Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರವಾಹ ಭೀತಿ: ನದಿತೀರದ ಗ್ರಾಮಗಳು,...

ಪ್ರವಾಹ ಭೀತಿ: ನದಿತೀರದ ಗ್ರಾಮಗಳು, ಪರಿಹಾರ ಕೇಂದ್ರಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ಭೇಟಿ

ವಾರ್ತಾಭಾರತಿವಾರ್ತಾಭಾರತಿ17 Aug 2020 11:32 PM IST
share
ಪ್ರವಾಹ ಭೀತಿ: ನದಿತೀರದ ಗ್ರಾಮಗಳು, ಪರಿಹಾರ ಕೇಂದ್ರಗಳಿಗೆ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ಭೇಟಿ

ಬೆಳಗಾವಿ, ಆ.17: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಸವದತ್ತಿ ತಾಲೂಕಿನ ನವೀಲುತೀರ್ಥ ಜಲಾಶಯಕ್ಕೆ ಮೊದಲು ಭೇಟಿ ನೀಡಿದ ಜಿಲ್ಲಾಧಿಕಾರಿ, ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು.

ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ನೀರು ಬಿಡುಗಡೆಗಿಂತ ಮುಂಚೆ ನದಿ ತೀರದ ಜನರಿಗೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ಮುಂಚಿತವಾಗಿ ನೀಡಬೇಕು ಎಂದು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನವೀಲುತೀರ್ಥ ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರ ಕೃಷ್ಣಾಜಿರಾವ್ ಉಪಸ್ಥಿತರಿದ್ದರು.

ಇದಕ್ಕೂ ಮುಂಚೆ ಬೈಲಹೊಂಗಲ ಪಟ್ಟಣದ ಕೆಲ ಪ್ರದೇಶಗಳನ್ನು ಸುತ್ತಾಡಿದ ಜಿಲ್ಲಾಧಿಕಾರಿಗಳು, ನೆರೆಹಾವಳಿಯಿಂದ ಉಂಟಾಗುವ ಸಮಸ್ಯೆಗಳ ಕುರಿತು ಪರಿಶೀಲನೆ ಕೈಗೊಂಡು, ನಯಾನಗರ ಸೇತುವೆ ವೀಕ್ಷಿಸಿದರು.

ಪರಿಹಾರ ಕೇಂದ್ರಗಳಿಗೆ ಭೇಟಿ: ಮಲಪ್ರಭಾ ನದಿ ತೀರದ ರಾಮದುರ್ಗ ತಾಲೂಕಿನ ಹಿರೇ ಹಂಪಿಹೊಳಿ ಹಾಗೂ ಚಿಕ್ಕ ಹಂಪಿಹೊಳಿ ಗ್ರಾಮದ ಒಟ್ಟು 51 ಕುಟುಂಬಗಳನ್ನು ಮುಂಜಾಗ್ರತಾ ಕ್ರಮವಾಗಿ ಸುರೇಬಾನದ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಇಲ್ಲಿನ ಎಪಿಎಂಸಿ ಆವರಣದ ಕೇಂದ್ರದಲ್ಲಿ 12 ಕುಟುಂಬಗಳು ಮತ್ತು ಹೈಸ್ಕೂಲಿನಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರದಲ್ಲಿ 39 ಕುಟುಂಬಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಈ ಕುಟುಂಬಗಳಿಗೆ ಊಟೋಪಹಾರ ಸೇರಿದಂತೆ ಕೋವಿಡ್-19 ಹಿನ್ನೆಲೆಯಲ್ಲಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪರಿಹಾರ ಕೇಂದ್ರಗಳಲ್ಲಿ ಇರುವವರಿಗೆ ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಆಕ್ಸಿಮೀಟರ್ ಮತ್ತಿತರ ಅಗತ್ಯ ಉಪಕರಣ ನೀಡಲಾಗಿದ್ದು, ಪ್ರತಿ ಪರಿಹಾರ ಕೇಂದ್ರಕ್ಕೆ ವೈದ್ಯರ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಸೇರಿದಂತೆ ಐದು ಜನರ ಪ್ರತ್ಯೇಕ ತಂಡ ನಿಯೋಜಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ರಾಮದುರ್ಗ ಶಾಸಕರಾದ ಮಹಾದೇವಪ್ಪ ಯಾದವಾಡ ಅವರು, ಪರಿಹಾರ ಕೇಂದ್ರಗಳಲ್ಲಿ ಆಸರೆ ಪಡೆದುಕೊಂಡಿರುವ ಕುಟುಂಬಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ರೀತಿ ರಾಮದುರ್ಗ ತಾಲ್ಲೂಕಿನ ಗೊನ್ನಾಗರದಲ್ಲಿ ಕೂಡ ಪರಿಹಾರ ಕೇಂದ್ರಕ್ಕೂ ಭೇಟಿ ನೀಡಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು, ಅಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಸದರಿ ಕೇಂದ್ರದಲ್ಲಿ 48 ಕುಟುಂಬಗಳ 200 ಕ್ಕೂ ಅಧಿಕ ಜನರು ಆಶ್ರಯ ಪಡೆದುಕೊಂಡಿದ್ದಾರೆ. ಪರಿಹಾರ ಕೇಂದ್ರದಲ್ಲಿನ ವ್ಯವಸ್ಥೆಯ ಕುರಿತು ಗ್ರಾಮಸ್ಥರಿಂದಲೂ ಮಾಹಿತಿಯನ್ನು ಪಡೆದುಕೊಂಡರು. 

ಸದ್ಯಕ್ಕೆ ಪ್ರವಾಹ ಸ್ಥಿತಿ ಎದುರಾಗಿಲ್ಲ; ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ನದಿತೀರದ ಕೆಲ ಗ್ರಾಮಗಳ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಬೈಲಹೊಂಗಲ ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ ವಿವರಿಸಿದರು.

ಲೋಳಸೂರ ಸೇತುವೆ ಪರಿಶೀಲನೆ: ಇದಾದ ಬಳಿಕ ಪ್ರವಾಹದಿಂದ ಬಾಧಿತಗೊಳ್ಳುವ ಗೋಕಾಕ ನಗರದ ಉಪ್ಪಾರ ಓಣಿ, ಕುಂಬಾರ ಗಲ್ಲಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಹಿರೇಮಠ ಭೇಟಿ ನೀಡಿದರು.

ಕಳೆದ ವರ್ಷ ಗೋಕಾಕ ನಗರದ ಅನೇಕ ಬಡಾವಣೆಗಳಲ್ಲಿ ಪ್ರವಾಹದಿಂದ ಭಾರೀ ಹಾನಿಯಾಗಿತ್ತು. ಆದ್ದರಿಂದ ಈ ಬಾರಿ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು ಎಂದು ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರ ಅವರಿಗೆ ನಿರ್ದೇಶನ ನೀಡಿದರು.

ಲೋಳಸೂರ ಸೇತುವೆಯನ್ನು ಕೂಡ ಖುದ್ದಾಗಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಾದ್ಯಂತ ಕಳೆದ ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಸ್ಥಳೀಯ ಅಧಿಕಾರಿಗಳು ಜಾಗರೂಕತೆಯಿಂದ ಕೆಲಸ ಮಾಡಬೇಕು. ಜನರು, ಆಸ್ತಿಪಾಸ್ತಿಗಳ ರಕ್ಷಣೆ ಮತ್ತು ಜಾನುವಾರುಗಳ ರಕ್ಷಣೆಗೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸೂಚನೆ ನೀಡಿದರು.

ಪ್ರವಾಹ ಸೇರಿದಂತೆ ಯಾವುದೇ ಬಗೆಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಅಗತ್ಯವಿದ್ದರೆ ನದಿ ತೀರದ ಗ್ರಾಮಗಳ ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗುವುದು ಎಂದು ಬೈಲಹೊಂಗಲ ಉಪ ವಿಭಾಗಾಧಿಕಾರಿಗಳಾದ ಶಿವಾನಂದ ಭಜಂತ್ರಿ ತಿಳಿಸಿದರು. ಬೈಲಹೊಂಗಲ್, ರಾಮದುರ್ಗ, ಗೋಕಾಕ ತಾಲೂಕುಗಳ ತಹಶೀಲ್ದಾರರು, ನೋಡಲ್ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X