ಉಡುಪಿ, ಆ.6: ಜಿಲ್ಲೆಯಲ್ಲಿ ಮಾಸ್ಕ್ ಧರಿಸದೆ ಹೊರಗಡೆ ತಿರುಗಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಒಟ್ಟು 3900ರೂ. ದಂಡವನ್ನು ವಸೂಲಿ ಮಾಡಲಾಗಿದೆ.
ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ 300ರೂ., ಕುಂದಾಪುರ ಪುರಸಭೆ ವ್ಯಾಪ್ತಿ ಯಲ್ಲಿ 100ರೂ., ಉಡುಪಿ, ಕಾರ್ಕಳ, ಕುಂದಾಪುರ, ಕಾಪು, ಹೆಬ್ರಿ, ಬ್ರಹ್ಮಾವರ ಗ್ರಾಮಾಂತರ ಪ್ರದೇಶಗಳಲ್ಲಿ ಒಟ್ಟು 3500ರೂ. ದಂಡ ವಸೂಲಿ ಮಾಡಲಾ ಯಿತು. ಹೀಗೆ ಜಿಲ್ಲೆಯಲ್ಲಿ ಈವರೆಗೆ ಒಟ್ಟು 1,41,500ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story