Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 60 ವರ್ಷದವರೆಗಿನ ಕೋವಿಡ್ ಪೀಡಿತರ ಮನೆ...

60 ವರ್ಷದವರೆಗಿನ ಕೋವಿಡ್ ಪೀಡಿತರ ಮನೆ ಆರೈಕೆ: ಪರಿಷ್ಕೃತ ಮಾರ್ಗಸೂಚಿ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ12 Aug 2020 10:42 PM IST
share
60 ವರ್ಷದವರೆಗಿನ ಕೋವಿಡ್ ಪೀಡಿತರ ಮನೆ ಆರೈಕೆ: ಪರಿಷ್ಕೃತ ಮಾರ್ಗಸೂಚಿ ಪ್ರಕಟ

ಬೆಂಗಳೂರು, ಆ.12: 60 ವರ್ಷದವರೆಗಿನ ಕೋವಿಡ್ ಪೀಡಿತರು ಮನೆ ಆರೈಕೆಗೆ ಒಳಪಡಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದ್ದು, ಈ ಸಂಬಂಧ ಆರೋಗ್ಯ ಇಲಾಖೆ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ.

ಜೀವಕ್ಕೆ ಅಪಾಯವಿಲ್ಲ ಎನ್ನುವುದು ವೈದ್ಯಕೀಯ ವಿಶ್ಲೇಷಣೆಯಿಂದ ದೃಢಪಟ್ಟಲ್ಲಿ ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ವಿವಿಧ ಕಾಯಿಲೆಗಳನ್ನು ಎದುರಿಸುತ್ತಿರುವ 60 ವರ್ಷದವರೆಗಿನ ಕೋವಿಡ್ ಪೀಡಿತರು ಕೂಡ ಮನೆ ಆರೈಕೆಗೆ ಒಳಪಡಬಹುದು ಎಂದು ತಿಳಿಸಲಾಗಿದೆ.

ಈ ಹಿಂದೆ ಕೊರೋನ ಸೋಂಕಿನ ಲಕ್ಷಣಗಳು ಬಹಿರಂಗವಾಗಿ ಗೋಚರಿಸದ ಹಾಗೂ ಪ್ರಾರಂಭಿಕ ಹಂತದ ಲಕ್ಷಣಗಳು ಕಾಣಿಸಿಕೊಂಡ 50 ವರ್ಷದೊಳಗಿನವರಿಗೆ ಮಾತ್ರ ಮನೆ ಆರೈಕೆಗೆ ಅವಕಾಶ ನೀಡಲಾಗಿತ್ತು. ಈಗ ವಯೋಮಿತಿಯನ್ನು 60 ವರ್ಷಕ್ಕೆ ಏರಿಕೆ ಮಾಡಲಾಗಿದೆ.

ಅದೇ ರೀತಿ ಮಧುಮೇಹ, ಅಧಿಕ ರಕ್ತದೊತ್ತಡ, ಎಚ್‍ಐವಿ, ಕ್ಯಾನ್ಸರ್, ಹೃದಯ ಕಾಯಿಲೆ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳಿದ್ದು, ಕೋವಿಡ್ ರೋಗ ಲಕ್ಷಣ ಅಷ್ಟಾಗಿ ಗೋಚರಿಸದಿದ್ದಲ್ಲಿ ಕೂಡ ಮನೆ ಆರೈಕೆಯನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ. ಆದರೆ, ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಹಾಗೂ ಅಧಿಕಾರಿಗಳು ವ್ಯಕ್ತಿಯ ಆರೋಗ್ಯದ ಸ್ಥಿತಿಗತಿಯನ್ನು ಸಮರ್ಪಕವಾಗಿ ಮೌಲ್ಯಮಾಪನ ಮಾಡಿ, ಅವಕಾಶ ನೀಡಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಈ ಹಿಂದೆ ಮನೆ ಆರೈಕೆಗೆ ಒಳಗಾದವರಿಗೆ ಕೊರೋನ ಸೋಂಕು ಲಕ್ಷಣಗಳು 17 ದಿನಗಳವರೆಗೆ ಗೋಚರಿಸದಿದ್ದಲ್ಲಿ ಹಾಗೂ 10 ದಿನಗಳಿಂದ ಜ್ವರ ರಹಿತರಾಗಿದ್ದಲ್ಲಿ ವ್ಯಕ್ತಿ ಗುಣಮುಖನಾಗಿದ್ದಾನೆ ಎಂದು ಪರಿಗಣಿಸಿ, ಆರೈಕೆಯನ್ನು ಮುಕ್ತಾಯಗೊಳಿಸಲಾಗುತ್ತಿತ್ತು. ಆದರೆ, ಇನ್ನುಮಂದೆ ಸೋಂಕಿನ ಲಕ್ಷಣಗಳು ಪ್ರಾರಂಭವಾದಾಗಿನಿಂದ 10 ದಿನಗಳು ಅಥವಾ ಗಂಟಲ ದ್ರವದ ಪರೀಕ್ಷೆ ನಡೆಸಿದ 10 ದಿನಗಳ ಬಳಿಕ ಸೋಂಕಿನ ಲಕ್ಷಣಗಳು ಕಾಣಿಸಿಕೊಳ್ಳದಿದ್ದಲ್ಲಿ ವ್ಯಕ್ತಿ ಗುಣಮುಖನಾಗಿದ್ದಾನೆ ಎಂದು ಪರಿಗಣಿಸಲಾಗುತ್ತದೆ.

ಮುಂದಿನ 7 ದಿನಗಳು ಮನೆ ಕ್ವಾರಂಟೈನ್‍ಗೆ ಒಳಪಡಬೇಕು. ಗರ್ಭಿಣಿಯರಿಗೆ ಈ ಮೊದಲು ಹೆರಿಗೆ ದಿನಾಂಕದಿಂದ ನಾಲ್ಕು ವಾರದ ಮೊದಲು ಸೋಂಕಿತರಾದಲ್ಲಿ ಮನೆ ಆರೈಕೆಗೆ ಅವಕಾಶ ಇರಲಿಲ್ಲ. ಆದರೆ, ಈಗ ಆ ಅವಧಿಯನ್ನು ಎರಡು ವಾರಗಳಿಗೆ ಇಳಿಕೆ ಮಾಡಲಾಗಿದೆ.

ಲಕ್ಷಣವಿದ್ದಲ್ಲಿ ಅವಕಾಶವಿಲ್ಲ: ಸೋಂಕಿನ ಲಕ್ಷಣಗಳು ಬಹಿರಂಗವಾಗಿ ಗೋಚರಿಸಿದವರಿಗೆ ಮನೆ ಆರೈಕೆಗೆ ಅವಕಾಶವಿಲ್ಲ. ಕೋವಿಡ್ ಪೀಡಿತ ವ್ಯಕ್ತಿಗೆ ಮನೆ ಆರೈಕೆಗೆ ಅವಕಾಶ ನೀಡುವ ಮೊದಲು ಜಿಲ್ಲಾ ಆರೋಗ್ಯ ಪ್ರಾಧಿಕಾರ ಅಥವಾ ಬಿಬಿಎಂಪಿ ಆರೋಗ್ಯ ತಂಡವು ಮನೆಗೆ ಭೇಟಿ ನೀಡಿ, ವ್ಯವಸ್ಥೆ ಪರಿಶೀಲಿಸಲಿದೆ. ಮನೆಯಲ್ಲಿ ಪ್ರತ್ಯೇಕವಾಗಿ ಇರಲು ಅಗತ್ಯ ವ್ಯವಸ್ಥೆ ಇದ್ದಲ್ಲಿ ಮಾತ್ರ ಅನುಮತಿ ನೀಡಲಾಗುತ್ತದೆ.

ಮನೆಗೆ ತೆರಳುವಾಗ ಪರೀಕ್ಷೆಯಿಲ್ಲ: ಲಕ್ಷಣ ರಹಿತ, ಪ್ರಾರಂಭಿಕ ಲಕ್ಷಣಗಳಿರುವ ಕೊರೋನ ಸೋಂಕಿತರು ಆಸ್ಪತ್ರೆಗಳು ಹಾಗೂ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಚೇತರಿಸಿಕೊಂಡು, ಮನೆಗೆ ತೆರಳುವಾಗ ಮತ್ತೊಮ್ಮೆ ಕೋವಿಡ್ ಪರೀಕ್ಷೆ ನಡೆಸುವುದಿಲ್ಲ. ಅದೇ ರೀತಿ, ಮನೆ ಆರೈಕೆಗೆ ಒಳಪಟ್ಟವರು ನಿಗದಿತ ಅವಧಿಯ ಬಳಿಕ ಲಕ್ಷಣ ರಹಿತರಾದಲ್ಲಿ ಪರೀಕ್ಷೆಯ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X