Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ವಾವಲಂಬಿ ಭಾರತ ಅಭಿಯಾನದ ಉತ್ತೇಜನಕ್ಕೆ...

ಸ್ವಾವಲಂಬಿ ಭಾರತ ಅಭಿಯಾನದ ಉತ್ತೇಜನಕ್ಕೆ 101 ರಕ್ಷಣಾ ವಸ್ತುಗಳ ಆಮದು ನಿಷೇಧಿಸಿದ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ9 Aug 2020 12:46 PM IST
share
ಸ್ವಾವಲಂಬಿ ಭಾರತ ಅಭಿಯಾನದ ಉತ್ತೇಜನಕ್ಕೆ 101 ರಕ್ಷಣಾ ವಸ್ತುಗಳ ಆಮದು ನಿಷೇಧಿಸಿದ ಕೇಂದ್ರ

ಹೊಸದಿಲ್ಲಿ,ಆ.9: ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಆತ್ಮನಿರ್ಭರ್ ಭಾರತ ಅಭಿಯಾನಕ್ಕೆ ಅನುಗುಣವಾಗಿ ಸ್ವದೇಶಿ ಉತ್ಪಾದನೆಯನ್ನು ಹೆಚ್ಚಿಸಲು ರಕ್ಷಣಾ ಸಚಿವಾಲಯವು ನಿಗದಿತ ಗಡುವಿನ ಬಳಿಕ 101 ರಕ್ಷಣಾ ಸಾಮಗ್ರಿಗಳ ಆಮದನ್ನು ನಿಲ್ಲಿಸಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರವಿವಾರ ಇಲ್ಲಿ ತಿಳಿಸಿದರು.

ಸರಕಾರದ ಈ ಮಹತ್ವದ ಉಪಕ್ರಮದಿಂದಾಗಿ ದೇಶಿಯ ಉದ್ಯಮವು ಮುಂದಿನ ಆರೇಳು ವರ್ಷಗಳಲ್ಲಿ ಸುಮಾರು ನಾಲ್ಕು ಲ.ಕೋ.ರೂ.ಗಳ ಗುತ್ತಿಗೆಗಳನ್ನು ಪಡೆಯಲಿದೆ. ಆಮದು ನಿರ್ಬಂಧಗಳನ್ನು 2020 ಮತ್ತು 2024ರ ನಡುವೆ ಹಂತಹಂತವಾಗಿ ಜಾರಿಗೊಳಿಸಲಾಗುವುದು ಎಂದು ಸಿಂಗ್ ಹೇಳಿದರು.

ಅಮದು ನಿರ್ಬಂಧ ಪಟ್ಟಿಯು ಫಿರಂಗಿ ಬಂದೂಕುಗಳು, ದಾಳಿ ರೈಫಲ್‌ಗಳು, ಜಲಾಂತರ ಶಬ್ದಶೋಧಕ ವ್ಯವಸ್ಥೆ, ಸಾಗಣೆ ವಿಮಾನಗಳು, ಲಘು ಯುದ್ಧ ಹೆಲಿಕಾಪ್ಟರ್‌ಗಳು ಮತ್ತು ರಾಡಾರ್‌ಗಳಂತಹ ಉನ್ನತ ತಂತ್ರಜ್ಞಾನ ಶಸ್ತ್ರಾಸ್ತ್ರ ವ್ಯವಸ್ಥೆಗಳು ಮತ್ತು ಇತರ ಹಲವಾರು ಸಾಮಗ್ರಿಗಳನ್ನು ಒಳಗೊಂಡಿದೆ ಎಂದು ಕೇಂದ್ರವು ಹೇಳಿಕೆಯಲ್ಲಿ ತಿಳಿಸಿದೆ.

ಶಸ್ತ್ರಸಜ್ಜಿತ ಹೋರಾಟ ವಾಹನ (ಎಎಫ್‌ವಿ)ಗಳೂ ಪಟ್ಟಿಯಲ್ಲಿದ್ದು, ಡಿಸೆಂಬರ್ 2021ರಲ್ಲಿ ಇವುಗಳ ಆಮದುಗಳ ಮೇಲಿನ ನಿರ್ಬಂಧ ಜಾರಿಗೆ ಬರಲಿದೆ. ಸೇನೆಯು ತಲಾ 5,000ಕೋ.ರೂ.ಗೂ ಹೆಚ್ಚಿನ ಅಂದಾಜು ಬೆಲೆಯಲ್ಲಿ ಸುಮಾರು 200 ಎಎಫ್‌ವಿಗಳ ಪೂರೈಕೆಗಾಗಿ ದೇಶಿಯ ಉದ್ಯಮಕ್ಕೆ ಗುತ್ತಿಗೆ ನೀಡುವ ನಿರೀಕ್ಷೆಯಿದೆ. ಜಲಾಂತರ್ಗಾಮಿಗಳ ಮೇಲಿನ ಆಮದು ನಿರ್ಬಂಧವೂ ಡಿಸೆಂಬರ್ 2021ರಲ್ಲಿ ಜಾರಿಗೊಳ್ಳಲಿದ್ದು, ನೌಕಾಪಡೆಯು ತಲಾ ಸುಮಾರು 42,000 ಕೋ.ರೂ.ವೆಚ್ಚದಲ್ಲಿ ಆರು ಜಲಾಂತರ್ಗಾಮಿಗಳ ಪೂರೈಕೆಗೆ ಬೇಡಿಕೆ ಸಲ್ಲಿಸುವ ನಿರೀಕ್ಷೆಯಿದೆ. ವಾಯುಪಡೆಗಾಗಿ ಲಘು ಯುದ್ಧ ವಿಮಾನ ಎಂಕೆ 1ಎ ಅನ್ನು ಪಟ್ಟಿಯಲ್ಲಿ ಸೇರಿಸಲಾಗಿದ್ದು ಡಿಸೆಂಬರ್ 2020ರಲ್ಲಿ ಆಮದು ನಿರ್ಬಂಧ ಜಾರಿಗೆ ಬರಲಿದೆ. 85,000 ಕೋ.ರೂ.ಗೂ ಅಧಿಕ ವೆಚ್ಚದಲ್ಲಿ 123 ವಿಮಾನಗಳನ್ನು ಖರೀದಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿರುವ ಸಚಿವಾಲಯವು,ನಿರ್ಬಂಧ ಪಟ್ಟಿಯಲ್ಲಿ ಸೇರಿಸಲು ಇನ್ನಷ್ಟು ರಕ್ಷಣಾ ಸಾಮಗ್ರಿಗಳನ್ನು ಗುರುತಿಸಲಾಗುವುದು ಎಂದಿದೆ.

 ರಕ್ಷಣಾ ಸಚಿವಾಲಯವು ಸಶಸ್ತ್ರ ಪಡೆಗಳು ಹಾಗೂ ಸಾರ್ವಜನಿಕ ಮತ್ತು ಖಾಸಗಿ ಕ್ಷೇತ್ರಗಳ ಉದ್ಯಮಗಳು ಸೇರಿದಂತೆ ಸಂಬಂಧಿಸಿದ ಎಲ್ಲರೊಂದಿಗೆ ಸಮಾಲೋಚನೆಗಳ ಬಳಿಕ ಈ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ತಿಳಿಸಿದ ಸಿಂಗ್,ಸರಕಾರದ ಈ ನಿರ್ಧಾರವು ಭಾರತೀಯ ರಕ್ಷಣಾ ಉದ್ಯಮವು ಸಶಸ್ತ್ರ ಪಡೆಗಳ ಅಗತ್ಯಗಳನ್ನು ಪೂರೈಸಲು ತನ್ನದೇ ವಿನ್ಯಾಸ ಮತ್ತು ಅಭಿವೃದ್ಧಿ ಸಾಮರ್ಥ್ಯಗಳನ್ನು ಬಳಸಿಕೊಂಡು ಅಥವಾ ಡಿಆರ್‌ಡಿಒದ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ನಿರ್ಬಂಧ ಪಟ್ಟಿಯಲ್ಲಿನ ಸಾಮಗ್ರಿಗಳನ್ನು ತಯಾರಿಸಲು ಸದವಕಾಶವನ್ನು ನೀಡಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X