ಆ.20: ಉಡುಪಿ ಜಿಲ್ಲಾ ಕಾಂಗ್ರೆಸ್‌ನಿಂದ ‘ಜನಧ್ವನಿ’ ಪ್ರತಿಭಟನೆ
ಉಡುಪಿ, ಆ.19: ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆ.20ರಂದು ಬೆಳಗ್ಗೆ 10 ಕ್ಕೆ ಕಾಂಗ್ರೆಸ್ ಭವನದಲ್ಲಿ ರಾಜೀವ್‌ಗಾಂಧಿ ಹಾಗೂ ದೇವರಾಜ ಅರಸು ಜನ್ಮದಿನಾಚರಣೆ ಹಾಗೂ 11 ಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರದ ಜನವಿರೋಧಿ ನೀತಿಗಳಾದ ಎಪಿಎಂಸಿ ಕಾಯಿದೆ ತಿದ್ದುಪಡಿ ಮಸೂದೆ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮಸೂದೆ, ರೈತರೋಧಿ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ಹಾಗೂ ಕೊರೋನ ಉಪಕರಣಗಳ ಖರೀದಿಯಲ್ಲಿ ನಡೆದ ಭ್ರಷ್ಟಾಚಾರಗಳ ವಿರುದ್ಧ ಜನಧ್ವನಿ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾ ಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





