Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಹಂ ಬಿಟ್ಟು ಸೃಷ್ಟಿಕರ್ತನ ಕಡೆಗೆ...

ಅಹಂ ಬಿಟ್ಟು ಸೃಷ್ಟಿಕರ್ತನ ಕಡೆಗೆ ಮರಳುವಂತೆ ರಾಜ್ಯದ ವಿವಿಧ ಧಾರ್ಮಿಕ ಮುಖಂಡರ ಕರೆ

ಹಲವು ಬಿಕ್ಕಟ್ಟುಗಳನ್ನು ಎದುರಿಸುತ್ತಿರುವ ಜಗತ್ತು

ವಾರ್ತಾಭಾರತಿವಾರ್ತಾಭಾರತಿ9 Aug 2020 11:00 PM IST
share

ಬೆಂಗಳೂರು, ಆ.9: ಜಗತ್ತಿನಲ್ಲಿ ಉದ್ಭವಿಸಿರುವ ದೈವಿಕ ವಿಪತ್ತು ಇಡೀ ಮನುಷ್ಯ ಕುಲವನ್ನೇ ನಡುಗಿಸುವಂತೆ ಮಾಡಿದ್ದು, ವೈಜ್ಞಾನಿಕ ಮತ್ತು ತಂತ್ರಜ್ಞಾನಗಳ ಅಭಿವೃದ್ಧಿಯ ನಡುವೆಯೂ ಮನುಷ್ಯ ಅಸಹಾಯಕನಾಗಿದ್ದಾನೆ. ಇಂತಹ ಸಂದರ್ಭದಲ್ಲಿ ಮನುಷ್ಯ ತನ್ನಲ್ಲಿರುವ ಆಹಂ ಮತ್ತು ಅಹಂಕಾರವನ್ನು ತ್ಯಜಿಸಿ ತನ್ನ ನೈಜ ಸೃಷ್ಟಿಕರ್ತನ ಕಡೆಗೆ ಮರಳಬೇಕಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯಾಧ್ಯಕ್ಷ ಡಾ.ಬೆಳಗಾಮಿ ಮುಹಮ್ಮದ್ ಸಾದ್ ಕರೆ ನೀಡಿದರು.

ರವಿವಾರ ನಡೆದ ರಾಜ್ಯದ ವಿವಿಧ ಧಾರ್ಮಿಕ ವಿದ್ವಾಂಸರ ವೆಬಿನಾರ್ ಸಂದೇಶದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕೊರೋನ ಸಾಂಕ್ರಮಿಕ ರೋಗವು ಸಾವಿರಾರು ಸಂಕಷ್ಟಗಳನ್ನು ಸೃಷ್ಟಿಸಿದ್ದು, ಜನರ ನೈತಿಕ ಮತ್ತು ಆತ್ಮಸ್ಥೈರ್ಯವನ್ನು ವೃದ್ಧಿಸುವ ಕುರಿತಂತೆ ರಾಜ್ಯದ ಶರಣರು, ಮಠಾಧೀಶರು ಮತ್ತು ವಿದ್ವಾಂಸರು ಇಂದು ಕರೆ ನೀಡಿದ್ದು ಉತ್ತಮ ಬೆಳವಣೆಗೆಯಾಗಿದೆ ಎಂದರು.

ಪ್ರಸಕ್ತ ಸನ್ನಿವೇಶವನ್ನು ನಾವು ಧೈರ್ಯ ಮತ್ತು ಸ್ಥೈರ್ಯದಿಂದ ಎದುರಿಸಲು ಸೃಷ್ಠಿಕರ್ತನ ಮೊರೆ ಹೋಗಬೇಕು. ಕೇವಲ ಪ್ರಾರ್ಥನೆ, ಪೂಜೆ ಮಾಡಿದರೆ ಸಾಲದು. ಆತನನ್ನು ಅರಿಯುವ, ಅನುಸರಿಸುವ ಮತ್ತು ದೇವನ ಆದೇಶಗಳನ್ನು ಪಾಲಿಸುವುದು ಕಾಲದ ಬೇಡಿಕೆಯಾಗಿದೆ ಎಂದು ಅವರು ತಿಳಿಸಿದರು.

ಅಮೀರೆ ಶರೀಅತ್ ಕರ್ನಾಟಕ ಮೌಲಾನ ಸಗೀರ್ ಅಹ್ಮದ್ ರಶಾದಿ ಮಾತನಾಡಿ, ನಮ್ಮ ಕೆಟ್ಟ ಕರ್ಮಗಳಿಂದಾಗಿಯೇ ಜಗತ್ತಿನಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮನುಷ್ಯನ ಕೆಟ್ಟ ಕೆಲಸಗಳ ಪರಿಣಾಮ, ಚಾರಿತ್ರಿಕ ಮತ್ತು ನೈತಿಕ ಅಧಪತನದತ್ತ ಕೊಂಡೊಯ್ಯುತ್ತಿದೆ. ದೇವನ ಮತ್ತು ಅನುಸರಣೆ ಮತ್ತು ಆರಾಧನೆಗಳಿಂದ ನಾವು ಎಲ್ಲ ರೀತಿಯ ಸಮಸ್ಯೆಗಳಿಂದ ಪಾರಾಗಲು ಸಾಧ್ಯ ಎಂದರು.

ಬೇಲಿ ಮಠದ ಶಿವರುದ್ರ ಸ್ವಾಮಿ ಮಾತನಾಡಿ, ದೇವನ ಪರೀಕ್ಷೆಯಿಂದ ಶ್ರೀಮಂತ ಮತ್ತು ಬಡವ ಯಾರು ಕೂಡ ತಪ್ಪಿಕೊಳ್ಳಲಾರರು. ಆದುದರಿಂದ, ಸೃಷ್ಟಿಕರ್ತನ ಕಡೆಗೆ ಮರಳುವಂತಾಗಲು ಇದು ಸೂಕ್ತ ಸಮಯ. ಕ್ವಾರೆಂಟೈನ್ ಮೂಲಕ ದೇವರೊಂದಿಗೆ ಹತ್ತಿರವಾಗುವ ಅವಕಾಶ ಲಭಿಸಿದೆ. ನಾವು ದೇವರ ಮುಂದೆ ಕೇವಲ ತೃಣಸಮಾನರಾಗಿದ್ದು, ನಾನು ಎಂಬ ಆಹಮ್ಮಿನಿಂದ ಹೊರ ಬಂದು ಬದುಕುವುದನ್ನು ಕಲಿಯಬೇಕು. ಜಗತ್ತಿನ ಎಲ್ಲ ಜೀವಿಗಳು ದೇವರ ಸೃಷ್ಟಿಗಳು. ನಾವೆಲ್ಲರೂ ಕೂಡಿ ಬಾಳುವುದನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬೆಂಗಳೂರಿನ ಆರ್ಚ್ ಬಿಷಪ್ ರೇ.ಡಾ.ಪೀಟರ್ ಮಚಾದೊ ಮಾತನಾಡಿ, ಎಲ್ಲರನ್ನು ಒಂದಾಗಿಸುವ ಪರಿಸ್ಥಿತಿಯನ್ನು ದೇವರು ನಿರ್ಮಾಣ ಮಾಡಿದ್ದಾನೆ. ಸೃಷ್ಟಿಕರ್ತನ ಮುಂದೆ ಎಲ್ಲರೂ ಸಮಾನರು ಎಂದರು.

ಶಿವಮೊಗ್ಗದ ಮುರುಗಮಠದ ಶ್ರೀ ಮಹಾರಾಜ ನಿರಂಜನ ಜಗದ್ಗುರುಗಳು ಮಾತನಾಡಿ, ಸಾಂಕ್ರಮಿಕ ಹಾಗೂ ದೈವಿಕ ವಿಪತ್ತುಗಳಿಂದಾಗಿ ಮನುಷ್ಯ ಭಯಬೀತನಾಗಿದ್ದಾನೆ. ತನ್ನ ಮಿತಿಯನ್ನು ಅರಿತು ಸಮಾಜದಲ್ಲಿ ಪರಸ್ಪರ ಪ್ರೀತಿ, ವಿಶ್ವಾಸಗಳೊಂದಿಗೆ ಬದುಕುಬೇಕು ಎಂದು ಕರೆ ನಿಡಿದರು.

ಮೈಸೂರಿನ ಶ್ರೀ ಬಸವಲಿಂಗ ಮೂರ್ತಿ ಶರಣರು ಮಾತನಾಡಿ, ಪ್ರತಿಯೊಬ್ಬರು ಕೂಡ ಅಲ್ಲಾಹನಿಂದ ಬಂದು ಅಲ್ಲಾಹನೆಡಗೆ ಮರುಳುತ್ತಾರೆ. ನಮ್ಮ ಪಂಚಭೂತಗಳೆಲ್ಲವೂ ಅಲ್ಲಾಹನ ಒಡೆತನದಲ್ಲಿವೆ, ನಾವು ಭಾಷೆ, ಧರ್ಮ, ವರ್ಗ ಎಂಬ ಬೇಧವನ್ನು ಮರೆತು ಬದುಕಬೇಕು ಎಂದರು.

ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮಿಜಿ ಮಾತನಾಡಿ, ಸಾಮಾಜಿಕ ಚಿಂತನೆಗಳೊಂದಿಗೆ ಆಧ್ಯಾತ್ಮಿಕ ಚಿಂತನೆಗಳನ್ನು ಬೆಳೆಸಿಕೊಳ್ಳುವುದರ ಮೂಲಕ ದೇವ ಸಂದೇಶಗಳನ್ನು ಅರಿತು ಸಮಾಜಮುಖಿ, ಚಿಂತನೆ, ಸಮಾಜಪರ ಕೆಲಸ ಕಾರ್ಯಗಳಲ್ಲಿ ಜನರು ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಮಾಅತೆ ಇಸ್ಲಾಮಿ ಹಿಂದ್ ರಾಜ್ಯ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ ಪ್ರಸ್ತವಾವಿಕವಾಗಿ ಮಾತನಾಡಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X