ಆರೋಪಿಗಳು ಎಷ್ಟೇ ಪ್ರಭಾವಿಶಾಲಿಗಳಾಗಿದ್ದರೂ ಕಠಿಣ ಕ್ರಮ: ಕಮಲ್ ಪಂಥ್
ಕೆಜಿ ಹಳ್ಳಿ ಗಲಭೆ ಪ್ರಕರಣ
ಬೆಂಗಳೂರು, ಆ.19: ನಗರದ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಡೆದ ಗಲಭೆಗಳಲ್ಲಿ ತಪ್ಪಿತಸ್ಥರು ಎಷ್ಟೇ ಪ್ರಭಾವಿಶಾಲಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್‍ಪಂಥ್ ಹೇಳಿದ್ದಾರೆ.
ಬುಧವಾರ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣಗಳ ಬಗ್ಗೆ ಪರಿಶೀಲಿಸಿ ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಗಳ ತನಿಖೆ ಪ್ರಗತಿಯಲ್ಲಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ಮಾಡಲಾಗುತ್ತಿದೆ.
ತನಿಖೆ ಪ್ರಗತಿಯಲ್ಲಿರುವುದರಿಂದ ಹೆಚ್ಚಿನ ವಿಷಯ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.
Next Story





