ಬೆಂಗಳೂರು: ಆಟವಾಡುತ್ತಿದ್ದ ಬಾಲಕಿ ಕೃಷಿ ಹೊಂಡಕ್ಕೆ ಬಿದ್ದು ಮೃತ್ಯು

ಬೆಂಗಳೂರು, ಆ.10: ಆಟವಾಡುತ್ತಿದ್ದ ಬಾಲಕಿಯೊಬ್ಬಳು ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ತಂಬೇನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗಂಗಲಕ್ಷ್ಮೀ(10) ಮೃತ ಬಾಲಕಿ ಎಂದು ತಿಳಿದುಬಂದಿದೆ.
ಸೋಮವಾರ ಸಂಜೆ ಮೂವರು ಬಾಲಕಿಯರು ಆಟವಾಡುತ್ತ ಕೃಷಿ ಹೊಂಡದ ಕಡೆ ಹೋಗಿದ್ದಾಗ ಹೊಂಡಕ್ಕೆ ಬಿದ್ದಿದ್ದಾರೆ. ಪರಿಣಾಮ ನೀರಿನಲ್ಲಿ ಮುಳುಗಿ ಗಂಗಲಕ್ಷ್ಮೀ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ.
ಘಟನೆಯಲ್ಲಿ ನಾಗಮ್ಮ, ಶಿಲ್ಪ ಎಂಬುವರು ಅಸ್ವಸ್ಥಗೊಂಡಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಗಿದೆ, ಈ ಸಂಬಂಧ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
Next Story