Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆತ ಸತ್ಯವನ್ನೇ ಪೋಸ್ಟ್ ಮಾಡಿದ್ದಾನೆ,...

ಆತ ಸತ್ಯವನ್ನೇ ಪೋಸ್ಟ್ ಮಾಡಿದ್ದಾನೆ, ಸುಳ್ಳು ಹಾಕಿಲ್ಲ: ಪ್ರಚೋದನಕಾರಿ ಪೋಸ್ಟ್ ಸಮರ್ಥಿಸಿದ ಮಾಜಿ ಸಚಿವ ಜೀವರಾಜ್

ಬೆಂಗಳೂರು ಘಟನೆಗೆ ಕಾರಣವಾದ ಪೋಸ್ಟ್ ಬಗ್ಗೆ ಹೇಳಿಕೆ; ವ್ಯಾಪಕ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 Aug 2020 7:19 PM IST
share
ಆತ ಸತ್ಯವನ್ನೇ ಪೋಸ್ಟ್ ಮಾಡಿದ್ದಾನೆ, ಸುಳ್ಳು ಹಾಕಿಲ್ಲ: ಪ್ರಚೋದನಕಾರಿ ಪೋಸ್ಟ್ ಸಮರ್ಥಿಸಿದ ಮಾಜಿ ಸಚಿವ ಜೀವರಾಜ್

ಚಿಕ್ಕಮಗಳೂರು, ಆ.13: ಸಂಘಪರಿವಾರ ಗುರುವಾರ ನಡೆಸಿದ ಧರಣಿ ವೇಳೆ ಬಿಜೆಪಿ ಮುಖಂಡ, ಮಾಜಿ ಸಚಿವ ಜೀವರಾಜ್ ಅವರು ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಹಿಂಸಾಚಾರಕ್ಕೆ ಕಾರಣ ಎನ್ನಲಾದ ಪ್ರಚೋದನಕಾರಿ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿರುವುದು ಬೆಳಕಿಗೆ ಬಂದಿದೆ. 

ಶೃಂಗೇರಿ ಪಟ್ಟಣದ ರಸ್ತೆಯೊಂದರಲ್ಲಿರುವ ಶಂಕರಾಚಾರ್ಯ ಅವರ ಪುತ್ಥಳಿಯ ಗೋಪುರದ ಮೇಲೆ ಧಾರ್ಮಿಕ ಚಿಹ್ನೆಗಳಿರುವ ಬಾವುಟವೊಂದು ಬುಧವಾರ ರಾತ್ರಿ ಪತ್ತೆಯಾಗಿದ್ದು, ಘಟನೆ ಸಂಬಂಧ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಸಂಘಪರಿವಾರ ಗುರುವಾರ ಧರಣಿ ನಡೆಸಿತು. ಈ ವೇಳೆ ಮಾಜಿ ಸಚಿವ ಜೀವರಾಜ್ ಮಾತನಾಡುತ್ತಾ ಶಾಸಕ ಅಖಂಡ ಶ್ರೀನಿವಾಸ್‍ಮೂರ್ತಿ ಸಂಬಂಧಿ ಪಿ.ನವೀನ್ ಮಾಡಿದ್ದ ಪ್ರಚೋದನಕಾರಿ ಪೋಸ್ಟ್ ಅನ್ನು ಸಮರ್ಥಿಸಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಬುಧವಾರ ರಾತ್ರಿ ಶೃಂಗೇರಿ ಪಟ್ಟಣದ ರಸ್ತೆಯೊಂದರ ಬಳಿ ಇರುವ ಶಂಕರಾಚಾರ್ಯ ಪುತ್ಥಳಿ ನಿರ್ಮಿಸಿರುವ ಗೋಪುರದ ಮೇಲೆ ಧಾರ್ಮಿಕ ಚಿತ್ರಗಳಿರುವ ಬ್ಯಾನರ್ ಒಂದು ಪತ್ತೆಯಾಗಿತ್ತು. ಈ ಬ್ಯಾನರ್ ಅನ್ನು ಎಸ್‍ಡಿಪಿಐ ಪಕ್ಷದವರು ಹಾಕಿ, ಕೋಮು ಸಾಮರಸ್ಯ ಕದಡಲು ಹುನ್ನಾರ ನಡೆಸಿದ್ದಾರೆ, ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಗುರುವಾರ ಸಂಘಪರಿವಾರದ ಕಾರ್ಯಕರ್ತರು ಡಿ.ಎನ್.ಜೀವರಾಜ್ ನೇತೃತ್ವದಲ್ಲಿ ಪಟ್ಟಣದ ಪೊಲೀಸ್ ಠಾಣೆ ಎದುರು ದಿಡೀರ್ ಧರಣಿ ನಡೆಸಿದ್ದರು. ಈ ವೇಳೆ ಮಾಜಿ ಸಚಿವ ಜೀವರಾಜ್ ಠಾಣಾಧಿಕಾರಿಗಳೊಂದಿಗೆ ವಾಗ್ವಾದ ನಡೆಸಿ, ಆರೋಪಿಗಳು ಪಟ್ಟಣದಲ್ಲೇ ತಿರುಗಾಡುತ್ತಿದ್ದು, ಬಂಧಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದಾರೆ, ಆರೋಪಿಗಳನ್ನು ಬಂಧಿಸದಿದ್ದಲ್ಲಿ ಠಾಣೆ ಎದರೇ ಕುಳಿತು ಪ್ರತಿಭಟನೆ ಮಾಡುತ್ತೇವೆ ಎಂದು ಪಟ್ಟು ಹಿಡಿದ್ದಾರೆ. 

ಇದೇ ವೇಳೆ ಮಾತಿನ ಮಧ್ಯೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದ ಗಲಭೆಯ ವಿಚಾರ ಪ್ರಸ್ತಾಪಿಸಿ, ಶಾಸಕ ಅಖಂಡ ಶ್ರೀನಿವಾಸ್ ಅವರ ಅಕ್ಕನ ಮಗನಾಗಿರುವ ನವೀನ್ ಹಾಕಿರುವ ಪೋಸ್ಟ್ ಮುಂದಿಟ್ಟುಕೊಂಡು ಸಣ್ಣ ವಿಚಾರಕ್ಕೆ ಎಸ್‍ಡಿಪಿಐನವರು ಧಾಂದಲೆ ಮಾಡಿದ್ದಾರೆ. ನವೀನ್ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್ ನಲ್ಲಿ ಏನು ತಪ್ಪಿದೆ. ಆತ ಸತ್ಯವನ್ನೇ ಪೋಸ್ಟ್ ಮಾಡಿದ್ದಾನೆ, ಸುಳ್ಳು ಹಾಕಿಲ್ಲ. ಬೇಕಿದ್ದರೆ ಆ ಸಮುದಾಯದವರ ಪುಸಕ್ತವನ್ನೇ ಓದಲು ಹೇಳಿ ಎಂದು ಹೇಳುವ ಮೂಲಕ ಹಿಂಸಾಚಾರಕ್ಕೆ ಕಾರಣ ಎನ್ನಲಾಗುತ್ತಿರುವ ಪ್ರಚೋದನಕಾರಿ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಮಾಜಿ ಸಚಿವ ಜೀವರಾಜ್ ಅವರು ನವೀನ್ ಅನ್ನು ಸಮರ್ಥಿಸಿಕೊಳ್ಳುತ್ತಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಬೆಂಗಳೂರಿನ ಘಟನೆಗೆ ಕಾರಣವಾದ ಪೋಸ್ಟ್ ಅನ್ನು ಮಾಜಿ ಸಚಿವರೊಬ್ಬರೋ ಸಾರ್ವಜನಿಕವಾಗಿ ಸಮರ್ಥಿಸಿಕೊಂಡಿದ್ದರ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಡಿ.ಎನ್.ಜೀವರಾಜ್ ಒಮ್ಮೆ ಮಂತ್ರಿಯಾಗಿದ್ದು, ಮೂರು ಬಾರಿ ಶಾಸಕರಾಗಿದ್ದಾರೆ. ಇಂತಹ ಶಾಸಕ ಶಾಸಕರು ಜನರ ಪ್ರತಿನಿಧಿಯಾಗಿರುತ್ತಾರೆ. ಇಂತಹ ಪ್ರತಿನಿಧಿಗಳು ಮಾತನಾಡುವಾಗ ಯಾವ ಸಮುದಾಯಗಳಿಗೂ ನೋವಾಗುವಂತಹ ಹೇಳಿಕೆ ನೀಡಬಾರದು. ಮಾತಿನ ಬರದಲ್ಲಿ ಬೆಂಗಳೂರು ಗಲಭೆಗೆ ಕಾರಣನಾದ ನವೀನ್ ಪೋಸ್ಟ್ ಅನ್ನು ಸಮರ್ಥಿಸಿಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ. ಕೂಡಲೇ ಅವರು ಇದಕ್ಕೆ ಕ್ಷಮೆಯಾಚಿಸಬೇಕು. ಆ ಸಮುದಾಯದ ಧರ್ಮ ಗ್ರಂಥವನ್ನು ಅವರು ಸರಿಯಾಗಿ ಅಧ್ಯಯನ ಮಾಡದೇ ಮಾತನಾಡಿದಂತಿದ್ದು,  ರಾಜಕಾರಣಿಯಾದವರು ಧರ್ಮವನ್ನು ತನ್ನ ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕೈಯಲ್ಲಿ ಕೆಲಸ ಇಲ್ಲದವರು ಮಾತ್ರ ಇಂತಹ ಕೆಲಸ ಮಾಡಲು ಸಾಧ್ಯ. ಜೀವರಾಜ್ ಜವಬ್ದಾರಿಯಿಂದ ನಡೆದುಕೊಳ್ಳಬೇಕು. ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿಯಬಾರದು.
- ಎಚ್.ಎಚ್.ದೇವರಾಜ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X