ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ವಿರುದ್ಧ ಕ್ರಮ: ಗೃಹ ಸಚಿವ ಬೊಮ್ಮಾಯಿ
ಬೆಂಗಳೂರು, ಆ.16: ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳಕನಾರಿ ಸಂದೇಶಗಳನ್ನು ಹರಿಬಿಟ್ಟು, ಗಲಭೆ ಸೃಷ್ಟಿಸುವ ವಾತಾವರಣಕ್ಕೆ ಕಡಿವಾಣ ಹಾಕಬೇಕಿದ್ದು, ಈ ಸಂಬಂಧ ಸಾಮಾಜಿಕ ಜಾಲತಾಣಗಳ ಕಂಪನಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರವಿವಾರ ಆರ್ಟಿ ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಹರಿಬಿಡಲಾಗುತ್ತಿದೆ. ಹೀಗಾಗಿ, ಘಟನೆ ಆದ ನಂತರ ಕ್ರಮ ಕೈಗೊಳ್ಳುವುದು ಒಂದು ಭಾಗವಾದರೆ, ಘಟನೆ ಸಂಭವಿಸುವ ಮುನ್ನವೇ ಯಾವ ರೀತಿ ಕ್ರಮ ಕೈಗೊಳ್ಳಬಹುದು ಎನ್ನುವ ಕುರಿತು ಚರ್ಚೆ ನಡೆಸಲಾಗುತ್ತಿದೆ ಎಂದರು.
ಮುಂದಿನ ವಾರದಲ್ಲಿ ಸೈಬರ್ ಕ್ರೈಂ ಪೊಲೀಸರ ಹಾಗೂ ಸಂಬಂಧಿಸಿದ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದು, ಇದನ್ನು ನಿಯಂತ್ರಿಸುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
Next Story