Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತರ ಬಗ್ಗೆ ಮಾತನಾಡುವ ಮುನ್ನ ನಿಮ್ಮ...

ದಲಿತರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿ: ಬಿ.ಎಲ್.ಸಂತೋಷ್ ಗೆ ಝಮೀರ್ ಅಹ್ಮದ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ13 Aug 2020 7:21 PM IST
share
ದಲಿತರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿ: ಬಿ.ಎಲ್.ಸಂತೋಷ್ ಗೆ ಝಮೀರ್ ಅಹ್ಮದ್ ತಿರುಗೇಟು

ಬೆಂಗಳೂರು, ಆ.13: ಬಿ.ಎಲ್.ಸಂತೋಷ್ ಅವರೇ, ರಾಜ್ಯದ 224 ಶಾಸಕರಿಗೂ ರಕ್ಷಣೆ ನೀಡಬೇಕಾಗಿರುವುದು ಸರಕಾರದ ಕರ್ತವ್ಯ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರಕಾರಗಳಿವೆ, ಪೊಲೀಸ್ ಇಲಾಖೆ ನಿಮ್ಮ ಅಧೀನದಲ್ಲಿದೆ. ನಿಮ್ಮ ವೈಫಲ್ಯಕ್ಕೆ ಬೇರೆಯವರನ್ನು ಪ್ರಶ್ನಿಸಿದರೆ ಹೇಗೆ ಸ್ವಾಮಿ? ಎಂದು ಮಾಜಿ ಸಚಿವ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಕಿಡಿಗಾರಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್‍ಗಳನ್ನು ಮಾಡಿರುವ ಅವರು, ಆತ್ಮೀಯರಾದ ಅಖಂಡ ಶ್ರೀನಿವಾಸ ಮೂರ್ತಿಯವರು ದಲಿತ ಎಂಬ ಕಾರಣಕ್ಕೆ ನಮ್ಮ ಪಕ್ಷದಲ್ಲಿ ರಕ್ಷಣೆ ನೀಡುತ್ತಿಲ್ಲ ಎಂಬ ಬಿ.ಎಲ್.ಸಂತೋಷ್ ಅವರ ಆರೋಪ ಕೇವಲ ರಾಜಕೀಯ ಲಾಭಕ್ಕಷ್ಟೇ ಸೀಮಿತ. ಸಾಮಾಜಿಕ ನ್ಯಾಯ, ಜಾತ್ಯತೀತತೆ, ಸೋದರತೆ, ಸಮಾನತೆ ಸಾರುವ ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವವರು ನೀವೇ ಅಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ದಲಿತರನ್ನು ಹೀನಾಯವಾಗಿ ಬೈಯ್ಯುವ, ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದಿರುವ, ಸದಾ ಮೀಸಲಾತಿಯನ್ನು ವಿರೋಧಿಸುತ್ತಾ ಹೇಳಿಕೆ ನೀಡುವ ಅನಂತಕುಮಾರ್ ಹೆಗಡೆ ನಿಮ್ಮ ಪಕ್ಷದ ಸಂಸದರಲ್ಲವೇ? ಅವರಿಗೆ ಒಮ್ಮೆಯಾದರೂ ತಾವು ಬುದ್ಧಿ ಹೇಳಿದ್ದೀರಾ ಬಿ.ಎಲ್.ಸಂತೋಷ್ ಅವರೇ? ಎಂದು ಝಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ.

ನಿಮ್ಮ ಪಕ್ಷದಿಂದ ಎಷ್ಟು ಜನ ದಲಿತರಿಗೆ ವಿಧಾನಸಭೆ, ವಿಧಾನ ಪರಿಷತ್, ಬಿಬಿಎಂಪಿ, ಪಂಚಾಯತ್ ರಾಜ್ ಚುನಾವಣೆಗಳಲ್ಲಿ ಟಿಕೆಟ್ ನೀಡಿದ್ದೀರ ಬಿ.ಎಲ್.ಸಂತೋಷ್ ಅವರೇ? ಹೋಗಲಿ ಸಾಮಾಜಿಕ ನ್ಯಾಯದ ಪರವಾಗಿ ಒಮ್ಮೆಯಾದರೂ ಮಾತಾಡಿದ್ದೀರ? ದಲಿತರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ಆತ್ಮಸಾಕ್ಷಿಯನ್ನು ಪ್ರಶ್ನಿಸಿಕೊಳ್ಳುವುದು ಒಳಿತು ಎಂದು ಅವರು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷ ಎಂದಿಗೂ ಧರ್ಮಾಧಾರಿತ, ಜಾತಿ ಆಧಾರಿತ ರಾಜಕಾರಣ ಮಾಡಿಲ್ಲ. ನಮ್ಮದು ಸಮಾನತೆ, ಜಾತ್ಯತೀತತೆಯಲ್ಲಿ ನಂಬಿಕೆಯಿರುವ ಪಕ್ಷ. ಕೋಮು ಗಲಭೆಗಳ ಮೂಲಕ ಮತ ಧ್ರುವೀಕರಣ ಮಾಡುವ ಬಿಜೆಪಿಗೆ ನಮ್ಮ ಪಕ್ಷವನ್ನು ಪ್ರಶ್ನಿಸುವ ನೈತಿಕತೆ ಇದೆಯೇ? ಎಂದು ಝಮೀರ್ ಅಹ್ಮದ್ ಖಾನ್ ಸವಾಲು ಹಾಕಿದ್ದಾರೆ.

ಕಳೆದ 60 ವರ್ಷಗಳಲ್ಲಿ ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನು ಎಂಬುದು ಜನರ ಮನಸ್ಸಿನಲ್ಲಿದೆ. ಯಾವ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ, ಜಾತ್ಯತೀತತೆಯ ಪರವಿದೆ ಎಂಬುದು ಜನತೆಗೆ ಚೆನ್ನಾಗಿಯೇ ಗೊತ್ತು. ಬಿ.ಎಲ್.ಸಂತೋಷ್ ಅವರೇ, ನಿಮ್ಮ ಸುಳ್ಳು ಪ್ರಚಾರಗಳಿಗೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿ.ಎಲ್.ಸಂತೋಷ್ ಅವರೇ, ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಒಳಪಡಿಸಿ, ಜನರಿಗೆ ರಕ್ಷಣೆ ನೀಡಬೇಕಾಗಿರುವುದು ಆಡಳಿತದಲ್ಲಿರುವ ನಿಮ್ಮ ಪಕ್ಷದ ಕೆಲಸ. ಶಾಂತಿ ಸ್ಥಾಪನೆಗಾಗಿ ನಾನು ಶಕ್ತಿಮೀರಿ ಪ್ರಯತ್ನ ಮಾಡಿದ್ದೇನೆ. ಇನ್ನಾದರೂ ನಿಮ್ಮ ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಬದಿಗಿಟ್ಟು, ನಮ್ಮೊಂದಿಗೆ ನೆರವಾಗಿ ಎಂದು ಝಮೀರ್ ಅಹ್ಮದ್ ಖಾನ್ ಕರೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X