Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾದಿಯ ಸಂದೇಶ ಮಣ್ಣುಪಾಲು ಮಾಡುವುದು...

ಪ್ರವಾದಿಯ ಸಂದೇಶ ಮಣ್ಣುಪಾಲು ಮಾಡುವುದು ಧರ್ಮಕ್ಕೆ ಅಪಚಾರ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ12 Aug 2020 6:37 PM IST
share
ಪ್ರವಾದಿಯ ಸಂದೇಶ ಮಣ್ಣುಪಾಲು ಮಾಡುವುದು ಧರ್ಮಕ್ಕೆ ಅಪಚಾರ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಆ.12: ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಯಾವುದೇ ಧರ್ಮದ ಸಮುದಾಯ ಕಾನೂನಿಗೆ ಅತೀತರಲ್ಲ. ನೆಲದ ಕಾನೂನನ್ನು ಗೌರವಿಸದ ಎಲ್ಲರೂ ಶಿಕ್ಷೆಗೆ ಅರ್ಹರು. ಸರಕಾರ ಪುಂಡಾಟ ನಡೆಸಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಮುಂದೆಂದೂ ಇಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಅವಿವೇಕಿಯೊಬ್ಬ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದ. ಆತನಿಗೆ ಶಿಕ್ಷೆಯಾಗಬೇಕು ನಿಜ, ಆದರೆ ಪೈಗಂಬರ್ ಅನುಯಾಯಿಗಳು ದಾಂಧಲೆಗಿಳಿಯುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಕಾನೂನು ಪಾಲಕ ಪೊಲೀಸರು ಮತ್ತು ವರದಿಗಾಗಿ ತೆರಳಿದ್ದ ಪತ್ರಕರ್ತರ ಮೇಲೆ ಅಮಾನುಷ ದೌರ್ಜನ್ಯ ನಡೆಸುವ ಮೂಲಕ ನಾಗರಿಕ ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತದೆ ಎಂಬ ಕನಿಷ್ಠ ಪ್ರಜ್ಞೆಯೂ ಇಲ್ಲದೆ ವರ್ತಿಸಿರುವುದು ಅತ್ಯಂತ ಖಂಡನೀಯ ಎಂದು ಅವರು ಹೇಳಿದ್ದಾರೆ.

ಧರ್ಮದ ಹೆಸರಿನಲ್ಲಿ ಪುಂಡಾಟಿಕೆ ನಡೆಸುವ ಮೂಲಕ ಸಂವಿಧಾನದ ಮೇಲೆ ಸವಾರಿ ಮಾಡುವ ಇಂತಹ ಘಟನೆಗಳಿಂದ ಸಾರ್ವತ್ರಿಕ ತಿರಸ್ಕಾರಕ್ಕೆ ಮತ್ತು ಅವಗಣನೆಗೆ ಸಮುದಾಯವೊಂದು ಪದೇಪದೇ ಗುರಿಯಾಗುತ್ತಿರುವುದು ಸ್ವಯಂಕೃತ ಅಪರಾಧವಲ್ಲದೆ ಬೇರೇನಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ಘಟನೆ ಪೂರ್ವಯೋಜಿತ ಸಂಚು ಎಂಬ ಅನುಮಾನಕ್ಕೂ ಪುಷ್ಟಿ ನೀಡಿದೆ. ಸ್ಥಳೀಯ ಜನಪ್ರತಿನಿಧಿಗಳ, ಸ್ವಜನಪಕ್ಷಪಾತ, ಅಧಿಕಾರ ಲಾಲಸೆಗಳಿಂದಾಗಿ ಇಂಥದೊಂದು ಸಣ್ಣ ಕಿಡಿ ಬೆಂಕಿಯುಂಡೆ ಆಗುವ ಮೂಲಕ ಅಮಾಯಕ ಜನರ ಸಿಟ್ಟು- ಸೆಡವು ಸ್ಪೋಟಗೊಂಡಿದೆ. ನಿರುಪದ್ರವಿಗಳ ರಕ್ತ ಚೆಲ್ಲಾಡಿದೆ. ಕೌಟುಂಬಿಕ ದ್ವೇಷಸೂಯೆಗಳು ದುರ್ವರ್ತನೆಗೆ ವೇದಿಕೆಯಾಗಿರುವುದು ಸುಳ್ಳಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಅಲ್ಲಾಹ್ ನ್ಯಾಯ, ಪರೋಪಕಾರ ಹಾಗೂ ಆಪ್ತೇಷ್ಟರ ಸೌಜನ್ಯದ ಆಜ್ಞೆ ನೀಡುತ್ತಾನೆ. ಮತ್ತು ಅಶ್ಲೀಲಕಾರ್ಯ, ದುಷ್ಕೃತ್ಯ, ಅಕ್ರಮ, ಅತ್ಯಾಚಾರಗಳನ್ನು ನಿಷೇಧಿಸುತ್ತಾನೆ. ನೀವು ಜಾಗೃತರಾಗಲಿಕ್ಕಾಗಿ ಅವನು ನಿಮಗೆ ಉಪದೇಶ ನೀಡುತ್ತಾನೆ. ‘ಕುರ್‍ಆನ್ ಆಲ್ ಹಿಜ್ರ್ 15’ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ, ದಯವೇ ಧರ್ಮದ ಮೂಲವಯ್ಯಾ, ಕೂಡಲಸಂಗಯ್ಯನಂತಲ್ಲದೊಲ್ಲನಯ್ಯಾ ಎಂದು ಅವರು ಟ್ವೀಟ್ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X