ಸ್ವರಾ ಭಾಸ್ಕರ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣದ ಪ್ರಕ್ರಿಯೆ ಆರಂಭಿಸಲು ಅರ್ಜಿ
ಸುಪ್ರೀಂ ಕೋರ್ಟನ್ನು ಟೀಕಿಸಿದ ಆರೋಪ

ಹೊಸದಿಲ್ಲಿ: ಬಾಬರಿ ಮಸೀದಿ ತೀರ್ಪಿಗೆ ಸಂಬಂಧಿಸಿ ಸುಪ್ರೀಂ ಕೋರ್ಟನ್ನು ಟೀಕಿಸಿದ್ದಾರೆ ಎಂದು ಆರೋಪಿಸಿ ನಟಿ ಸ್ವರಾ ಭಾಸ್ಕರ್ ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿದೆ.
ಕರ್ನಾಟಕದ ಉಷಾ ಶೆಟ್ಟಿ ಎಂಬವರು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮುಂದೆ ಅರ್ಜಿ ಸಲ್ಲಿಸಿದ್ದಾರೆ.
2020ರ ಫೆಬ್ರವರಿ 1ರಂದು ಮುಂಬೈಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವರಾ ಭಾಸ್ಕರ್ ಸುಪ್ರೀಂ ಕೋರ್ಟ್ ವಿರುದ್ದ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದೆ.
ನ್ಯಾಯಾಂಗ ನಿಂದನೆ ಕಾಯ್ದೆ 1971ರ ಸೆಕ್ಷನ್ 15ರಡಿ ವ್ಯಕ್ತಿಯೊಬ್ಬರ ವಿರುದ್ದ ನಿಂದನೆ ಪ್ರಕರಣದ ಪ್ರಕ್ರಿಯೆಗಳನ್ನು ಆರಂಭಿಸಲು ಅಟಾರ್ನಿ ಜನರಲ್ ಅಥವಾ ಸಾಲಿಸಿಟರ್ ಜನರಲ್ ಅವರ ಒಪ್ಪಿಗೆ ಅಗತ್ಯವಾಗಿದೆ.
Next Story