ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಆರೋಪಿ ಬಂಧನ
ಕುಂದಾಪುರ, ಆ.14: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಉಡುಪಿ ಡಿಸಿಐಬಿ ಪೊಲೀಸರು ಆ.13ರಂದು ರಾತ್ರಿ 10ಗಂಟೆ ಸುಮಾರಿಗೆ ಕುಂದಾಪುರದ ಕೋಡಿಯಲ್ಲಿ ಬಂಧಿಸಿದ್ದಾರೆ.
ಕೋಡಿಯ ಮುಲ್ಲಾ ಸ್ಟ್ರೀಟ್ ನಾಲ್ಕನೆ ಕ್ರಾಸ್‌ನ ಮೊಹಮ್ಮದ್ ಅಬ್ದುಲ್ ರೆಹಮಾನ್(24) ಬಂಧಿತ ಆರೋಪಿ. ಈತ ಗಾಂಜಾವನ್ನು ಮಾರಾಟ ಮಾಡುವ ಉದ್ದೇಶದಿಂದ ಎಂ.ಕೋಡಿಯ ಮಸೂದ್ ಯಾನೆ ಚಿನ್ನು ಎಂಬಾತ ನಿಂದ ತೆಗೆದುಕೊಂಡು ಮನೆಗೆ ಹೋಗುತ್ತಿರುವಾಗ ಉಡುಪಿ ಡಿಸಿಐಬಿ ನಿರೀಕ್ಷಕ ಮಂಜಪ್ಪಡಿ.ಆರ್. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತನಿಂದ 33 ಸಾವಿರ ರೂ. ಮೌಲ್ಯದ 1 ಕೆ.ಜಿ.100 ಗ್ರಾಂ ಗಾಂಜಾ ಮತ್ತು 10,000ರೂ. ವೌಲ್ಯದ ಮೊಬೈಲನ್ನು ಪೊಲೀಸರು ವಶಪಡಿಸಿ ಕೊಂಡಿದ್ದಾರೆ. ಆರೋಪಿ ಹಾಗೂ ಸೊತ್ತುಗಳನ್ನು ಕುಂದಾಪುರ ಪೊಲೀಸರಿಗೆ ಒಪ್ಪಿಸ ಲಾಗಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಉಡುಪಿ ಡಿಸಿಐಬಿ ಎಎಸ್‌ಐ ರವಿಚಂದ್ರ, ರಾಘವೇಂದ್ರ, ಸಂತೋಷ್ ಕುಂದರ್, ರಾಮು ಹೆಗ್ಡೆ, ಶಿವಾನಂದ, ಸುರೇಶ್, ಚಂದ್ರ ಶೆಟ್ಟಿ, ರಾಜಕುಮಾರ್, ದಯಾನಂದ ಪ್ರಭು, ಚಾಲಕ ರಾಘವೇಂದ್ರ ಪಾಲ್ಗೊಂಡಿದ್ದರು.







