Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ತಾಪಂ ಸಭೆ: ಗೋಮಾಳ ಜಾಗ...

ಮಂಗಳೂರು ತಾಪಂ ಸಭೆ: ಗೋಮಾಳ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಸದಸ್ಯರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 Aug 2020 8:39 PM IST
share
ಮಂಗಳೂರು ತಾಪಂ ಸಭೆ: ಗೋಮಾಳ ಜಾಗ ಒತ್ತುವರಿ ವಿರುದ್ಧ ಕ್ರಮಕ್ಕೆ ಸದಸ್ಯರ ಆಗ್ರಹ

ಮಂಗಳೂರು, ಆ.18: ಮಂಗಳೂರು ತಾಲೂಕಿನಲ್ಲಿ ಗೋಮಾಳ ಜಾಗ ಒತ್ತುವರಿ ಮಾಡಿರುವವರ ವಿರುದ್ಧ ಕ್ರಮ ಕೈಗೊಂಡು ಒತ್ತುವರಿ ತೆರವು ಮಾಡುವಂತೆ ಮಂಗಳೂರು ತಾಪಂ ಸಭೆಯಲ್ಲಿ ಆಗ್ರಹಿಸಲಾಗಿದೆ.

ಮಂಗಳೂರು ತಾಪಂ ಅಧ್ಯಕ್ಷ ಮುಹಮ್ಮದ್ ಮೋನು ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಈ ಬಗ್ಗೆ ಒತ್ತಾಯ ಮಾಡಿದರು. ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಇದಕ್ಕೆ ಉತ್ತರಿಸಿ, ಗೋಮಾಳ ಜಾಗಗಳನ್ನು ಭೂದಾಖಲೆಗಳೊಂದಿಗೆ ಗುರುತಿಸಿ ಸರ್ವೇ ಮಾಡಲಾಗುವುದು. ಒತ್ತುವರಿ ಮಾಡಿಕೊಂಡವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಂಗಳೂರು ತಾಲೂಕಿನಿಂದ ವಿಭಜನೆಗೊಂಡು ನೂತನವಾಗಿ ರಚನೆವಾಗಿರುವ ಮೂಡುಬಿದಿರೆ ತಾಲೂಕಿಗೆ ರಾಜ್ಯ ಸರಕಾರದಿಂದ 10 ಕೋ.ರೂ. ಅನುದಾನ ಬಿಡುಗಡೆಯಾಗಿದೆ. ಮಂಗಳೂರು ತಾಪಂನಿಂದ 8 ಸದಸ್ಯರು ಹೊಸದಾಗಿ ರಚನೆಗೊಂಡಿರುವ ಮೂಡುಬಿದಿರೆ ತಾಲೂಕಿಗೆ ಸೇರ್ಪಡೆಯಾಗಿದ್ದಾರೆ ಎಂದು ಮುಹಮ್ಮದ್ ಮೋನು ತಿಳಿಸಿದರು.

ತಹಶೀಲ್ದಾರ್ ಮಾತನಾಡಿ ಗುರುಪುರದಲ್ಲಿ ಈ ಹಿಂದೆ ಗುಡ್ಡ ಕುಸಿತದಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಇಂತಹ ಈ ಘಟಣೆಯು ತಾಲೂಕು ವ್ಯಾಪ್ತಿಯಲ್ಲಿ ಮತ್ತೊಂದು ಬಾರಿ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ. ಗುಡ್ಡ ಕುಸಿತದ ಸ್ಥಳದಲ್ಲಿ 73 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದ್ದು, ಅವರಿಗೆ ಪತ್ರಿ ತಿಂಗಳು 2,500 ರೂ. ವನ್ನು ಬಾಡಿಗೆಗಾಗಿ ನೀಡಲಾಗುತ್ತಿದೆ. ತಾಲೂಕಿನ 3 ಕಡೆಯಲ್ಲಿ 69 ಮನೆ ಗಳನ್ನು ಅಪಾರ್ಟ್‌ಮೆಂಟ್ ರೂಪದಲ್ಲಿ ನಿರ್ಮಾಣ ಮಾಡಿಕೊಡಲಾಗುವುದು. ತಾಲೂಕು ವ್ಯಾಪ್ತಿಯಲ್ಲಿ ಎನ್‌ಐಟಿಕೆ ತಂಡವು ನಡೆಸಿದ ಸರ್ವೇ ಯಲ್ಲಿ ಸುಮರು 260 ಮನೆಗಳು ಅಪಾಯದ ಪ್ರದೇಶದಲ್ಲಿದ್ದು, ಅವುಗಳನ್ನು ಅದಷ್ಟು ಬೇಗನೆ ಸ್ಥಳಾಂತರ ಮಾಡುವುವಂತೆ ಸೂಚಿಸಲಾಗಿದೆ ಎಂದರು.

ಗಂಜಿಮಠ-ಕುಪ್ಪೆಪದವು ಜಿಲ್ಲಾ ಮುಖ್ಯ ರಸ್ತೆಯಲ್ಲಿ ಸೇತುವೆ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕೆಲವು ಪ್ರಗತಿಯಲ್ಲಿದ್ದು, ಆದಷ್ಟು ಬೇಗನೇ ಪೂರ್ಣಗೊಳ್ಳಲಿದೆ. ರಾಜೀವ ಗಾಂಧಿ ವಸತಿ ನಿಗಮದ ಮಾರ್ಗಸೂಚಿಯಂತೆ ಸಂಬಂಧಪಟ್ಟ ಗ್ರಾಪಂ ವ್ಯಾಪ್ತಿಯಲ್ಲಿರುವ ನಿವೇಶನವನ್ನು ಅದೇ ಗ್ರಾಮದ ಅರ್ಹ ಫಲಾನುಭವಿಗಳಿಗೆ ಮಾತ್ರ ಹಂಚಿಕೆ ಮಾಡಲಾಗುತ್ತದೆ. ಬೇರೆ ಗ್ರಾಪಂ ಫಲಾನುಭವಿಗಳಿಗೆ ಹಂಚಿಕೆ ಸಾಧ್ಯವಿಲ್ಲ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಪಿಂಚಣಿ ಫಲಾನುಭವಿಗಳಿಗೆ ವೇತನವನ್ನು ಆನ್‌ಲೈನ್ ಮೂಲಕ ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುವುದು. ಫಲಾನುಭವಿಗಳಿಗೆ ತಮ್ಮ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಕಚೇರಿಗೆ ಬರುವ ಅಗತ್ಯವಿಲ್ಲ. ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್‌ಗಳನ್ನು ವಾಟ್ಸ್‌ಆ್ಯಪ್ ಮುಖಾಂತರ ಕಳುಹಿಸಿ ಕೊಟ್ಟರೆ ಇಲಾಖೆಯಿಂದ ಲಿಂಕ್ ಮಾಡಿಕೊಡಲಾಗುವುದು. ಕೆಲವೊಂದು ಗ್ರಾಪಂಗಳ ಮಧ್ಯೆ ತಕರಾರು ಅರ್ಜಿಗಳು ಇವೆ. ಅವುಗಳನ್ನು ಅದಷ್ಟು ಬೇಗನೆ ಸರ್ವೇ ನಡೆಸಿ ಪರಿಹಾರ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಮಂಗಳೂರು ತಾಪಂ ಉಪಾಧ್ಯಕ್ಷೆ ಪೂರ್ಣಿಮಾ, ತಾಪಂ ಇಒ ಸದಾನಂದ,ತಾಪಂ ಸದಸ್ಯರು, ಆಯ್ದ ಗ್ರಾಪಂ ಅಧ್ಯಕ್ಷರು, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X