Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆ.ಜಿ ಹಳ್ಳಿ ಗಲಭೆ ಆರೋಪಿ ಬಿಜೆಪಿಯ...

ಕೆ.ಜಿ ಹಳ್ಳಿ ಗಲಭೆ ಆರೋಪಿ ಬಿಜೆಪಿಯ ಕಟ್ಟಾ ಬೆಂಬಲಿಗ: ಡಿ.ಕೆ ಶಿವಕುಮಾರ್

ಪ್ರಕರಣದ ಸತ್ಯಶೋಧನೆಗೆ ಕಾಂಗ್ರೆಸ್ ಸಮಿತಿ ರಚನೆ

ವಾರ್ತಾಭಾರತಿವಾರ್ತಾಭಾರತಿ12 Aug 2020 6:34 PM IST
share
ಕೆ.ಜಿ ಹಳ್ಳಿ ಗಲಭೆ ಆರೋಪಿ ಬಿಜೆಪಿಯ ಕಟ್ಟಾ ಬೆಂಬಲಿಗ: ಡಿ.ಕೆ ಶಿವಕುಮಾರ್

ಬೆಂಗಳೂರು, ಆ.12: ಕೆ.ಜಿ ಹಳ್ಳಿ ಘಟನೆಗೆ ಮೂಲ ಕಾರಣನಾದ ನವೀನ್ ಬಿಜೆಪಿ ಕಟ್ಟಾ ಬೆಂಬಲಿಗನಾಗಿದ್ದು, ಇಡೀ ಪ್ರಕರಣದ ಸತ್ಯಶೋಧನೆಗೆ ಡಾ. ಜಿ. ಪರಮೇಶ್ವರ್ ಅವರ ನೇತೃತ್ವದಲ್ಲಿ ಆರು ಹಿರಿಯ ಸದಸ್ಯರ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಡಿ.ಕೆ ಶಿವಕುಮಾರ್, 'ಈ ಘಟನೆಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೂ ಯಾವುದೇ ಸಂಬಂಧವಿಲ್ಲ. ಆರೋಪಿ ನವೀನ್, ಶ್ರೀನಿವಾಸ ಅವರ ಸಂಬಂಧಿಯಾಗಿದ್ದರೂ ಆತ ಮೊದಲಿನಿಂದಲೂ ಬಿಜೆಪಿಯ ಕಟ್ಟಾ ಬೆಂಬಲಿಗ. ಅವನಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದರು.

ಇದು ಪೂರ್ವನಿಯೋಜಿತ ಕೃತ್ಯವಾಗಿದ್ದು, ಇದರ ಸತ್ಯಾಂಶ ಕಂಡುಕೊಳ್ಳಲು ಪರಮೇಶ್ವರ್ ಅವರ ನೇತೃತ್ವದಲ್ಲಿ ಮೂವರು ಮಾಜಿ ಗೃಹ ಸಚಿವರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಕೆ.ಜೆ ಜಾರ್ಜ್, ರಾಮಲಿಂಗಾರೆಡ್ಡಿ, ಬಿ.ಕೆ ಹರಿಪ್ರಸಾದ್, ಕೃಷ್ಣಭೈರೇಗೌಡ, ನಸೀರ್ ಅಹಮದ್ ಅವರು ಇದ್ದಾರೆ ಎಂದರು.

ನಿನ್ನೆ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿಯಲ್ಲಿ ನಡೆದ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಅದೇ ರೀತಿ ಒಂದು ಧರ್ಮದ ವಿಚಾರವಾಗಿ ನೀಡಿರುವ ಹೇಳಿಕೆಯನ್ನೂ ಖಂಡಿಸುತ್ತೇವೆ. ಪ್ರಚೋದನಕಾರಿ ಹೇಳಿಕೆ ಪ್ರಕಟಿಸಿರುವ ನವೀನ್ ಬಿಜೆಪಿಯ ಬೆಂಬಲಿಗ. ಆತ ಈ ಹಿಂದೆ ಲೋಕಸಭೆ ಚುನಾವಣೆಯಲ್ಲಿ ತಾನು ಬಿಜೆಪಿಗೆ ಮತ ಹಾಕಿದ್ದು, ಈ ಬಾರಿ ಬಿಜೆಪಿ ಜಯ ಗಳಿಸಿದೆ ಎಂದು ಬರೆದುಕೊಂಡಿದ್ದ. ಈತ ಶಾಸಕ ಶ್ರೀನಿವಾಸ ಅವರ ಸಂಬಂಧಿಯಾದರೂ, ಅವರೊಡನೆ ರಾಜಕೀಯ ಸಂಬಂಧ ಹೊಂದಿಲ್ಲ. 

ಈತನ ಹೇಳಿಕೆ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೂ ಅದನ್ನು ತೆಗೆದುಕೊಂಡಿಲ್ಲ. ಇತ್ತೀಚೆಗೆ ನಮ್ಮ ಕಾರ್ಯಕರ್ತ ಕೇಂದ್ರ ಗೃಹ ಸಚಿವರ ವಿರುದ್ಧ ಕಾಮೆಂಟ್ ಮಾಡಿದ್ದಕ್ಕೆ ಸುಮೋಟೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರಾತ್ರೋರಾತ್ರಿ ಆತನನ್ನು ಬಂಧಿಸಿದ್ದರು. ನಾನು ಆತನ ಹೇಳಿಕೆಯನ್ನೂ ವಿರೋಧಿಸಿದ್ದೇನೆ. ಈಗ ದೂರು ಕೊಟ್ಟರೂ ಅದನ್ನು ತೆಗೆದುಕೊಂಡಿಲ್ಲ. ಪೊಲೀಸರು ಈ ವಿಚಾರದಲ್ಲಿ ಸರಿಯಾದ ಕ್ರಮ ಕೈಗೊಳ್ಳದಿರುವುದೇ ಈ ಎಲ್ಲ ಅನಾಹುತಕ್ಕೆ ಕಾರಣ ಎಂದು ಡಿಕೆಶಿ ದೂರಿದರು.

ನಮ್ಮ ಶಾಸಕರ ಮನೆ ಮೇಲೆ ದಾಳಿ ನಡೆಯುತ್ತಿದ್ದರೂ ಅವರ ರಕ್ಷಣೆಗೆ ಪೊಲೀಸರು ಮುಂದಾಗಲಿಲ್ಲ. ನವೀನ್ ಬಿಜೆಪಿಯ ಬೆಂಬಲಿಗ ಎಂಬ ಕಾರಣಕ್ಕೆ ಆತನ ವಿರುದ್ಧ ಬಹಳ ಹೊತ್ತಿನವರೆಗೂ ಪ್ರಕರಣ ದಾಖಲಿಸಿಕೊಳ್ಳಲಿಲ್ಲ. ಮೇಲಾಗಿ ಪೊಲೀಸರು ಮೂರು ಗಂಟೆ ಅಮೂಲ್ಯ ಸಮಯವನ್ನು ಹಾಳು ಮಾಡಿದ್ದರಿಂದಾಗಿ ಇಷ್ಟೆಲ್ಲ ಅನಾಹುತವಾಗಿದೆ. ಇದು ಸಂಪೂರ್ಣ ಪೊಲೀಸ್‌ ವೈಫಲ್ಯ. ಸರಕಾರದ ವೈಫಲ್ಯ. ಈ ಸರ್ಕಾರಕ್ಕೆ ನಮ್ಮ ಶಾಸಕರಿಗೆ ಹಾಗೂ ಸುತ್ತಮುತ್ತಲಿನ ಜನರಿಗೆ ರಕ್ಷಣೆ ನೀಡಲು ಆಗಲಿಲ್ಲ, ಪೊಲೀಸ್ ಠಾಣೆಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದ ಮೇಲೆ ಈ ಸರಕಾರ ಯಾಕಿರಬೇಕು? ಈ ಪ್ರಕರಣಕ್ಕೆ ಯಾರು ಹೊಣೆ? ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಜರುಗಿಸಿ. ನಾವು ಆಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು.

ರಾಜ್ಯದಲ್ಲಿ ಶಾಂತಿ ಕಾಪಾಡಬೇಕು, ಯಾರೂ ಕೂಡ ಪ್ರಚೋದನೆಗೆ ಒಳಗಾಗಬಾರದು. ಇದು ಸೂಕ್ಷ್ಮ ವಿಚಾರವಾಗಿದ್ದು, ರಾಜ್ಯದ ಘನತೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳಬೇಕು. ಹೀಗಾಗಿ ಪಕ್ಷ, ಜಾತಿ, ಧರ್ಮಬೇಧ ಮರೆತು ಶಾಂತಿ ಕಾಪಾಡಬೇಕು. ಶಾಂತಿ ಸ್ಥಾಪನೆಗಾಗಿ ನಾವು ಸರ್ಕಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ ಎಂದವರು ತಿಳಿಸಿದರು.

ಈ ವಿಚಾರದಲ್ಲಿ ಮುಖ್ಯಮಂತ್ರಿಗಳ ದಿಟ್ಟ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಅದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಆದರೆ ಅವರ ಸಂಪುಟದ ಮಂತ್ರಿಗಳು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ಜನರನ್ನು ರೊಚ್ಚಿಗೇಳುವಂತೆ ಪ್ರೇರೇಪಿಸುತ್ತದೆ. ಅವರ ಹೇಳಿಕೆಗಳನ್ನು ಮುಖ್ಯಮಂತ್ರಿಗಳು ಗಮನಿಸಬೇಕು. ಕಾಂಗ್ರೆಸ್ ನಾಯಕರು ಎಲ್ಲಿದ್ದಾರೆ ಎಂದು ಬಿಜೆಪಿ ಮುಖಂಡರು ಕೇಳುತ್ತಿದ್ದಾರೆ. ಸರ್ಕಾರದಲ್ಲಿ ನಾವಿಲ್ಲ. ಆದರೆ ನಾವು ಶಾಂತಿ ಕಾಪಾಡಲು ಎಲ್ಲ ಸಹಕಾರ ನೀಡುತ್ತೇವೆ. ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಆದರೆ ಅಮಾಯಕರಿಗೆ ತೊಂದರೆ ಕೊಡಬೇಡಿ.

ನಾನು ಈಶ್ವರಪ್ಪಣ್ಣ, ಅಶೋಕಣ್ಣ, ಸಿ.ಟಿ. ರವಿಯಣ್ಣ, ಶೋಭಕ್ಕ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುವುದಿಲ್ಲ. ಯಾರು ಬೆಂಕಿಗೆ ತುಪ್ಪ, ಸೀಮೆಎಣ್ಣೆ, ಪೆಟ್ರೋಲ್ ಸುರಿಯಿತ್ತಿದ್ದಾರೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ. ಇದು ಶಾಂತಿ ಕಾಪಾಡಬೇಕಾದ ಸಮಯ. ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ರಾಜಕೀಯ ಮಾಡೋದಿಕ್ಕೆ ಬೇರೆ ಸಂದರ್ಭ, ವಿಚಾರಗಳಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ ಬರೀ ಎಸ್ಡಿಪಿಐ, ಪಿಎಫ್ಐ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನಷ್ಟೆ ವಾಪಸ್ಸು ಪಡೆದಿಲ್ಲ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳ ವಿರುದ್ಧವೂ ದಾಖಲಿಸಿದ್ದ ಬರೀ ರಾಜಕೀಯ ಪ್ರೇರಿತ ಮೊಕದ್ದಮೆಗಳನ್ನು ವಾಪಸ್ಸು ಪಡೆದಿದೆ. ಈಗ ಯಾರಾದರೂ ತಪ್ಪು ಮಾಡಿದ್ದರೆ ಸರಕಾರ ಕಾನೂನು ಕ್ರಮ ಕೈಗೊಳ್ಳಲಿ. ನಾವೇನೂ ಬೇಡ ಅಂದಿಲ್ಲ. ತಪ್ಪು ಮಾಡಿದ ಯಾರನ್ನೂ ಕಾಂಗ್ರೆಸ್ ರಕ್ಷಿಸುವುದಿಲ್ಲ, ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಮಾಜಿ ಸಚಿವರಾದ ರಾಮಲಿಂಗಾರೆಡ್ಡಿ, ಕೃಷ್ಣಭೈರೇಗೌಡ, ಝಮೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್, ನಸೀರ್ ಅಹಮದ್, ಎಂ.ನಾರಾಯಣಸ್ವಾಮಿ, ಶಾಸಕರಾದ ರಿಝ್ವಾನ್ ಅರ್ಷದ್, ಎನ್.ಎ ಹ್ಯಾರಿಸ್, ಸೌಮ್ಯರೆಡ್ಡಿ ಮತ್ತಿತರ ನಾಯಕರು ಇದ್ದರು.

ಕೆ.ಜಿ ಹಳ್ಳಿಗೆ ಶಿವಕುಮಾರ್ ಭೇಟಿ

ಮಧ್ಯಾಹ್ನ ಗಲಭೆ ಪೀಡಿತ ಕೆ.ಜಿ ಹಳ್ಳಿಗೆ ಭೇಟಿ ನೀಡಿದ ಡಿ.ಕೆ ಶಿವಕುಮಾರ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ನಿವಾಸ, ದಾಳಿಗೆ ಒಳಗಾದ ಪೊಲೀಸ್ ಠಾಣೆಯನ್ನು ಪರಿಶೀಲಿಸಿದರು.

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿ, 'ಈ ದಾಳಿಯನ್ನು ಯಾರೇ ಮಾಡಿರಲಿ ಅದು ತಪ್ಪು. ಅವರ ಮೇಲೆ ಕಠಿಣ ನಿರ್ಧಾರ ಕೈಗೊಳ್ಳಲಿ. ಇಲ್ಲಿ ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಇಲ್ಲಿ ನಾವು ಸೌಹಾರ್ದತೆ ಕಾಪಾಡುವುದು ಮುಖ್ಯ. ಈ ಹಿಂದೆ ಮುಸ್ಲಿಂ ಬಾಂಧವರು ದೇವಾಲಯವನ್ನು ರಕ್ಷಿಸಲು ಮುಂದಾಗಿದ್ದನ್ನು ನಾವು ನೋಡಿದ್ದೇವೆ. ಹೀಗಾಗಿ ಯಾರೋ ಕಿಡಿಗೇಡಿಗಳು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ.

ಬಿಜೆಪಿಯವರು ಇದಕ್ಕೆ ರಾಜಕೀಯ ಬಣ್ಣ ಹಚ್ಚಿ ಲಾಭ ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿ ಒಬ್ಬರು ಬಿಟ್ಟರೆ ಉಳಿದವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದೆಲ್ಲ ಬಿಜೆಪಿಯ ರಾಜಕೀಯ ಪಿತೂರಿ' ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X