ನರಳುತ್ತಿರುವ ಸಂತ್ರಸ್ತರು, ಕುಸಿದ ಮನೆಗಳು ಬಿಜೆಪಿ ಸರಕಾರದ ವರ್ಷದ ಸಂಭ್ರಮವನ್ನು ಅಣಕಿಸುತ್ತಿವೆ: ಸಿದ್ದರಾಮಯ್ಯ

ಬೆಂಗಳೂರು, ಆ. 16: `ನಾವು ಹೇಳಿದರೆ ರಾಜಕೀಯ ಎನ್ನುತ್ತೀರಿ ಮುಖ್ಯಮಂತ್ರಿ ಯಡಿಯೂರಪ್ಪನವರೇ, ಪತ್ರಿಕಾ ವರದಿಗಳನ್ನಾದರೂ ಒಪ್ಪಿಕೊಳ್ತೀರಾ? ಕಳೆದ ವರ್ಷ ಅತಿವೃಷ್ಟಿಯಿಂದ ನಲುಗಿಹೋದ 22 ಜಿಲ್ಲೆಗಳ ಸಂತ್ರಸ್ತರ ಪಾಲಿಗೆ ನಿಮ್ಮ ಸರಕಾರ ಸತ್ತುಹೋಗಿದೆ. ಅವರ ಬಾಯಿಯಿಂದಲೇ ಕೇಳಿ, ಹೃದಯ ಇದ್ದರೆ ಅವರ ಕಷ್ಟಗಳಿಗೆ ಸ್ಪಂದಿಸಿ ಪುಣ್ಯ ಕಟ್ಟಿಕೊಳ್ಳಿ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಇಂದಿಲ್ಲಿ ಲೇವಡಿ ಮಾಡಿದ್ದಾರೆ.
ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕಳೆದ ವರ್ಷ ಅತಿವೃಷ್ಟಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರ ಕೇಳಿದ್ದು 35,160 ಕೋಟಿ ರೂ.ಕೇಂದ್ರ ಸರಕಾರ ಕೊಟ್ಟಿದ್ದು 1,869 ಕೋಟಿ ರೂ., ಶೆಡ್‍ಗಳಲ್ಲಿ ನರಳುತ್ತಿರುವ ಸಂತ್ರಸ್ತರು, ಕುಸಿದ ಮನೆಗಳು, ಹಾಳಾದ ರಸ್ತೆಗಳು, ಮುರಿದ ಸೇತುವೆಗಳು ಎಲ್ಲವೂ ಬಿಜೆಪಿ ಸರಕಾರದ ವರ್ಷದ ಸಂಭ್ರಮವನ್ನು ಅಣಕಿಸುವಂತೆ ಹಾಗೆಯೇ ಇದೆ, ಕಣ್ಬಿಟ್ಟು ನೋಡಿ' ಎಂದು ಆಕ್ರೋಶ ಹೊರಹಾಕಿದ್ದಾರೆ.
Next Story