Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊಡೇರಿ ಬಂದರಿನಲ್ಲಿ ನಾಡದೋಣಿ ದುರಂತ:...

ಕೊಡೇರಿ ಬಂದರಿನಲ್ಲಿ ನಾಡದೋಣಿ ದುರಂತ: ನಾಲ್ವರು ಮೀನುಗಾರರು ಸಮುದ್ರಪಾಲು; 8 ಮಂದಿಯ ರಕ್ಷಣೆ

ವಾರ್ತಾಭಾರತಿವಾರ್ತಾಭಾರತಿ16 Aug 2020 5:05 PM IST
share
ಕೊಡೇರಿ ಬಂದರಿನಲ್ಲಿ ನಾಡದೋಣಿ ದುರಂತ: ನಾಲ್ವರು ಮೀನುಗಾರರು ಸಮುದ್ರಪಾಲು; 8 ಮಂದಿಯ ರಕ್ಷಣೆ

ಬೈಂದೂರು, ಆ.16: ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೇರಿ ಬಂದರಿನ ಅಳಿವೆಬಾಗಿಲುವಿನಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಸಂಭವಿಸಿದ ನಾಡದೋಣಿ ದುರಂತದಲ್ಲಿ ನಾಲ್ವರು ಮೀನುಗಾರರು ಸಮುದ್ರಪಾಲಾಗಿರುವ ಬಗ್ಗೆ ವರದಿಯಾಗಿದೆ.

ಉಪ್ಪುಂದ ಗ್ರಾಮದ ಕರ್ಕಿಕಳಿ ನಿವಾಸಿಗಳಾದ ಬಿ.ನಾಗ(46), ಲಕ್ಷ್ಮಣ್ ಖಾರ್ವಿ(34), ಮಂಜುನಾಥ್ ಖಾರ್ವಿ(38), ಕರ್ಕಿಕಳಿ ಫಿಶರೀಸ್ ಕಾಲೋನಿಯ ಶೇಖರ್ ಖಾರ್ವಿ(35) ನಾಪತ್ತೆಯಾಗಿರುವ ಮೀನುಗಾರರು.

ಉಳಿದಂತೆ ದೋಣಿಯಲ್ಲಿದ್ದ ಉಪ್ಪುಂದ ಜನತಾ ಕಾಲೋನಿಯ ನಿತ್ಯಾನಂದ (39), ಮಹಾಬಲ(40), ಕರ್ಕಿಕಳಿಯ ಸತೀಶ್(32), ಅಣ್ಣಪ್ಪ (39), ಜನಾರ್ದನ(35), ವೆಂಕಟರಮಣ(38), ಚಂದ್ರಶೇಖರ್(32), ಉಪ್ಪುಂದ ಫಿಶರೀಸ್ ಕಾಲೋನಿಯ ಚಂದ್ರ(45) ಎಂಬವರು ಪಾರಾಗಿದ್ದಾರೆ. ಇವರಲ್ಲಿ ಐವರು ಮೀನುಗಾರರು ತೀವ್ರವಾಗಿ ಅಸ್ವಸ್ಥಗೊಂಡು ಬೈಂದೂರು ಖಾಸಗಿ ಆ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಒಟ್ಟು 12 ಮಂದಿ ಮೀನುಗಾರರು ಬೆಳಗ್ಗೆ 10.30ರ ಸುಮಾರಿಗೆ ಸಾಗರಶ್ರೀ ಎಂಬ ನಾಡದೋಣಿಯಲ್ಲಿ ಕೊಡೇರಿ ಬಂದರಿನಿಂದ ಸಮುದ್ರಕ್ಕೆ ಮೀನು ಗಾರಿಕೆಗೆ ತೆರಳಿದ್ದರು. ಇವರೊಂದಿಗೆ ಇತರ ದೋಣಿಗಳು ಕೂಡ ಮೀನುಗಾರಿಕೆ ನಡೆಸುತ್ತಿತ್ತು. ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುತ್ತಿದ್ದ ವೇಳೆ ಅಳಿವೆ ಬಾಗಿಲಿನಲ್ಲಿ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ಸಾಗರಶ್ರೀ ದೋಣಿಯು ನೀರಿನ ಮಧ್ಯೆ ಮಗುಚಿ ಬಿತ್ತೆನ್ನಲಾಗಿದೆ.

ಇದರಿಂದ ಎಲ್ಲ ಮೀನುಗಾರರು ನೀರಿಗೆ ಬಿದ್ದರೆನ್ನಲಾಗಿದೆ. ಇದರಲ್ಲಿ ನಾಲ್ವರು ಮೀನಿನ ಬಲೆಯಲ್ಲಿ ಸಿಲುಕಿ ಸಮುದ್ರದಲ್ಲಿ ಮುಳುಗಿ ನಾಪತ್ತೆ ಯಾದರೆಂದು ತಿಳಿದುಬಂದಿದೆ. ಉಳಿದವರನ್ನು ಇತರ ದೋಣಿಯಲ್ಲಿದ್ದ ಮೀನುಗಾರರು ರಕ್ಷಿಸಿ ದಡ ಸೇರಿಸಿದ್ದಾರೆ. ನಾಪತ್ತೆಯಾದವರಿಗಾಗಿ ಗಂಗೊಳ್ಳಿ ಕರಾವಳಿ ಕಾವಲು ಪಡೆ ನೇತೃತ್ವದಲ್ಲಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಶೋಧ ಕಾರ್ಯ ತಡರಾತ್ರಿಯವರೆಗೂ ಮುಂದುವರೆದಿದೆ. ನಾಪತ್ತೆಯಾದವರು ಮೀನಿನ ಬಲೆಯೊಂದಿಗೆ ಸ್ಥಳದಲ್ಲಿಯೇ ಇರಬಹು ದೆಂಬ ಶಂಕೆಯಲ್ಲಿ ಕ್ರೇನ್ ಬಳಕೆ ಮಾಡಲಾಗಿದೆ. ಆದರೆ ತಡರಾತ್ರಿಯವರಗೆ ಯಾರು ಕೂಡ ಪತ್ತೆಯಾಗಿಲ್ಲ ಎಂದು ಕರಾವಳಿ ಕಾಲು ಪಡೆಯ ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್, ಕುಂದಾಪುರ ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಉಪ ವಿಭಾಗಾಧಿಕಾರಿ ರಾಜು, ಕರಾವಳಿ ಕವಾಲು ಪಡೆಯ ಗಂಗೊಳ್ಳಿ ನಿರೀಕ್ಷಕ ಸಂದೀಪ್, ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಡೇರಿ ಬಂದರಿನಲ್ಲಿ ನಡೆದ ದುರಂತದಲ್ಲಿ ಸಮುದ್ರ ಪಾಲಾಗಿರುವ ನಾಲ್ವರು ಮೀನುಗಾರರ ಶೋಧ ಕಾರ್ಯ ನಡೆಸಲಾಗುತ್ತಿದೆ. ಕರಾವಳಿ ಕಾವಲು ಪಡೆಯ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಾಪತ್ತೆಯಾದವರ ಬಗ್ಗೆ ಎಲ್ಲಿಯಾದರೂ ಮಾಹಿತಿ ಸಿಕ್ಕಿದರೆ ಸಾರ್ವಜನಿಕರು ಕೂಡಲೇ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು.

-ಜಿ.ಜಗದೀಶ್, ಜಿಲ್ಲಾಧಿಕಾರಿ, ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X