ಆನ್‍ಲೈನ್ ತರಗತಿಗೆ ಮೊಬೈಲ್ ಕೊಡಿಸಲಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಚಾಮರಾಜನಗರ, ಆ.18: ಆನ್ ಲೈನ್ ತರಗತಿಗೆ ಮೊಬೈಲ್ ಕೊಡಿಸಲಿಲ್ಲವೆಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸಾಗಡೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಾಜೇಶ್ ಎಂಬವರ ಮಗಳು ಹರ್ಷಿತಾ(15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಹರ್ಷಿತಾ ಗ್ರಾಮದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಆನ್ ಲೈನ್ ತರಗತಿಗೆ ಮೊಬೈಲ್ ಕೊಡಿಸಲು ಪಾಲಕರಲ್ಲಿ ತಿಳಿಸಿದ್ದಾಳೆ. ಈಕೆಯ ತಂದೆ ರಾಜೇಶ್ ಟೈಲರಿಂಗ್ ವೃತ್ತಿ ಮಾಡುತ್ತಿದ್ದು, ಹಣ ಬಂದಾಗ ಕೊಡಿಸುತ್ತೇನೆಂದು ಹೇಳಿದ್ದಾರೆ. ಇದೇ ವಿಷಯಕ್ಕೆ ಮನನೊಂದ ಬಾಲಕಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಮೃತದೇಹ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿದ್ದು, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





