ಉಡುಪಿ ಜಿಲ್ಲಾ ಬಿಜೆಪಿಯಿಂದ ಸ್ವಾತಂತ್ರ್ಯ ದಿನಾಚರಣೆ
ಉಡುಪಿ, ಆ.15: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಡಿಯಾಳಿಯ ಜಿಲ್ಲಾ ಕಚೇರಿಯ ಬಳಿಕ ನಡೆದ ದೇಶದ ಸ್ವಾತಂತ್ರ ದಿನಾಚರಣೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಬಿ.ರವಿ ಅಮೀನ್, ಪೆರ್ಣಂಕಿಲ ಶ್ರೀಶ ನಾಯಕ್, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಂ. ಅಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ದಿನಕರ ಪೂಜಾರಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಸತೀಶ್ ಕುಲಾಲ್, ನಗರಸಭಾ ಸದಸ್ಯ ಮಂಜುನಾಥ್ ಮಣಿಪಾಲ್ ಮುಂತಾದವರು ಉಪಸ್ಥಿತರಿದ್ದರು.
Next Story