ಕಾಸರಗೋಡು : ಇಬ್ಬರು ಯುವಕರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು : ಇಬ್ಬರು ಯುವಕರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾದ ಘಟನೆ ಕುಂಬಳೆ ಸಮೀಪ ನಡೆದಿದೆ.
ನಾಯ್ಕಾಪುವಿನ ರೋಶನ್ (21) ಮತ್ತು ಮಣಿಕಂಠ (19) ಎಂಬವರ ಮೃತದೇಹ ಕುಂಬಳೆ ಕೃಷ್ಣನಗರದ ಕಾಡಿನಲ್ಲಿ ಪತ್ತೆಯಾಗಿದೆ.
ಮಂಗಳವಾರ ಸಂಜೆಯಿಂದ ಇಬ್ಬರೂ ನಾಪತ್ತೆಯಾಗಿದ್ದರು. ಎರಡು ಮರಗಳಲ್ಲಿ ಇಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಂಬಳೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳ ಮಹಜರು ನಡೆಸಿದ್ದು, ಮ್ರತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ. ರೋಶನ್ ಮತ್ತು ಮಣಿಕಂಠ ಸ್ನೇಹಿತರಾಗಿದ್ದರು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story





