ಸಿಇಟಿ ಫಲಿತಾಂಶ ಆ.21ಕ್ಕೆ ಮುಂದೂಡಿಕೆ

ಬೆಂಗಳೂರು, ಆ.19: ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಆ.21ರಂದು ಪ್ರಕಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ), ಆ.21ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗುವ ಹಾಗೆ ಮಾಡಲಿದೆ ಎಂದು ತಿಳಿಸಿದರು.
http://karresults.nic.in ಈ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
Next Story





