Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 38 ಸಾರ್ವಜನಿಕ ರಂಗದ ಸಂಸ್ಥೆಗಳಿಂದ ‘ಪಿಎಂ...

38 ಸಾರ್ವಜನಿಕ ರಂಗದ ಸಂಸ್ಥೆಗಳಿಂದ ‘ಪಿಎಂ ಕೇರ್ಸ್‌’ ಗೆ 2105 ಕೋಟಿ ರೂ. ದೇಣಿಗೆ

ವಾರ್ತಾಭಾರತಿವಾರ್ತಾಭಾರತಿ19 Aug 2020 10:10 PM IST
share
38 ಸಾರ್ವಜನಿಕ ರಂಗದ ಸಂಸ್ಥೆಗಳಿಂದ ‘ಪಿಎಂ ಕೇರ್ಸ್‌’ ಗೆ 2105 ಕೋಟಿ ರೂ. ದೇಣಿಗೆ

ಹೊಸದಿಲ್ಲಿ,ಆ.19: ಕೋವಿಡ್-19 ಸಂತ್ರಸ್ತರ ನೆರವಾಗಿ ರೂಪಿಸಲಾಗಿರುವ ಪಿಎಂ-ಕೇರ್ಸ್‌ ನಿಧಿಗೆ ಈವರೆಗೆ ಸಾರ್ವಜನಿಕ ರಂಗದ ಸುಮಾರು 38 ಸಂಸ್ಥೆಗಳು ಒಟ್ಟು 2,105 ಕೋಟಿ ಹಣವನ್ನು ದೇಣಿಗೆಯಾಗಿ ನೀಡಿವೆಯೆಂದು ಆಂಗ್ಲದಿನಪತ್ರಿಕೆಯೊಂದು ತಿಳಿಸಿದೆ.

  ಮಾಹಿತಿಹಕ್ಕು ಕಾಯ್ದೆಯಡಿ ಪಡೆಯಲಾದ ಪತ್ರಿಕೆಗೆ ಈ ವಿಷಯ ಲಭ್ಯವಾಗಿದ್ದು ಅದು ತೈಲ ಹಾಗೂ ನೈಸರ್ಗಿಕ ಅನಿಲ ನಿಗಮ (ಓಎನ್‌ಜಿಸಿ), ಭಾರತೀಯ ರೈಲ್ವೆಯ ಆಹಾರ ಪೂರೈಕೆ ಹಾಗೂ ಪ್ರವಾಸೋದ್ಯಮ ನಿಗಮ (ಐಆರ್‌ಸಿಟಿಸಿ), ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ), ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್), ಆಯಿಲ್ ಇಂಡಿಯಾ ಹಾಗೂ ಕೋಲ್ ಇಂಡಿಯಾ ಪಿಎಂ-ಕೇರ್ಸ್‌ ನಿಧಿಗೆ ಗಣನೀಯ ಮೊತ್ತದ ಕೊಡುಗೆ ನೀಡಿರುವ ಸಾರ್ವಜನಿಕ ರಂಗದ ಕಂಪೆನಿಗಳಾಗಿವೆ.

ಆದಾಗ್ಯೂ ಕೇಂದ್ರ ಸರಕಾರವು ಪಿಎಂ ಕೇರ್ಸ್‌ ನಿಧಿ ಕುರಿತ ಯಾವುದೇ ಮಾಹಿತಿಯನ್ನು ನೀಡಲು ಪ್ರಧಾನಿ ಕಾರ್ಯಾಲಯವು ನಿರಾಕರಿಸುತ್ತಲೇ ಬಂದಿದೆ. ಪಿಎಂ ಕೇರ್ಸ್‌ ನಿಧಿಯು ‘ ಸಾರ್ವಜನಿಕ ಪ್ರಾಧಿಕಾರ’ ಅಲ್ಲವಾದ್ದರಿಂದ, ಅದು ಆರ್‌ಟಿಐ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲವೆಂದು ಪ್ರಧಾನಿ ಕಾರ್ಯಾಲಯ ಪ್ರತಿಪಾದಿಸುತ್ತಾ ಬಂದಿದೆ.ಆಗಸ್ಟ್ 13ರವರೆಗೆ ಪಿಎಂ-ಕೇರ್ಸ್‌ ನಿಧಿಗೆ ಸುಮಾರು 55 ಸಾರ್ವಜನಿಕರಂಗದ ಸಂಸ್ಥೆಗಳು ನೀಡಿದ ದೇಣಿಗೆಯ ಬಗ್ಗ ಮಾಹಿತಿ ಕೋರಿ ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಅರ್ಜಿ ಸಲ್ಲಿಸಿತ್ತಾದರೂ ಅದಕ್ಕೆ 38 ಕಂಪೆನಿಗಳಿಂದ ಮಾಹಿತಿ ಲಭ್ಯವಾಗಿದೆ.

ಸಾರ್ವಜನಿಕ ರಂಗದ ಸಂಸ್ಥೆಗಳ ಪೈಕಿ ಓಎನ್‌ಜಿಸಿಯು ಗರಿಷ್ಠ 300 ಕೋಟಿ ರೂ.ಗಳ ದೇಣಿಗೆ ನೀಡಿದೆ. ರಾಷ್ಟ್ರೀಯ ಉಷ್ಣ ವಿದ್ಯುತ್ ನಿಯಮಿತ (ಎನ್‌ಟಿಪಿಸಿ) 250 ಕೋಟಿ ರೂ.ಗಳ ದೇಣಿಗೆ ನೀಡಿದೆ. ಭಾರತೀಯ ತೈಲ ನಿಯಮಿತ (ಐಓಎಲ್) 225 ಕೋಟಿ ರೂ. ನೀಡಿದೆ. ಪವರ್ ಫೈನಾನ್ಸ್ ಕಾರ್ಪೋರೇಶನ್ ಹಾಗೂ ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ತಲಾ 200 ಕೋಟಿ ರೂ. ನೀಡಿವೆ.

  ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್), ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮ (ಎನ್‌ಎಂಡಿಸಿ), ಗ್ರಾಮೀಣ ವಿದ್ಯುದೀಕರಣ ನಿಗಮ(ಆರ್‌ಇಸಿ), ಭಾರತೀಯ ಪೆಟ್ರೋಲಿಯಂ ಕಾರ್ಪೊರೇಶನ್ ನಿಗಮ (ಬಿಪಿಸಿಎಲ್) ಹಾಗೂ ಕೋಲ್ ಇಂಡಿಯಾ, 100 ಕೋಟಿ ರೂ.ಗೂ ಅಧಿಕ ದೇಣಿಗೆ ನೀಡಿದ ಸಾರ್ವಜನಿಕರಂಗದ ಇತರ ಸಂಸ್ಥೆಗಳಾಗಿವೆ.

ಬಹುತೇಕ ಸಾರ್ವಜನಿಕರಂಗದ ಸಂಸ್ಥೆಗಳು 2019ರ-20ರ ಸಾಲಿನಲ್ಲಿ ಬಳಕೆಯಾಗದ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್) ನಿಧಿಯನ್ನು ಪಿಎಂ ಕೇರ್ಸ್‌ನಿಧಿಗೆ ದೇಣಿಗೆಯಾಗಿ ನೀಡಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ತಿಳಿಸಿದೆ.

ಇನ್ನು ಕೆಲವು ಸಂಸ್ಥೆಗಳು ಸಿಎಸ್‌ಆರ್ ನಿಧಿಗೆ 2020-21ರ ಸಾಲಿನ ಸಿಎಸ್‌ಆರ್ ನಿಧಿಯನ್ನು ಪಿಎಂಕೇರ್ಸ್‌ಗೆ ವರ್ಗಾಯಿಸಿವೆ.

ಓಎನ್‌ಜಿಸಿ ಹಾಗೂ ಎಚ್‌ಪಿಸಿಎಲ್ ಕಂಪೆನಿಗಳು 2020-21ರ ಸಾಲಿನ ಸಿಎಸ್‌ಆರ್ ಬಜೆಟ್‌ನಿಂದ, ಪಿಎಂ ಕೇರ್ಸ್‌ ನಿಧಿಗೆ ಹಣವನ್ನು ವರ್ಗಾಯಿಸಿರುವುದನ್ನು ಓಎನ್‌ಜಿಸಿ ಹಾಗೂ ಎಚ್‌ಪಿಸಿಎಲ್ ಒಪ್ಪಿಕೊಂಡಿರುವುದಾಗಿ ಆರ್‌ಟಿಐ ಅರ್ಜಿ ತಿಳಿಸಿದೆ. ಆದಾಗ್ಯೂ ಪಿಎಂ ಕೇರ್ಸ್‌ಗೆ ತಾವು ನೀಡಲಿರುವ ಒಟ್ಟಾರೆ ಅನುದಾನದ ಮೊತ್ತವನ್ನು ಇನ್ನೂ ಕೂಡ ನಿರ್ಧರಿಸಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X