Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶ್ರೀಲಂಕಾ ಸಂಸತ್ ಚುನಾವಣೆ: ಮಹಿಂದ...

ಶ್ರೀಲಂಕಾ ಸಂಸತ್ ಚುನಾವಣೆ: ಮಹಿಂದ ರಾಜಪಕ್ಸೆ ನೇತೃತ್ವದ ಎಸ್‌ಎಲ್‌ಪಿಪಿ ಪಕ್ಷಕ್ಕೆ ಭರ್ಜರಿ ಜಯ

ವಾರ್ತಾಭಾರತಿವಾರ್ತಾಭಾರತಿ7 Aug 2020 11:52 AM IST
share
ಶ್ರೀಲಂಕಾ ಸಂಸತ್ ಚುನಾವಣೆ: ಮಹಿಂದ ರಾಜಪಕ್ಸೆ ನೇತೃತ್ವದ ಎಸ್‌ಎಲ್‌ಪಿಪಿ ಪಕ್ಷಕ್ಕೆ ಭರ್ಜರಿ ಜಯ

ಕೊಲಂಬೊ (ಶ್ರೀಲಂಕಾ), ಆ. 7: ಶ್ರೀಲಂಕಾದಲ್ಲಿ ಬುಧವಾರ ನಡೆದ ಸಂಸದೀಯ ಚುನಾವಣೆಯಲ್ಲಿ ದೇಶವನ್ನು ಆಳುತ್ತಿರುವ ರಾಜಪಕ್ಸ ಸಹೋದರರ ಮಿತ್ರಕೂಟವು ಮೂರನೇ ಎರಡು ಬಹುಮತದಿಂದ ಅಧಿಕಾರಕ್ಕೆ ಬಂದಿದೆ ಹಾಗೂ ಆ ಮೂಲಕ ಅಧಿಕಾರದ ಮೇಲಿನ ಹಿಡಿತವನ್ನು ಬಲಪಡಿಸಲು ಈ ಸಹೋದರರಿಗೆ ಸಹಾಯ ಮಾಡಿದೆ. ಶುಕ್ರವಾರ ಮುಂಜಾನೆ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಪ್ರಧಾನಿ ಮಹಿಂದ ರಾಜಪಕ್ಸರ ಶ್ರೀಲಂಕಾ ಪೊಡುಜನ ಪಾರ್ಟಿ (ಎಸ್‌ಎಲ್‌ಪಿಪಿ)ಯೊಂದೇ 225 ಸದಸ್ಯ ಬಲದ ಸಂಸತ್ತಿನಲ್ಲಿ 146 ಸ್ಥಾನಗಳನ್ನು ಗೆದ್ದಿದೆ ಹಾಗೂ ಅದಕ್ಕೆ ಕನಿಷ್ಠ 5 ಮಿತ್ರಪಕ್ಷಗಳ ಬೆಂಬಲವಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜಯ ಗಳಿಸಿರುವ ಗೋತಬಯ ರಾಜಪಕ್ಸ ಮತ್ತು ಅವರ ಸಹೋದರ ಹಾಗೂ ಪ್ರಧಾನಿ ಮಹಿಂದ ರಾಜಪಕ್ಸ ಸಂವಿಧಾನವನ್ನು ಬದಲಾಯಿಸುವ ಭರವಸೆಯನ್ನು ನೀಡಿದ್ದರು. ಈ ಭರವಸೆಯನ್ನು ಜಾರಿಗೆ ತರಬೇಕಾದರೆ ಅವರಿಗೆ ಮೂರನೇ ಎರಡು ‘ಸೂಪರ್’ ಬಹುಮತದ ಅಗತ್ಯವಿದೆ.

ಹಿಂದಿನ ಸರಕಾರವು ಅಧ್ಯಕ್ಷರ ಅಧಿಕಾರಗಳನ್ನು ಮೊಟಕುಗೊಳಿಸುವುದಕ್ಕೆ ಸಂಬಂಧಿಸಿದ ಸಾಂವಿಧಾನಿಕ ಬದಲಾವಣೆಗಳನ್ನು ಜಾರಿಗೊಳಿಸಿತ್ತು. ಅದನ್ನು ಹಿಂದಕ್ಕೆ ಪಡೆಯಲು ರಾಜಪಕ್ಸ ಸಹೋದರರು ಪ್ರಯತ್ನಿಸುತ್ತಿದ್ದಾರೆ.

ಬುಧವಾರ ನಡೆದ ಚುನಾವಣೆಯಲ್ಲಿ 1.62 ಕೋಟಿ ಮತದಾರರ ಪೈಕಿ ಸುಮಾರು 70 ಶೇಕಡ ಮಂದಿ ಮತ ಚಲಾಯಿಸಿದ್ದಾರೆ. ಈ ಪೈಕಿ ಮಹಿಂದ ಸಹೋದರರ ಪಕ್ಷವು ಸುಮಾರು 60 ಶೇಕಡ ಮತಗಳನ್ನು ಬಾಚಿಕೊಂಡಿದೆ.

ದೇಶದ ಪ್ರತಿಪಕ್ಷಗಳು ಛಿದ್ರವಾಗಿವೆ. ಮಾಜಿ ಪ್ರಧಾನಿ ರನಿಲ್ ವಿಕ್ರಮೆಸಿಂಘೆ ಚುನಾವಣೆಯಲ್ಲಿ ಸೋಲನುಭವಿಸಿದ್ದಾರೆ ಹಾಗೂ ಅವರ ಪಕ್ಷವು ಕೇವಲ ಒಂದು ಸ್ಥಾನವನ್ನು ಗಳಿಸಿದೆ. ನಿರ್ಗಮನ ಸಂಸತ್ತಿನಲ್ಲಿ ಅವರ ಪಕ್ಷವು 106 ಸ್ಥಾನಗಳನ್ನು ಹೊಂದಿತ್ತು.

ವಿಕ್ರಮೆಸಿಂಘೆಯ ಪಕ್ಷದಿಂದ ಸಿಡಿದು ಹೋಗಿರುವ ಸಜಿತ್ ಪ್ರೇಮದಾಸ ನೇತೃತ್ವದ ಪಕ್ಷವು 53 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಸಜಿತ್ ಪ್ರೇಮದಾಸ, ದೇಶದ ಹತ್ಯೆಗೀಡಾಗಿರುವ ಅಧ್ಯಕ್ಷ ರಣಸಿಂಘೆ ಪ್ರೇಮದಾಸರ ಪುತ್ರನಾಗಿದ್ದಾರೆ.

ನರೇಂದ್ರ ಮೋದಿ ಅಭಿನಂದನೆ

ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶ್ರೀಲಂಕಾ ಪ್ರಧಾನಿ ಮಹಿಂದ ರಾಜಪಕ್ಸರಿಗೆ ಫೋನ್ ಮಾಡಿ, ಚುನಾವಣಾ ವಿಜಯಕ್ಕಾಗಿ ಅವರನ್ನು ಅಭಿನಂದಿಸಿದ್ದಾರೆ.

ಬಳಿಕ ಟ್ವಿಟರ್‌ನಲ್ಲಿ ಹೇಳಿಕೆಯೊಂದನ್ನು ನೀಡಿರುವ ಶ್ರೀಲಂಕಾ ಪ್ರಧಾನಿ, ಭಾರತದ ಪ್ರಧಾನಿ ಮೋದಿಯೊಂದಿಗೆ ನಿಕಟವಾಗಿ ಕೆಲಸ ಮಾಡುವುದನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ಉಭಯ ದೇಶಗಳು ‘‘ಸ್ನೇಹಿತರು ಮತ್ತು ಬಂಧುಗಳು’’ ಎಂಬುದಾಗಿ ಅವರು ಬಣ್ಣಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X