Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಡಗಿನಲ್ಲಿ ಹಲವು ಕಡೆ ಭೂಕುಸಿತ :...

ಕೊಡಗಿನಲ್ಲಿ ಹಲವು ಕಡೆ ಭೂಕುಸಿತ : ತಲಕಾವೇರಿ ಕಾರ್ಯಾಚರಣೆಗೆ ಅಡ್ಡಿ

ವಾರ್ತಾಭಾರತಿವಾರ್ತಾಭಾರತಿ7 Aug 2020 9:10 PM IST
share
ಕೊಡಗಿನಲ್ಲಿ ಹಲವು ಕಡೆ ಭೂಕುಸಿತ : ತಲಕಾವೇರಿ ಕಾರ್ಯಾಚರಣೆಗೆ ಅಡ್ಡಿ

ಮಡಿಕೇರಿ ಆ.7 : ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರೆದಿದ್ದು, ಹಲವು ಕಡೆ ಭೂಕುಸಿತ ಉಂಟಾಗಿದೆ. ಪ್ರವಾಹ ಪರಿಸ್ಥಿತಿಯಿಂದ ರಸ್ತೆ ಸಂಪರ್ಕ ಕಡಿತಗೊಂಡಿದ್ದರೆ, ನೂರಾರು ಮನೆಗಳು ಜಲಾವೃತಗೊಂಡು ಕುಟುಂಬಗಳು ಆಶ್ರಯ ಕಳೆದುಕೊಂಡಿವೆ. 

ಬ್ರಹ್ಮಗಿರಿ ಬೆಟ್ಟಕುಸಿದು ಐವರು ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ತಲಕಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಪತ್ತೆ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ.

ಭಾಗಮಂಡಲದಲ್ಲಿ ಪ್ರವಾಹ ಪರಿಸ್ಥಿತಿ ಇರುವುದರಿಂದ ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಜೆಸಿಬಿ ಮತ್ತು ಇಟಾಚಿ ಯಂತ್ರಗಳನ್ನು ದುರಂತ ನಡೆದ ಪ್ರದೇಶಕ್ಕೆ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ಮಳೆ ಕಡಿಮೆಯಾಗಿ ಪ್ರವಾಹದ ನೀರು ತಗ್ಗಿದರೆ ಶನಿವಾರ ಕಾರ್ಯಾಚರಣೆ ನಡೆಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಸಚಿವ ಸೋಮಣ್ಣ ಭೇಟಿ

ತಲಕಾವೇರಿ ಸಮೀಪ ಬ್ರಹ್ಮಗಿರಿ ಬೆಟ್ಟ ಕುಸಿದಿರುವ ಪ್ರದೇಶಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಭೂ ಕುಸಿತ ಪ್ರದೇಶ ಕಂಡು ಬೇಸರ ವ್ಯಕ್ತಪಡಿಸಿದ ಸಚಿವರು, ಬ್ರಹ್ಮಗಿರಿ ಬೆಟ್ಟದಲ್ಲಿ ಭೂಕುಸಿತದಿಂದ ತಲಕಾವೇರಿ ದೇವಾಲಯ ಪ್ರಧಾನ ಅರ್ಚಕರಾಗಿದ್ದ ನಾರಾಯಣಾಚಾರ್ ಕುಟುಂಬದ ಮೂವರು ಮತ್ತು ಸಹ ಅರ್ಚಕರು ಇಬ್ಬರು ಸೇರಿ, ಒಟ್ಟು 5 ಮಂದಿ ಕಣ್ಮರೆಯಾಗಿದ್ದು, ಮಳೆ ಕಡಿಮೆಯಾದ ತಕ್ಷಣ ಕಾರ್ಯಾಚರಣೆ ಆರಂಭಿಸಲಾಗುವುದು. ಈಗಾಗಲೇ ಎನ್‍ಡಿಆರ್‍ಎಫ್ ತಂಡ ಬೀಡು ಬಿಟ್ಟಿದೆ ಎಂದು ಸಚಿವರು ತಿಳಿಸಿದರು.

ಪ್ರಕೃತಿ ವಿಕೋಪ ಎದುರಿಸುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಎನ್‍ಡಿಆರ್‍ಎಫ್ ತಂಡ ಜಿಲ್ಲೆಯಲ್ಲಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದೆ. ಹಾಗೆಯೇ ವಿದ್ಯುತ್ ಮಾರ್ಗ ಸರಿಪಡಿಸುವುದು, ಮರಗಳು ರಸ್ತೆ ಮತ್ತು ವಿದ್ಯುತ್ ಕಂಬಕ್ಕೆ ತುಂಡಾಗಿ ಬದ್ದಲ್ಲಿ ತಕ್ಷಣವೇ ತೆರವು ಮಾಡುವ ಕಾರ್ಯ ನಡೆಯುತ್ತಿದೆ. ರಸ್ತೆ ಭಾಗದಲ್ಲಿ ಬರೆ ಕುಸಿದಲ್ಲಿ ತೆರವುಗೊಳಿಸಿ ಸಾರಿಗೆ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ವಿ.ಸೋಮಣ್ಣ ಅವರು ವಿವರಿಸಿದರು.

ಆರೆಂಜ್ ಅಲರ್ಟ್ ಘೋಷಣೆ

ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಆ.8 ರ ಬೆಳಗ್ಗೆಯಿಂದ ಆ.11 ರ ಬೆಳಗ್ಗೆವರೆಗೆ ಆರೆಂಜ್ ಅಲರ್ಟ್‍ನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ಮುಂದಿನ ದಿನಗಳಲ್ಲಿ ಮುಂಗಾರು ಮಳೆಯ ಹೆಚ್ಚಾಗುವ ಸಂಭವ ಇದ್ದು, ಆಗಾಗ್ಗೆ ಹೊರಡಿಸುವ ಹವಾಮಾನ ಮುನ್ಸೂಚನೆಗಳನ್ನು ಗಮನಿಸಲು ಕೋರಿದೆ. ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ 24X7 ಕಂಟ್ರೋಲ್ ರೂಂ 08272-221077 ವಾಟ್ಸ್ ಆ್ಯಪ್ : 8550001077 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಗೂ ಅಪಾಯದ ಆತಂಕ 

ಮಡಿಕೇರಿ ಮೂಲಕ ಹಾದು ಹೋಗುವ ಮಂಗಳೂರು ರಸ್ತೆಯಲ್ಲಿ ಬರೆ ಕುಸಿತವಾಗುತ್ತಿದ್ದು, ಇದರ ಪರಿಣಾಮ ರಸ್ತೆ ಪಕ್ಕದಲ್ಲೇ ಇರುವ ಜಿಲ್ಲಾಡಳಿತದ ಕಚೇರಿಗಳ ಸಂಕೀರ್ಣದ ಬೃಹತ್ ಕಟ್ಟಡ ಆತಂಕ ಎದುರಿಸುತ್ತಿದೆ.

ಕಟ್ಟಡದ ಪಕ್ಕದಲ್ಲೇ ಬರೆ ಕುಸಿದಿದ್ದು, ಪ್ಲಾಸ್ಟಿಕ್ ಶೀಟ್ ಗಳನ್ನು ಹಾಕಿ ಸಂರಕ್ಷಿಸುವ ಪ್ರಯತ್ನ ಮಾಡಲಾಗಿದೆ. ಕಟ್ಟಡದ ಸುರಕ್ಷತೆಗೆ ಯಾವುದೇ ತಡೆಗೋಡೆ ನಿರ್ಮಿಸದೇ ಇರುವುದರಿಂದ ಮಣ್ಣು ಕುಸಿದರೆ ಕಚೇರಿ ಸಂಕೀರ್ಣಕ್ಕೂ ಹಾನಿಯಾಗುವ ಸಾಧ್ಯತೆಗಳಿದೆ. ಇದನ್ನು ಮನಗಂಡು ಪ್ರಮುಖ ಕಚೇರಿಗಳನ್ನು ಮಡಿಕೇರಿ ನಗರಸಭೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ. ಮಳೆಹಾನಿಯ ತುರ್ತು ಕಾರ್ಯಗಳು ನಗರಸಭೆಯ ಕಟ್ಟಡದಿಂದಲೇ ನಡೆಯಲಿದೆ. ಜಿಲ್ಲಾಧಿಕಾರಿಗಳು ಕೂಡ ಇದೇ ಕಟ್ಟಡದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X