Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. 5 ವರ್ಷಗಳಲ್ಲಿ ರಾಜ್ಯದ ಜಿಡಿಪಿ 35 ಲಕ್ಷ...

5 ವರ್ಷಗಳಲ್ಲಿ ರಾಜ್ಯದ ಜಿಡಿಪಿ 35 ಲಕ್ಷ ಕೋಟಿ ರೂ.ಗೆ ಏರಿಕೆ ಸರಕಾರದ ಗುರಿ: ಡಿಸಿಎಂ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ16 Aug 2020 5:14 PM IST
share
5 ವರ್ಷಗಳಲ್ಲಿ ರಾಜ್ಯದ ಜಿಡಿಪಿ 35 ಲಕ್ಷ ಕೋಟಿ ರೂ.ಗೆ ಏರಿಕೆ ಸರಕಾರದ ಗುರಿ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ಆ. 16: ಕೋವಿಡ್-19, ನೆರೆ ಸೇರಿದಂತೆ ಹತ್ತು ಹಲವು ಸವಾಲುಗಳ ನಡುವೆಯೂ ಕರ್ನಾಟಕದ ಜಿಡಿಪಿ ಸದೃಢ ಮತ್ತು ಸುಸ್ಥಿರವಾಗಿ ಬೆಳೆಯುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ ಅದರ ಪ್ರಮಾಣ 35 ಲಕ್ಷ ಕೋಟಿ ರೂ. ಮುಟ್ಟುವ ಸಾಧ್ಯತೆ ಇದೆ. ಈ ಕನಸು ನನಸಾಗಲು ಸರಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ರವಿವಾರ ಸ್ಪೇರ್ ಟ್ರಾವೆಲ್ ಮೀಡಿಯಾ ಮತ್ತು ಎಕ್ಸಿಬೀಷನ್ ಸಂಸ್ಥೆ ಆಯೋಜಿಸಿದ್ದ `ಭವಿಷ್ಯದ ಕರ್ನಾಟಕ ಶೃಂಗಸಭೆ-2020'ಯಲ್ಲಿ ಆನ್‍ಲೈನ್ ಮೂಲಕ ಮಾತನಾಡಿದ ಅವರು, ಈಗಾಗಲೇ ರಾಜ್ಯವು 18 ಲಕ್ಷ ಕೋಟಿ ರೂ. ಜಿಡಿಪಿಯನ್ನು ಹೊಂದಿದೆ. ಐದು ವರ್ಷಗಳಲ್ಲಿ ಇದರ ಪ್ರಮಾಣ 36 ಲಕ್ಷ ಕೋಟಿ ರೂ.ದಾಟಲಿದೆ. ಅದರ ನಂತರದ ಐದು ವರ್ಷಗಳಲ್ಲಿ 75 ಲಕ್ಷ ಕೇಟಿ ರೂ. ಜಿಡಿಪಿ ಹೊಂದುವುದು ನಮ್ಮ ಹೆಗ್ಗುರಿ ಎಂದರು.

ರಾಜ್ಯದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಕೃಷಿ, ಐಟಿ-ಬಿಟಿ, ಕೈಗಾರಿಕೆ, ಉತ್ಪಾದನೆ ಹಾಗೂ ಸೇವಾ ವಲಯಗಳಿಗೆ ಮತ್ತಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ ಸರಕಾರ ಅನೇಕ ಕ್ರಮಗಳನ್ನು ಕೈಗೊಂಡಿದೆ. ಐದು ವರ್ಷಗಳಲ್ಲಿ ನಿಗದಿತ ಮೈಲುಗಲ್ಲು ದಾಟಲು ಸರ್ವ ಪ್ರಯತ್ನಗಳನ್ನು ನಡೆಸಲಾಗುತ್ತಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಮೈಸೂರು-ಬೀದರ್ ಕಾರಿಡಾರ್: ಕೈಗಾರಿಕೆ ಮತ್ತು ವಾಣಿಜ್ಯ ಅಭಿವೃದ್ಧಿಗೆ ಬೇಕಾದ ಎಲ್ಲ ಸೌಕರ್ಯಗಳನ್ನು ಕಲ್ಪಿಸಲು ಸರಕಾರ ಮುಂದಾಗಿದ್ದು, ಇದಕ್ಕೆ ಪೂರಕವಾಗಿ ಮೈಸೂರು-ಬೀದರ್ ಕೈಗಾರಿಕಾ ಕಾರಿಡಾರ್ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಈಗಾಗಲೇ ಇರುವ ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಮುಂಬಯಿ ಕಾರಿಡಾರ್ ಗಳಂತೆ ಈ ಕಾರಿಡಾರ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ತಿಳಿಸಿದರು.

ಇದೇ ರೀತಿಯಲ್ಲಿ ಕೈಗಾರಿಕೆ ಭೂಮಿ ಸಿಗುವುದೂ ಸೇರಿದಂತೆ ಬೇರೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಅನೇಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದಪಡಿ ಕಾಯ್ದೆ, ಕಾರ್ಮಿಕ ಕಾಯ್ದೆಗಳ ಸರಳೀಕರಣ ಸೇರಿದಂತೆ ಹತ್ತಾರು ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇದರಿಂದ ರಾಜ್ಯದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡುವುದು ಅತ್ಯಂತ ಸರಳವಾಗಿದೆ ಎಂದು ಅವರು ವಿವರಿಸಿದರು.

ಸಿಂಗಲ್ ವಿಂಡೋ ವ್ಯವಸ್ಥೆ: ದೇಶದಲ್ಲಿಯೇ ಕೈಗಾರಿಕೆ ಕ್ಷೇತ್ರದಲ್ಲಿ ರಾಜ್ಯ ಮಾದರಿ ನೀತಿ ಅನುಸರಿಸುತ್ತಿದೆ. ಯಾವುದೇ ಕೈಗಾರಿಕೆಯನ್ನಾಗಲಿ, ಅದು ಎಷ್ಟೇ ದೊಡ್ಡ ಕೈಗಾರಿಕೆಯನ್ನಾಗಲಿ ಈ ನೆಲದ ಕಾನೂನನ್ನು ಗಮನದಲ್ಲಿಟ್ಟುಕೊಂಡು ಕೇವಲ ಒಂದು ಅರ್ಜಿ ಸಲ್ಲಿಸಿ ಸ್ಥಾಪಿಸಬಹುದು. ಆಮೇಲೆ ಅನುಮತಿ ಪಡೆಯಬಹುದು. ಸರಕಾರದ ಅಧೀನದಲ್ಲಿರುವ ಎಲ್ಲ ಸಂಸ್ಥೆಗಳನ್ನು ಒಂದೆಡೆ ಅನುಸಂಧಾನಗೊಳಿಸಲಾಗಿದ್ದು, ಏಕಗವಾಕ್ಷಿ ಮೂಲಕ ಎಲ್ಲ ಬಗೆಯ ಅನುಮತಿಗಳನ್ನು ಯಾವುದೇ ಅಡ್ಡಿ- ಆತಂಕವಿಲ್ಲದೆ ಪಡೆದುಕೊಳ್ಳಬಹುದು. ಗುಜರಾತ್ ಮತ್ತು ರಾಜಸ್ತಾನ ರಾಜ್ಯಗಳಲ್ಲಿ ಇಂತಹ ವ್ಯವಸ್ಥೆ ಇದೆ. ಆದರೆ ಸಣ್ಣ ಪ್ರಮಾಣದ ಕೈಗಾರಿಕೆಗಳಿಗೆ ಈ ಅವಕಾಶವಿದೆ. ಆದರೆ, ರಾಜ್ಯದಲ್ಲಿ ಬೃಹತ್ ಕೈಗಾರಿಕೆಗಳಿಗೂ ಈ ಅವಕಾಶ ಕಲ್ಪಿಸಲಾಗಿದೆ ಎಂದರು.

ಸದೃಢ ಕರ್ನಾಟಕವನ್ನು ಕಟ್ಟಲು ಎಲ್ಲ ರೀತಿಯ ಸವಾಲುಗಳನ್ನು ಮೆಟ್ಟಿನಿಂತು ಸರಕಾರ ಕೆಲಸ ಮಾಡುತ್ತಿದೆ. ರಾಜಕೀಯ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸಲಾಗುತ್ತಿದೆ. ಏನೇ ಆದರೂ, ರಾಜ್ಯದ ಅಭಿವೃದ್ಧಿಯಲ್ಲಿ ರಾಜಿ ಪ್ರಶ್ನೆಯೇ ಇಲ್ಲ. ಇದು ಸರಕಾರದ ಒಂದು ಅಂಶದ ನೀತಿಯಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು. ಸ್ಟಾರ್ಟ್ ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಅನಿಲ್ ಶೆಟ್ಟಿ ಮತ್ತು ಕೀರ್ತಿನಾರಾಯಣ ಪಾಲ್ಗೊಂಡಿದ್ದರು.

ರಾಜ್ಯದಲ್ಲಿ ಸದ್ಯಕ್ಕೆ ಕೋವಿಡ್-19 ಸೋಂಕು ನಿಯಂತ್ರಣದಲ್ಲಿದೆ. ಇನ್ನೂ ಸರಕಾರದ ವಶದಲ್ಲಿರುವ ಒಟ್ಟು ಕೋವಿಡ್ ಹಾಸಿಗೆಗಳ ಪೈಕಿ ಶೇ.30ರಷ್ಟು ಖಾಲಿ ಇವೆ. ಈಗ ಬೇಡಿಕೆಗಿಂತ ನಮ್ಮಲ್ಲಿರುವ ಸೌಲಭ್ಯಗಳೇ ಹೆಚ್ಚಾಗಿವೆ. ಹೀಗಾಗಿ ಯಾವುದೇ ಆತಂಕವಿಲ್ಲ. ಜನರು ಧೈರ್ಯವಾಗಿರಬಹುದು'

-ಡಾ.ಅಶ್ವತ್ಥ ನಾರಾಯಣ, ಉಪಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X