Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತರಿಬ್ಬರ ಮೇಲೆ ಹಲ್ಲೆ ಪ್ರಕರಣ :...

ದಲಿತರಿಬ್ಬರ ಮೇಲೆ ಹಲ್ಲೆ ಪ್ರಕರಣ : ಬಜರಂಗ ದಳದ ಕಾರ್ಯಕರ್ತರ ಸಹಿತ 18 ಮಂದಿಯ ವಿರುದ್ಧ ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ7 Aug 2020 11:27 PM IST
share
ದಲಿತರಿಬ್ಬರ ಮೇಲೆ ಹಲ್ಲೆ ಪ್ರಕರಣ : ಬಜರಂಗ ದಳದ ಕಾರ್ಯಕರ್ತರ ಸಹಿತ 18 ಮಂದಿಯ ವಿರುದ್ಧ ಪ್ರಕರಣ ದಾಖಲು

ಸಕಲೇಶಪುರ, ಆ.7: ಖರೀದಿಸಿದ ದನಗಳನ್ನು ಸಾಗಿಸುತ್ತಿದ್ದ ವೇಳೆ ದಲಿತರಿಬ್ಬರ ಮೇಲೆ ನಡೆಸಿದ ಹಲ್ಲೆ ಪ್ರಕರಣ ಸಂಬಂಧ ಬಜರಂಗ ದಳದ 7 ಕಾರ್ಯಕರ್ತರು ಸೇರಿದಂತೆ 18 ಮಂದಿಯ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಯರಾಜ್ (43) ಮತ್ತು ನಿಂಗರಾಜ್ (40) ಹಲ್ಲೆಗೊಳಗಾದವರು.

ಸಮೀಪದ ಹೆಬ್ಬನಳ್ಳಿ ಗ್ರಾಮದವರಾಗಿದ್ದು, ತಾಲೂಕು ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗ ದಳದ ರಾಜ್ಯ ಸಂಚಾಲಕ ರಘು, ಶೇಖರ ಪೂಜಾರಿ, ಕೌಶಿಕ್, ರಘು, ಯೋಗೇಶ್, ಮನೋಹರ, ಗಿರೀಶ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.

ಮತ್ತಿಬ್ಬರು ಯುವಕರು ಹಲ್ಲೆಗೆ ಒಳಗಾದ ಬಗ್ಗೆ ಬಜರಂಗ ದಳದ 10 ಕಾರ್ಯಕರ್ತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಅಬ್ದುಲ್ ಮುತ್ತಲಿಬ್ ಮತ್ತು ಅಜ್ವಾನ್ ಹಲ್ಲೆಗೊಳಗಾದವರಾಗಿದ್ದು, ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣದ ವಿವರ

ಹೆಬ್ಬನಹಳ್ಳಿ ಗ್ರಾಮದ ನಾಗೇಶ್ ಎಂಬವರಿಂದ ಖರೀದಿಸಿದ ದನಗಳನ್ನು ಇಸ್ಮಾಯಿಲ್ ಎಂಬವರ ಮನೆಗೆ ಸಾಗಿಸುತ್ತಿದ್ದ ವೇಳೆ ಹಲಸುಲಿಗೆ ಸಮೀಪ ದಾರಿ ಮಧ್ಯೆ ಕಾರು ಹಾಗೂ ಬೈಕ್‌ನಲ್ಲಿ ಬಂದು ಅಡ್ಡಗಟ್ಟಿದ ಬಜರಂಗದಳದ ಕಾರ್ಯಕರ್ತರು, ದನಗಳನ್ನು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಥಳಿಸಿದ್ದಾರೆ. ಅಮಾಯಕರನ್ನು ಅಪರಿಚಿತರು ಥಳಿಸುತ್ತಿರುವುದನ್ನು ಕಂಡ ಸ್ಥಳೀಯರು ಹಲ್ಲೆಯನ್ನು ತಡೆಯಲು ಮುಂದಾಗಿದ್ದಾರೆ. ತಡೆಯಲು ಬಂದವರ ಮೇಲೆ ಕೂಡಾ ಹಲ್ಲೆ ನಡೆಸಲು ಮುಂದಾದ ಬಜರಂಗ ದಳದ ಕಾರ್ಯಕರ್ತರನ್ನು ಗ್ರಾಮಸ್ಥರು ತಡೆದಿದ್ದಾರೆ  ಎಂದು ತಿಳಿದುಬಂದಿದೆ.

ಪ್ರತಿದೂರು

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಹಲಸುಲಿಗೆ ಗ್ರಾಮದ ಕೆಲವು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆಂದು ಬಜರಂಗ ದಳದ ಕಾರ್ಯಕರ್ತರು ಪೊಲೀಸರಿಗೆ ಪ್ರತಿದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಖಾದರ್, ಹಸೈನಾರ್, ರಿಝ್ವಾನ್, ಮುತಲಿಬ್, ಅಫ್ರೀದ್, ಅಶ್ಫಕ್, ಆಸೀಫ್, ಖಲಂದರ್ ಮತ್ತು ಹೈದರ್ ವಿರುದ್ಧ ಹಲ್ಲೆ ಮತ್ತು ಬಜರಂಗ ದಳದ ದಲಿತ ಕಾರ್ಯಕರ್ತರ ದೂರಿನ ಅನ್ವಯ ಅಟ್ರಾಸಿಟಿ ಸೇರಿದಂತೆ 307 ಕಲಂ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X