ಅಕ್ಟೋಬರ್ 4ರಂದು ಶಿಕ್ಷಕರ ಅರ್ಹತಾ ಪರೀಕ್ಷೆ

ಬೆಂಗಳೂರು, ಆ.17 : ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಅಕ್ಟೋಬರ್ 4ರಂದು ನಡೆಯಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಕೊರೋನ ಸಾಂಕ್ರಾಮಿಕ ಪ್ರಸರಣದ ಹಿನ್ನೆಲೆಯಲ್ಲಿ ಎಲ್ಲ ಅಗತ್ಯ ಸುರಕ್ಷತಾ ಕ್ರಮಗಳನು ಅನುಸರಿಸಲಾಗುತ್ತದೆ. ಈ ಕುರಿತು ಕೈಗೊಳ್ಳಬೇಕಾದ ಉಪಕ್ರಮಗಳ ಕುರಿತಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಪೂರ್ವ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಸಚಿವರು ಹೇಳಿದ್ದಾರೆ.
Next Story





