Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು: ಮಳೆ ಕ್ಷೀಣಗೊಂಡರೂ ನಿಲ್ಲದ...

ಚಿಕ್ಕಮಗಳೂರು: ಮಳೆ ಕ್ಷೀಣಗೊಂಡರೂ ನಿಲ್ಲದ ಪ್ರಾಕೃತಿಕ ವಿಕೋಪ

►ಭದ್ರಾ ನೆರೆ ನೀರಿಗೆ ಬಿದ್ದು ವ್ಯಕ್ತಿ ಸಾವು ►ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಬಿರುಕು

ವಾರ್ತಾಭಾರತಿವಾರ್ತಾಭಾರತಿ7 Aug 2020 6:09 PM IST
share
ಚಿಕ್ಕಮಗಳೂರು: ಮಳೆ ಕ್ಷೀಣಗೊಂಡರೂ ನಿಲ್ಲದ ಪ್ರಾಕೃತಿಕ ವಿಕೋಪ

ಚಿಕ್ಕಮಗಳೂರು, ಆ.7: ಕಾಫಿನಾಡಿನಲ್ಲಿ ಮಳೆಯ ಅಬ್ಬರ ಶುಕ್ರವಾರ ಕಡಿಮೆಯಾಗಿದ್ದರೂ ಗುರುವಾರ ರಾತ್ರಿ ಸುರಿದ ಭೋರ್ಗರೆದ ಧಾರಾಕಾರ ಮಳೆಗೆ ಮಲೆನಾಡಿನ ಜನರ ಬದುಕು ಅಸ್ತವ್ಯಸ್ತಗೊಂಡಿದೆ. ರಾತ್ರಿ ಸುರಿದ ಮಳೆಯಿಂದಾಗಿ ಮಲೆನಾಡಿನಲ್ಲಿ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದ ಈ ನದಿಗಳ ನೀರಿನಿಂದಾಗಿ ಕಾಫಿ, ಅಡಿಕೆ ತೋಟಗಳು, ಭತ್ತದ ಗದ್ದೆಗಳು ಜಲಾವೃತಗೊಂಡಿರುವುದು ಒಂದೆಡೆಯಾದರೆ ಮತ್ತೊಂದೆಡೆ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಮನೆ, ಭೂಕುಸಿತದಂತಹ ಘಟನೆಗಳೊಂದಿಗೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿರುವ ಘಟನೆಗಳು ಮುಂದುವರಿದಿವೆ. ನಾಲ್ಕು ದಿನಗಳ ಭಾರೀ ಮಳೆಗೆ ಜಿಲ್ಲೆಯಲ್ಲಿ 54 ಮನೆಗಳು ಹಾನಿಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಕಳೆದ ರವಿವಾರದಿಂದ ಜಿಲ್ಲೆಯಲ್ಲಿ ಮಳೆಯ ಆರ್ಭಟ ಆರಂಭವಾಗಿದ್ದು, ರವಿವಾರದಿಂದ ಬುಧವಾರ ರಾತ್ರಿವರೆಗೆ ಆದ ಅತೀವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಗುರುವಾರ ಹಗಲು ವೇಳೆ ಸಾಧಾರಣವಾಗಿ ಮಳೆ ಸುರಿದರೇ ರಾತ್ರಿಯಿಂದ ಶುಕ್ರವಾರ ಬೆಳಗಿನವರೆಗೆ ಮಳೆ ಭೋರ್ಗರೆಯಿತು. ರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಮಲೆನಾಡಿನಲ್ಲಿ ಹರಿಯುವ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳಲ್ಲಿ ಶುಕ್ರವಾರ ನೆರೆ ಸಂಭವಿಸಿದ ಪರಿಣಾಮ ನದಿ ಪಾತ್ರದಲ್ಲಿನ ನಿವಾಸಿಗಳ ಮನೆಗಳು ಹಾಗೂ ಕಾಫಿ, ಅಡಿಕೆ, ಬಾಳೆ, ತೋಟಗಳು ಹಾಗೂ ಭತ್ತದ ಗದ್ದೆಗಳಿಗೆ ನದಿ ನೀರು ನುಗ್ಗಿ ಜಲಾವೃತಗೊಂಡಿದ್ದವು. ಅಲ್ಲದೇ ಮಲೆನಾಡಿನ ಅಲ್ಲಲ್ಲಿ ಭೂ ಕುಸಿತ, ರಸ್ತೆ ಸಂಚಾರ ಬಂದ್, ಮನೆಗಳ ಕುಸಿತದಂತಹ ಘಟನೆಗಳು ವರದಿಯಾಗಿವೆ.

ಮೂಡಿಗೆರೆ ತಾಲೂಕಿನಾದ್ಯಂತ ಗುರುವಾರ ರಾತ್ರಿ ಭಾರೀ ಪ್ರಮಾಣದಲ್ಲಿ ಮಳೆಯಾದ ಪರಿಣಾಮ ತಾಲೂಕಿನಲ್ಲಿ ಹರಿಯುವ ಭದ್ರಾ ನದಿ ನೀರು ಅಪಾಯದ ಮಟ್ಟ ಮೀರಿ ಹರಿದ ಪರಿಣಾಮ ಮಂಗಳವಾರ ಮುಳುಗಡೆಯಾಗಿ ಬುಧವಾರ ಸಂಜೆ ಸಂಚಾರಕ್ಕೆ ಮುಕ್ತವಾಗಿದ್ದ ಕಳಸ-ಹೊರನಾಡು ಸಂಪರ್ಕದ ಹೆಬ್ಬಾಳೆ ಸೇತುವೆ ಶುಕ್ರವಾರ ಮಧ್ಯರಾತ್ರಿ ಮತ್ತೆ ಮುಳುಗಡೆಯಾಗಿತ್ತು. ಶುಕ್ರವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಮುಳುಗಡೆಯಾಗಿದ್ದ ಹೆಬ್ಬಾಳೆ ಸೇತುವೆ ಸಂಜೆ ವೇಳೆಗೆ ನದಿಯಲ್ಲಿ ನೀರಿನ ಹರಿವು ಕಡಿಮೆಯಾದ ಪರಿಣಾಮ ಸೇತುವೆ ಮೇಲಿದ್ದ ನೀರು ಇಳಿದಿದೆಯಾದರೂ ನದಿ ನೀರು ಸೇತುವೆಯಿಂದ 1 ಅಡಿಯಷ್ಟು ಕೆಳಗಿದ್ದು, ಶುಕ್ರವಾರ ರಾತ್ರಿ ಮತ್ತೆ ಮಳೆ ಸುರಿದಲ್ಲಿ ಸೇತುವೆ ಮುಳುಗಡೆಯಾಗಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಸೇತುವೆ ಕಳೆದ ವರ್ಷದ ಮಳೆಗಾಲದಲ್ಲಿ 32 ಬಾರಿ ಮುಳುಗಡೆಯಾಗಿದ್ದು, ಈ ಬಾರಿ ಕಳೆದ 6 ದಿನಗಳಲ್ಲಿ 2 ಬಾರಿ ಮುಳುಗಡೆಯಾದಂತಾಗಿದೆ.

ಮೂಡಿಗೆರೆ ತಾಲೂಕಿನಾದ್ಯಂತ ಸುರಿದ ಭಾರೀ ಮಳೆಯಿಂದಾಗಿ ನೂರಾರು ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿದ್ದು, ತಾಲೂಕಿನ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದೆ. ತಾಲೂಕಿನ ಉದುಸೆ ಗ್ರಾಮದಲ್ಲಿ ಚಂದ್ರಮ್ಮ ಎಂಬವರ ಮನೆ ಭಾರೀ ಮಳೆ ಗಾಳಿಯಿಂದಾಗಿ ಶುಕ್ರವಾರ ಬೆಳಗಿನ ಜಾವ ಮನೆಯ ಛಾವಣಿ, ಗೋಡೆ ಕುಸಿದು ಮನೆ ಜಖಂಗೊಂಡಿದೆ. ಮೂಡಿಗೆರೆ ಪಟ್ಟಣದ ಛತ್ರ ಮೈದಾನದಲ್ಲಿ ಕಳೆದ ವರ್ಷವಷ್ಟೇ ನಿರ್ಮಿಸಿದ್ದ ಅಬ್ಬಯ್ಯ, ನಾಗಮ್ಮ ಎಂಬವರ ನೂತನ ಮನೆಯ ಪಕ್ಕದಲ್ಲಿ ಧರೆ ಕುಸಿದಿದ್ದು, ಪರಿಣಾಮ ಮನೆಯ ಹಿಂಭಾಗದಲ್ಲಿ ಅರ್ಧ ಅಡಿಪಾಯವೇ ಇಲ್ಲದಂತಾಗಿದೆ. ಇಡೀ ಮನೆಯೇ ಕುಸಿದು ಬೀಳುವ ಹಂತದಲ್ಲಿದೆ. ಪಪಂ ಅಧಿಕಾರಿಗಳು, ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ತುರ್ತು ಕಾಮಗಾರಿ ನಡೆಸುವ ಭರವಸೆ ನೀಡಿದ್ದಾರೆ. ತಾಲೂಕಿನ ಕಿರುಗುಂದ ಗ್ರಾಮದಲ್ಲಿ ಹೇಮಾವತಿ ನದಿ ನೀರು ಶುಂಠಿ ಗದ್ದೆಗೆ ನುಗ್ಗಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಶುಂಠಿ ಬೆಳೆ ನಷ್ಟವಾಗಿದೆ. 

ಮೂಡಿಗೆರೆ ತಾಲೂಕಿನ ಕಳಸ ಹೋಬಳಿಯ ಹೊರನಾಡು ಗ್ರಾಮದಿಂದ ಬಲಿಗೆ ಮಾರ್ಗವಾಗಿ ಮೆಣಸಿನ ಹಾಡ್ಯ, ಕೊಗ್ರೆ, ಜಯಪುರ, ಶೃಂಗೇರಿ ಸಂಪರ್ಕ ರಸ್ತೆ ಮೇಲೆ ಧರೆ ಕುಸಿದ ಪರಿಣಾಮ ಭಾರೀ ಗಾತ್ರದ ಕಲ್ಲುಗಳು, ಮಣ್ಣಿನಿಂದಾಗಿ ಸಂಪರ್ಕ ಕಡಿತಗೊಂಡಿತ್ತು. ಸ್ಥಳಕ್ಕೆ ಹೊರನಾಡು ಗ್ರಾಪಂ ಪಿಡಿಒ ಭೇಟಿ ನೀಡಿ ಪರಿಶೀಲಿಸಿದರು. ರಸ್ತೆ ಸಂಪರ್ಕ ಕಡಿತಗೊಂಡಿರುವು ಪರಿಣಾಮ ಹೊರನಾಡು ಬಲಿಗೆ, ಚಿಕ್ಕನಕೂಡಿಗೆ, ಮೆಣಸಿಹಾಡ್ಯ ಗ್ರಾಮಗಳ ಸಂಪರ್ಕ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಜೆಸಿಬಿ ಮೂಲಕ ಮಣ್ಣು, ಬಂಡೆಕಲ್ಲುಗಳ ತೆರವಿಗೆ ಜಿಲ್ಲಾಡಳಿತ ಕ್ರಮವಹಿಸಿದೆ.

ಇನ್ನು ಭದ್ರಾನದಿಯ ದಡದಲ್ಲಿರುವ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿ ಗುರುವಾರ ರಾತ್ರಿ ಭದ್ರಾ ನದಿ ನೀರು ಅಪಾಯದ ಮಟ್ಟದಲ್ಲಿ ಹರಿದ ಪರಿಣಾಮ ನದಿಪಾತ್ರದಲ್ಲಿದ್ದ ಅಡಿಕೆ ತೋಟ ಹಾಗೂ ಭತ್ತದ ಗದ್ದೆಗಳಿಗೆ ನೀರು ನುಗ್ಗಿತ್ತು. ಶುಕ್ರವಾರ ಮಧ್ಯಾಹ್ನದವರೆಗೂ ತೋಟ, ಗದ್ದೆಗಳಿಗೆ ನುಗ್ಗಿದ್ದ ಇಳಿದಿರಲಿಲ್ಲ. ಪಟ್ಟಣದ ಸಂತೇ ಮಾರುಕಟ್ಟೆ ಆವರಣಕ್ಕೂ ನೀರು ನುಗ್ಗಿದ್ದು, ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಮುಂಜಾನೆ ಭದ್ರಾ ನದಿ ನೀರು ಬಾಳೆಹೊನ್ನೂರು-ಕಳಸ ರಸ್ತೆವರೆಗೂ ನುಗ್ಗಿದ್ದ ಪರಿಣಾಮ ಕೆಲ ಹೊತ್ತು ಬಾಳೆಹೊನ್ನೂರು-ಕಳಸ ಸಂಪರ್ಕ ರಸ್ತೆ ಬಂದ್ ಆಗಿತ್ತು.

ಶೃಂಗೇರಿ ತಾಲೂಕಿನಲ್ಲಿ ಗುರುವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ತುಂಗಾ ನದಿ ಗುರುವಾರ ರಾತ್ರಿಯಿಂದ ಶುಕ್ರವಾರ ಸಂಜೆವರೆಗೂ ಅಪಾಯದ ಮಟ್ಟ ಮೀರಿ ಹರಿಯುತ್ತಿತ್ತು. ನದಿಯಲ್ಲಿ ನೀರಿನ ಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಿದ ಪರಿಣಾಮ ಶೃಂಗೇರಿ ಶಾರದಾಂಬ ದೇವಾಲಯ ಸಮೀಪದ ವಾಹನ ನಿಲುಗಡೆ ಸ್ಥಳವಾದ ಗಾಂಧಿ ಮೈದಾನ ಹಾಗೂ ದೇವಾಲಯದ ಭೋಜನಾ ಶಾಲೆ, ಕಪ್ಪೆ ಶಂಕರ ಮಠ ಜಲಾವೃತಗೊಂಡಿದ್ದು, ಶೃಂಗೇರಿ ಪಟ್ಟಣದ ಮುಖ್ಯ ರಸ್ತೆ ಸಮೀಪಕ್ಕೆ ನದಿಯ ನೆರೆ ನೀರು ಆವರಿಸಿದ್ದ ದೃಶ್ಯ ಶುಕ್ರವಾರ ಕಂಡುಬಂತು. ಗಾಂಧಿಮೈದಾನ ದಾಟಿ ನೆರೆ ನೀರು ಹರಿದ ಪರಿಣಾಮ ಪಟ್ಟಣದ ಮುಖ್ಯ ರಸ್ತೆಯಲ್ಲಿದ್ದ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಶೃಂಗೇರಿ ಪಟ್ಟಣದಿಂದ ಕೆರೆಕಟ್ಟೆ-ಎಸ್‍ಕೆ ಬಾರ್ಡರ್ ಮಾರ್ಗವಾಗಿ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಮೇಲೆ ತುಂಗಾ ನದಿ ನೆರೆ ನೀರು ಹರಿದ ಪರಿಣಾಮ ಶುಕ್ರವಾರ ಬೆಳಗ್ಗೆ ಕೆಲ ಹೊತ್ತು ವಾಹನ ಸಂಚಾರ ಬಂದ್ ಆಗಿತ್ತು. ಮಧ್ಯಾಹ್ನದ ಬಳಿಕ ನೀರು ಇಳಿದಿದ್ದು, ವಾಹನ ಸಂಚಾರ ಪುನಾರಂಭಗೊಂಡಿದೆ.

ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ತುಂಗಾ ನದಿಯ ಪ್ರವಾಹದಿಂದಾಗಿ ಆರ್ಡಿಕೊಪ್ಪ ಗ್ರಾಮದಲ್ಲಿ ಹಾದು ಹೋಗಿರುವ ಜಯಪುರ-ಕೊಪ್ಪ ಸಂಪರ್ಕ ರಸ್ತೆ ಮೇಲೆ ನೀರು ಹರಿದು ವಾಹನ ಸಂಚಾರ ಸ್ಥಗಿತಗೊಂಡಿದ್ದು, ನದಿ ಪಾತ್ರದ ಭತ್ತದ ಗದ್ದೆ, ಅಡಿಕೆ ತೋಟಗಳು ಜಲಾವೃತಗೊಂಡಿದ್ದು, ತಾಲೂಕಿನ ಜಯಪುರ ಪಟ್ಟಣ ಸಮೀಪದಲ್ಲಿ ಶೃಂಗೇರಿ-ಚಿಕ್ಕಮಗಳೂರು ಸಂಪರ್ಕದ ಹೆದ್ದಾರಿಯಲ್ಲಿ ಭೂ ಕುಸಿತ ಉಂಟಾಗಿರುವುದರಿಂದ ಹೆದ್ದಾರಿಗೆ ಹಾನಿಯಾಗಿದೆ, ಇಡೀ ರಸ್ತೆ ಕುಸಿಯುವ ಭೀತಿ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರನವನ್ನು ಗುರುವಾರ ರಾತ್ರಿಯಿಂದಲೇ ನಿಷೇದಿಸಲಾಗಿದೆ.

ಇನ್ನು ಜಿಲ್ಲೆಯ ಚಿಕ್ಕಮಗಳೂರು, ಕಡೂರು, ತರೀಕೆರೆ ತಾಲೂಕು ವ್ಯಾಪ್ತಿಯಲ್ಲೂ ಗುರುವಾರ ರಾತ್ರಿ ಉತ್ತಮ ಮಳೆಯಾಗಿದ್ದು, ಮಳೆಯಿಂದಾಗಿ ಭತ್ತ, ಶುಂಠಿ ಗದ್ದೆಗಳಲ್ಲಿ ಮಳೆ ನೀರು ನಿಂತು ಬೆಳೆ ನಷ್ಟವಾಗಿದೆ. ಉತ್ತಮ ಮಳೆಯಿಂದಾಗಿ ಮೂರು ತಾಲೂಕು ವ್ಯಾಪ್ತಿಯಲ್ಲಿನ ಕೆರೆಗಳಲ್ಲಿ ಭಾರೀ ನೀರು ಸಂಗ್ರಹವಾಗಿದೆ. ಇನ್ನೂ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಿರುವ ಪರಿಣಾಮ ತರೀಕೆರೆ ತಾಲೂಕಿನ ಲಕ್ಕವಳ್ಳಿ ಡ್ಯಾಂನಲ್ಲಿ ಭಾರೀ ನೀರು ಸಂಗ್ರವಾಗಿದೆ. ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದಾಗಿ ಮಲೆನಾಡು ಭಾಗದಲ್ಲಿ 54 ಮನೆಗಳು ಜಖಂಗೊಂಡಿರುವುದು ವರದಿಯಾಗಿದೆ. ಅತಿವೃಷ್ಟಿಯಿಂದ ಹಾನಿಗೊಳಗಾದ ಸ್ಥಳಗಳಿಗೆ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲಿಸಿದ್ದು, ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತುಂಗಾ ನದಿಯ ನೆರೆ ನೀರಿನಲ್ಲಿ ಸಿಲುಕಿದ್ದವರ ರಕ್ಷಣೆ; ನೀರಿನಲ್ಲಿ ಮುಳುಗಿದ ಕಾರು
ಗುರುವಾರ ರಾತ್ರಿಯಿಂದ ಶುಕ್ರವಾರ ಬೆಳಗಿನವರೆಗೂ ಭಾರೀ ಮಳೆಯಾದ ಪರಿಣಾಮ ತುಂಗಾನದಿ ಉಕ್ಕಿ ಹರಿದಿದೆ. ಇದರಿಂದಾಗಿ ಶೃಂಗೇರಿ ಪಟ್ಟಣದ ಗಾಂಧಿ ಮೈದಾನ ಹಾಗೂ ಕರುಬಗೆರೆಯಲ್ಲಿ ನೆರೆ ನೀರಿನಲ್ಲಿ ಸಿಲುಕಿಕೊಂಡಿದ್ದ 15 ಮಂದಿಯನ್ನು ಮುಂಜಾನೆ ಎನ್‍ಡಿಆರ್‍ಎಫ್ ಹಾಗೂ ಎಎನ್‍ಎಫ್ ಸಿಬ್ಬಂದಿ ಬೋಟ್ ಬಳಸಿ ಎರಡು ಗಂಟೆಗಳ ಕಾಳ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ. ಇದೇ ವೇಳೆ ಗಾಂಧಿ ಮೈದಾನದ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸಿದ್ದ ಕಾರೊಂದು ನೆರೆ ನೀರಿನಲ್ಲಿ ಮುಳುಗಿ ಹೋಗಿರುವುದು ವರದಿಯಾಗಿದೆ.

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಿರುಕು; ವಾಹನ ಸಂಚಾರ ಬಂದ್
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‍ನಲ್ಲಿ ನಿರಂತರ ಮಳೆಯಿಂದಾಗಿ ಹೆದ್ದಾರಿಯ ಅಲ್ಲಲ್ಲಿ ಧರೆ, ಮಣ್ಣು ಕುಸಿತ ನಿರಂತರವಾಗಿದ್ದು, ಭಾರೀ ಗಾತ್ರದ ಕಲ್ಲುಬಂಡೆಗಳು ರಸ್ತೆಗುರುಳಿವೆ. ಘಾಟಿಯ ಮಧ್ಯೆ ಧರೆ ಕುಸಿತ ಉಂಟಾಗಿ ಹೆದ್ದಾರಿ ಮಧ್ಯೆ ಬಿರುಕು ಬಿಟ್ಟಿದ್ದು, ರಸ್ತೆ ಎರಡು ತುಂಡಾಗುವ ಸಾಧ್ಯತೆ ಹೆಚ್ಚಿದೆ. ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದರಿಂದ ಸದ್ಯ ಚಾರ್ಮಾಡಿ ಘಾಟ್‍ನಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಪೊಲೀಸ್, ಅರಣ್ಯ, ಪಿಡಬ್ಲೂಡಿ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ಥಳದಲ್ಲಿದ್ದ ಬಂಡೆಕಲ್ಲು, ಮಣ್ಣು, ಮರ ತೆರವುಗೊಳಿಸುವ, ರಸ್ತೆ ದುರಸ್ತಿ ಮಾಡುವ ಕೆಲದಲ್ಲಿ ನಿರತರಾಗಿದ್ದಾರೆ. ರಸ್ತೆ ಸಂಚಾರ ಬಂದ್ ಆಗಿರುವ ಪರಿಣಾಮ ಕೊಟ್ಟಿಗೆಹಾರ ಚೆಕ್‍ಪೋಸ್ಟ್ ನಲ್ಲಿ ವಾಹನಗಳು ಸಾಲು ಗಟ್ಟಿ ನಿಂತಿದ್ದ ದೃಶ್ಯಗಳು ಶುಕ್ರವಾರ ಬೆಳಗ್ಗೆಯಿಂದ ಸಂಜೆವರೆಗೂ ಕಂಡುಬಂದವು.

ಅತಿವೃಷ್ಟಿಗೆ ಎರಡನೇ ಬಲಿ:
ಭದ್ರಾ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ಪರಿಣಾಮ ನರಸಿಂಹರಾಜಪುರ ತಾಲೂಕಿನ ಅಂಡವಾನೆ ಗ್ರಾಮದಲ್ಲಿ ಗದ್ದೆಗಳು ಜಲಾವೃತಗೊಂಡಿದ್ದು, ಗುರುವಾರ ರಾತ್ರಿ ಗ್ರಾಮದ ಶಂಕರ(40) ಎಂಬ ವ್ಯಕ್ತಿ ಗದ್ದೆ ಏರಿಯ ಮೇಲೆ ನಡೆದು ಹೋಗುತ್ತಿದ್ದ ವೇಳೆ ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಾರಿ ಜಿಲ್ಲೆಯಲ್ಲಿ ಭಾರೀ ಮಳೆಗೆ ಇದು ಎರಡನೇ ಬಲಿಯಾಗಿದ್ದು, ಬುಧವಾರ ರಾತ್ರಿ ಕಡೂರು ತಾಲೂಕಿನಲ್ಲಿ ರೈತನೋರ್ವ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X