ಕರ್ನಾಟಕ ಲೋಕ ಸೇವಾ ಆಯೋಗದ ಪರೀಕ್ಷಾ ದಿನಾಂಕ ಪ್ರಕಟ
ಬೆಂಗಳೂರು, ಆ.12: ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದ್ದು, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.
ಆ.18ರಂದು ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಕರು 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗದಲ್ಲಿ ನಡೆಸುತ್ತದೆ.
2020ನೇ ಸಾಲಿನ ಪ್ರಥಮಅಧಿವೇಶನದ ಇಲಾಖಾ ಪರೀಕ್ಷೆಗಳನ್ನು ಆ.18ರಿಂದ ಸೆ.16ರವರೆಗೆ ನಡೆಯುತ್ತದೆ.
ಆ.24ರಂದು ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story